Home / featured / ತಂದೆ ತಾಯಿಯ ಸೇವೆಯಿಂದ ಜೀವನ್ಮುಕ್ತಿ: ಬೈಲೂರು ನಿಜಗುಣಾನಂದ ಶ್ರೀಗಳು

ತಂದೆ ತಾಯಿಯ ಸೇವೆಯಿಂದ ಜೀವನ್ಮುಕ್ತಿ: ಬೈಲೂರು ನಿಜಗುಣಾನಂದ ಶ್ರೀಗಳು

 

ನೇಗಿನಹಾಳ: ಪ್ರಪಂಚದ ಇತಿಹಾಸದ ಪುಟಗಳಲ್ಲಿ ನೋಡಿದಾಗ ಕೆಟ್ಟ ಮಕ್ಕಳು ಜನಿಸಿರಬಹುದು ಆದರೆ ಕೆಟ್ಟ ತಂದೆ-ತಾಯಿಗಳು ಜನಿಸಲು ಸಾಧ್ಯವಿಲ್ಲ ಮಕ್ಕಳಾದವರು ವಯಸ್ಸಾದ ತಂದೆ-ತಾಯಿಗಳ ಮೇಲೆ ಪ್ರೀತಿ-ಪ್ರೇಮ, ತೋರುವ ಮೂಲಕ ಸೇವೆಯನ್ನು ಮಾಡಬೆಕೆಂದು ಬೈಲೂರು ಮುಂಡರಗಿ ತೋಂಟದಾರ್ಯ ಜಗದ್ಗುರು ನಿಜಗುಣಾನಂದ ಮಹಾಸ್ವಾಮಿಗಳು ಹೇಳಿದರು.


ಗ್ರಾಮದ ವಿಠ್ಠಲ-ರುಕ್ಮೀಣಿ ದೇವಸ್ಥಾನದಲ್ಲಿ ಸಂತ ಜ್ಞಾನದೇವ ಹಾಗೂ ತುಕಾರಾಮ ಮಹರಾಜರ ಮೂರ್ತಿ ಪ್ರತಿಷ್ಠಾಪನೆಯ ೫ನೆಯ ವಾರ್ಷೀಕೋತ್ಸದ ನಿಮಿತ್ತ ಆಯೋಜಿಸಿದ್ದ ಸಂತರ ಮಹಾತ್ಮೆ ಎಂಬ ಪ್ರವಚನ ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯ ವಹಿಸಿ ಮಾತನಾಡಿದರು. ಆದಿ ಜಗದ್ಗುರು ಶಂಕರಾಚಾರ್ಯರ ತಾಯಿ ಮರಣ ಹೊಂದಿದಾಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಯಿಯ ಮುಖ ನೋಡಬೇಕೆಂದು ಬಂದಾಗ ಅಲ್ಲಿದ್ದ ಸಮಾಜ ಭಾಂದವರು ನೀನು ಸನ್ಯಾಸತ್ವ ಸ್ವೀಕರಿಸಿದ್ದ ಕಾರಣ ಅಂತಸಂಸ್ಕಾರಕ್ಕೆ ಆಗಮಿಸಿದ್ದು ತಪ್ಪೆಂದು ಎಲ್ಲರೂ ದೂರಸರಿದು ಬಿಟ್ಟರು ಆಗ ನಾನು ಜಗತ್ತಿಗೆ ಗುರುವಾಗಿರಬಹುದು ಆದರೆ ನನ್ನ ತಾಯಿಗೆ ಮಗನೆಂದು ಹೇಳುತ್ತಾ ತನ್ನ ತಾಯಿಯನ್ನು ಅಂಗೈಯಲ್ಲಿ ಹೊತ್ತುಕೊಂಡು ನಡೆದು ಶವಸಂಸ್ಕಾರ ನೆರೆವೆರಿಸಿದರು. ಹೀಗಾಗಿ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ತನ್ನ ತಂದೆ-ತಾಯಿಗೆ ಮಗನೆ ಎಂಬುವುದನ್ನು ಅರಿತು ನಡೆಯಬೇಕೆಂದು ಹೇಳಿದರು.
ಪ್ರವಚನಕಾರ ಇಬ್ರಾಹಿಂ ಸುತಾರ ಮಾತನಾಡಿ ಸರ್ವಶ್ರೇಷ್ಠನಾದ ಪರಮಾತ್ಮ ಅರಿವಿನ ಮನುಷ್ಯ ಜನ್ಮವನ್ನು ನೀಡಿ ಆಯುಷ್ಯ, ಆರೋಗ್ಯ, ಭೋಗ ಭಾಗ್ಯಗಳ ನೀಡಿದ್ದಾನೆ ಹೀಗಾಗಿ ನಾವೆಲ್ಲರೂ ಶರಣರ, ಸಂತರ, ಮಹಾತ್ಮರ ಸ್ಮರಣೆಯನ್ನು ಮಾಡುವ ಮೂಲಕ ಉತ್ತಮ ಬದುಕು ನಮ್ಮದಾಗಿಸಿಕೊಳ್ಳಬೆಕೆಂದು ಹೇಳಿದರು.
ಜಗದ್ಗುರು ಮಡಿವಾಳೇಶ್ವರ ಶಿವಯೋಗಿಗಳ ಮಠದ ಬಸವ ಸಿದ್ಧಲಿಂಗ ಮಹಾಸ್ವಾಮಿಗಳು ಮಾತನಾಡಿ ಸಂತರ, ಶರಣರ ಮಹಾತ್ಮರ ಸಾಮಾಜಿಕ ಧಾರ್ಮಿಕ ಕೊಡುಗೆಗಳನ್ನು ಗುರುಗಳ ಮೂಲಕ ತಿಳಿದು ಸನ್ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ, ತಾ.ಪಂ ಸದಸ್ಯ ಮಡಿವಾಳಪ್ಪ ಕುಲ್ಲೋಳ್ಳಿ, ಬಸವರಾಜ ಕುಲ್ಲೋಳ್ಳಿ, ರುದ್ರಪ್ಪ ಬುಡ್ಡಪ್ಪನವರ, ಗೂಳಪ್ಪ ಶಿವನಾಯ್ಕರ, ಸಿದ್ದಪ್ಪ ಕಾರಿಮನಿ, ಭೀಮಪ್ಪ ಪಡದಪ್ಪನವರ, ಬಾಳಪ್ಪ ಕೊಡಿ, ಬಸಪ್ಪ ಬಜೇರಿ, ಗ್ರಾಮಸ್ಥರು ಉಪಸ್ಥಿತರಿದ್ದರು. ಗುಡಿ ಓಣಿಯ ಬಸವೇಶ್ವರ ಭಜನಾ ತಂಡದರು ವಚನ ಪ್ರಾರ್ಥನೆ ಸಲ್ಲಿಸಿದರು.
ಸತೀಶ ಕಾರಿಮನಿ ಸ್ವಾಗತಿಸಿದರು, ದೇಮಪ್ಪ ಪಡದಪ್ಪನವರ ನಿರೂಪಿಸಿದರು, ರಾಮಣ್ಣಾ ತೋರಣಗಟ್ಟಿ ವಂದಿಸಿದರು.

ನೇಗಿನಹಾಳ ಗ್ರಾಮದಲ್ಲಿ ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳು ಹಾಗೂ ಪ್ರವಚನಕಾರ ಇಬ್ರಾಹಿಂ ಸುತಾರ ಅವರಿಂದ ಲಿಂಗಾಯತ ದಿನದರ್ಶಿಕೆ ಬಿಡುಗಡೆ ನಡೆಯಿತು.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *