Breaking News
Home / featured / ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

 

ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ ಧಾರ್ಮಿಕ ಹಾಗೂ ನೈತಿಕ ಮಾರ್ಗದರ್ಶನ ಮಾಡುವ ಸ್ಥಾನದಲ್ಲಿರುವ ಸ್ವಾಮೀಜಿಗಳು, ಬೇರೆಯವರಿಂದ ಹೇಳಿಸಿಕೊಳ್ಳು ವಂತಹ ಪರಿಸ್ಥಿತಿಯನ್ನು ತಾವೇ ತಂದುಕೊಳ್ಳುತ್ತಿರುವಂತಿದೆ.

ಸಮಾಜದಲ್ಲಿನ ಒಡಕುಗಳ ನಿವಾರಣೆಗೆ ಪೂರಕವಾಗಿ ಕೆಲಸ ಮಾಡಬೇಕಾದವರು, ಜಾತಿಗಳ ಹೆಸರಿನಲ್ಲಿ ಸಮಾಜದಲ್ಲಿರುವ ಒಡಕುಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ರೂಪಿಸಿರುವ ಮರಾಠಾ ಅಭಿವೃದ್ಧಿ ನಿಗಮ ಮತ್ತು ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮದ ಮಾದರಿಯಲ್ಲಿ ತಾವು ಪ್ರತಿನಿಧಿಸುವ ಜಾತಿಯ ಅಭಿವೃದ್ಧಿಗೂ ನಿಗಮ ಸ್ಥಾಪಿಸಬೇಕು ಎಂದು ಸರ್ಕಾರದ ಮುಂದೆ ಕೆಲವರು ಬೇಡಿಕೆ ಇರಿಸಿದ್ದಾರೆ. ಈ
ಪ್ರಯತ್ನದಲ್ಲಿ ಮುಖ್ಯಮಂತ್ರಿ ಮೇಲೆ ಬಹಿರಂಗವಾಗಿ ಒತ್ತಡ ಹೇರುವ ಹಾಗೂ ಸಮುದಾಯಗಳನ್ನು ಸಂಘಟಿಸಿ ಶಕ್ತಿ ಪ್ರದರ್ಶನ ಮಾಡುವ ತಂತ್ರಗಳಲ್ಲಿ ತೊಡಗಿದ್ದಾರೆ.

‘ನಿಮಗೇನೂ ಆಗದು, ಧೈರ್ಯದಿಂದ ಇರಿ’ ಎಂದು ಮುಖ್ಯಮಂತ್ರಿಯವರಿಗೆ ಅಭಯ ನೀಡಿರುವ ಸ್ವಾಮೀಜಿಯೊಬ್ಬರು, ನಿರ್ದಿಷ್ಟ ಸಮುದಾಯವೊಂದನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರ್ಪಡೆ ಮಾಡುವುದಕ್ಕಾಗಿ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಅಭಿಪ್ರಾಯವನ್ನು ಮತ್ತಿಬ್ಬರು ಸ್ವಾಮೀಜಿಗಳು ಅನುಮೋದಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ತಮ್ಮ ಜಾತಿಯ ಬಾಂಧವರನ್ನು ಸೇರಿಸುವಂತೆ ಒತ್ತಾಯಿಸಿ ಮತ್ತೊಬ್ಬ ಸ್ವಾಮೀಜಿಯೂ ಪಾದಯಾತ್ರೆಯ ಸಿದ್ಧತೆ ನಡೆಸಿದ್ದಾರೆ. ಜಾತಿಗಳ ಹೆಸರಿನಲ್ಲಿ ನಿಗಮಗಳನ್ನು ರಚಿಸುವುದು ಸರಿಯಲ್ಲ ಎಂದು ಸರ್ಕಾರಕ್ಕೆ ಕಿವಿಮಾತು ಹೇಳಬೇಕಿದ್ದ ಸ್ವಾಮೀಜಿಗಳು, ತಾವೇ ಮುಂದೆ ನಿಂತು ಜಾತಿ ಹೆಸರಿನಲ್ಲಿ ನಿಗಮಗಳ ರಚನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ.

ತಮ್ಮ ಸಮುದಾಯದವರಿಗೆ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವಂತೆ ಇಲ್ಲವೇ ಮಠಗಳಿಗೆ ಅನುದಾನ ನೀಡುವಂತೆ ಸರ್ಕಾರದ ಮೇಲೆ ಮಠಾಧೀಶರು ಒತ್ತಡ ಹೇರುವುದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಈಗ ಜಾತಿಗಳ ಹೆಸರಿನಲ್ಲಿ ನಿಗಮಗಳ ರಚನೆಗೆ ಸರ್ಕಾರ ಚಾಲನೆ ನೀಡಿದೆ. ಹಾಗಾಗಿ, ತಮ್ಮ ಸಮುದಾಯಕ್ಕೂ ನಿಗಮದ ಭಾಗ್ಯ ದೊರಕಿಸಿಕೊಡುವ ಕಾರ್ಯದಲ್ಲಿ ಸ್ವಾಮೀಜಿಗಳು ತೊಡಗಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ, ತಮ್ಮ ಸಮುದಾಯದ ಹಿತ ರಕ್ಷಿಸಿದ್ದಾರೆ ಎಂದು ಭಾವಿಸಿ ಅವರ ತಲೆಕಾಯುವ, ನಿರ್ಲಕ್ಷಿಸಿದ್ದಾರೆ ಎಂದು ಭಾವಿಸಿ ಅವರ ತಲೆದಂಡ ಕೇಳುವ ಮಾತನಾಡುತ್ತಿದ್ದಾರೆ. ಅಧಿಕಾರ ಸ್ಥಾನದ ಲಾಭಕ್ಕಾಗಿ ಬೆದರಿಕೆ ತಂತ್ರ ಬಳಸುವ ಹಾಗೂ ಚೌಕಾಸಿಯ ಮಾತುಗಳನ್ನು ಆಡುವ ಭಿನ್ನಮತೀಯ ಶಾಸಕರಿಗೂ ಸಮುದಾಯದ ಹಿತಾಸಕ್ತಿ ಹೆಸರಿನಲ್ಲಿ ಸರ್ಕಾರವನ್ನು ರಕ್ಷಿಸುವ ಇಲ್ಲವೇ ಬೆದರಿಕೆ ಒಡ್ಡುವಂತಹ ಸ್ವಾಮೀಜಿಗಳ ನಡವಳಿಕೆಗೂ ಹೆಚ್ಚಿನ ವ್ಯತ್ಯಾಸ ಇರುವಂತೆ ಕಾಣಿಸುವುದಿಲ್ಲ. ಲೌಕಿಕ ವ್ಯವಹಾರಗಳಿಂದ ದೂರವಿರುವ ಸಂಕಲ್ಪದಿಂದ ಕಾಷಾಯವಸ್ತ್ರ ತೊಟ್ಟಿರುವವರು ತಮ್ಮ ಸ್ಥಾನದ ಉದ್ದೇಶವನ್ನೇ ಮರೆತಿರುವಂತೆ ವರ್ತಿಸುತ್ತಿದ್ದಾರೆ. ಸಮುದಾಯದ ಮುಖಂಡರು ತಮ್ಮ ಸಮುದಾಯದ ಅಭಿವೃದ್ಧಿಗೆ ಸವಲತ್ತುಗಳನ್ನು ಕೇಳುವುದರಲ್ಲಿ ಅರ್ಥವಿದೆ.

ಆದರೆ ಮಠಾಧೀಶರು, ಧರ್ಮಗುರುಗಳೆಂದು ಗುರುತಿಸಿಕೊಂಡವರು ಒಟ್ಟಾರೆ ಸಮಾಜದ ಹಿತದ ಬಗ್ಗೆ ಯೋಚಿಸಬೇಕೇ ವಿನಾ ನಿರ್ದಿಷ್ಟ ಸಮುದಾಯಗಳ ರಕ್ಷಣೆಗೆ ನಿಲ್ಲಬಾರದು. ಯಾವುದೋ ಒಂದು ಜಾತಿಯ ಬಗ್ಗೆ ಮಾತ್ರ ಯೋಚಿಸುವವರು ಮಠದ ಗುರುಪೀಠ ಬಿಟ್ಟು ನೇರವಾಗಿ ರಾಜಕಾರಣಕ್ಕೆ ಬರಬಹುದು. ಕಾವಿ ಮತ್ತು ಖಾದಿಯ ನಡುವೆ ಬಹಳಷ್ಟು ವ್ಯತ್ಯಾಸವಿದೆ. ಇವೆರಡರಲ್ಲಿ ತಮ್ಮ ಆಯ್ಕೆ ಯಾವುದೆನ್ನುವುದನ್ನು ಆಯ್ದುಕೊಳ್ಳುವ ಸ್ವಾತಂತ್ರ್ಯ ಅವರಿಗಿದ್ದೇ ಇದೆ. ಕಾವಿ ಧರಿಸಿ, ಖಾದಿ ತೊಟ್ಟವರಂತೆ ವರ್ತಿಸುವ ಅನುಕೂಲಸಿಂಧು ಮನೋಧರ್ಮ ಸಮರ್ಥ
ನೀಯವಲ್ಲ. ಈ ದ್ವಿಪಾತ್ರ ಅಭಿನಯದಿಂದ ಯಾವ ಕ್ಷೇತ್ರಕ್ಕೂ ನ್ಯಾಯ ಸಲ್ಲಿಸಿದಂತಾಗುವುದಿಲ್ಲ. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರವು ಮತ್ತು ಆಡಳಿತದ ವಿಚಾರದಲ್ಲಿ ಧಾರ್ಮಿಕ ಸಂಸ್ಥೆಗಳು ಪರಸ್ಪರ ಹಸ್ತಕ್ಷೇಪ ಮಾಡದೆ, ಅಂತರ ಉಳಿಸಿಕೊಳ್ಳುವುದು ಉಭಯತ್ರರಿಗೂ ನಾಡಿಗೂ ಒಳ್ಳೆಯದು.

ಸುದ್ದಿಮೂಲ: ಪ್ರಜಾವಾಣಿ

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

  ‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

  ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …

ಲಿಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

  ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …

ಪತ್ರಕರ್ತ ಶಿವರಂಜನ್ ಸತ್ಯಂಪೇಟೆಗೆ ಪಿಎಚ್.ಡಿ.ಪದವಿ

  ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …

“ನಿಜ ಹೇಳದಿದ್ದರೂ ಪರವಾಗಿಲ್ಲ ಸುಳ್ಳು ಹೇಳಬೇಡಿ”

  ೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …

ಇತಿಹಾಸ ತಿರುಚುವ ರಂಭಾಪುರಿ ಶ್ರೀಗಳ ಕೃತ್ಯ ಖಂಡನೀಯ

ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …

Leave a Reply

Your email address will not be published. Required fields are marked *

error: Content is protected !!