ಗ್ರಾ.ಪಂ. ಚುನಾವಣೆ ಅಭ್ಯರ್ಥಿಗಳಿಗೆ ಖಡಕ್ ಸೂಚನೆ
Shivanand
December 13, 2020
featured, General News
701 Views
ಬೆಂಗಳೂರು: ಗ್ರಾಮ ಪಂಜಾಯತಿ ಚುನಾವಣೆಗಳು ಪಕ್ಷಾತೀತವಾಗಿದ್ದು, ರಾಜಕೀಯ ಪಕ್ಷಗಳುಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವದನ್ನು ರಾಜ್ಯ ಚುನಾವಣಾ ಆಯೋಗವು ತಡೆಗೆ ಖಡಕ್ ಎಚ್ಚರಿಕೆ ನೀಡಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.
ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದಬಾವುಟ, ಬ್ಯಾನರ್ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹ0ಚುವುದು ಮಾಡುವಂತಿಲ್ಲ. 
ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್ಗಳು, ಬ್ಯಾನರ್ ಮತ್ತು ಬಂಟಿಂಗ್ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ಎಲ್ಲ ಎಚ್ಚರಿಕೆ ನೀಡಿದೆ.
ಅಲ್ಲದೇ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಯನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ತಿಳಿಸಿದ್ದು, ಈ ಮೇಲಿ ತಿಳಿಸಿರುವ ಪ್ರಕರಣಗಳು ಗ್ರಾಮ ಪಂಚಾಯತಿ ಚನಾವಣೆಯಲ್ಲಿ ಉಲ್ಲಂಘಟನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹವರ ವಿರುದ್ಧ ಕಟ್ಟುನಿಟ್ಟಿ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಆಧಿನ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ.
Check Also
‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …
ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …
ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …
ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …
ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …
ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …
ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …
ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …
ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …
ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …
ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …
ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …
ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …
೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …
ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …