Home / featured / ಮೊಟ್ಟೆ-ಮಾಂಸಕ್ಕಿಂತ ಕಡಲೆಕಾಯಿ ಹೆಚ್ಚು ಪ್ರಯೋಜನಕಾರಿ: ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ

ಮೊಟ್ಟೆ-ಮಾಂಸಕ್ಕಿಂತ ಕಡಲೆಕಾಯಿ ಹೆಚ್ಚು ಪ್ರಯೋಜನಕಾರಿ: ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ

ಮೊಟ್ಟೆಗಳನ್ನು ಪ್ರೋಟೀನ್ ಪೂರೈಸುವಿಕೆಗೆ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿಯೇ ಹೆಚ್ಚಿನ ವೈದ್ಯರು ಮಕ್ಕಳಲ್ಲಿ ತೂಕ ಹೆಚ್ಚಿಸಲು ಮೊಟ್ಟೆಗಳನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ಇದಲ್ಲದೆ, ಮಾಂಸಹಾರದಲ್ಲೂ ಸಾಕಷ್ಟು ಪ್ರೋಟೀನ್ ಕಂಡುಬರುತ್ತದೆ, ಆದರೆ ಕಡಲೆಕಾಯಿಯಲ್ಲಿ ಮೊಟ್ಟೆ ಮತ್ತು ಮಾಂಸಾಹಾರಕ್ಕಿಂತ ಅನೇಕ ಪಟ್ಟು ಹೆಚ್ಚು ಪ್ರೋಟೀನ್ ಮತ್ತು ಪೋಷಕಾಂಶಗಳಿವೆ. ಇದಲ್ಲದೆ, ಕಡಲೆಕಾಯಿ ತಿನ್ನುವುದು ದೇಹದಲ್ಲಿ ಸಾಕಷ್ಟು ಶಕ್ತಿಯನ್ನು ತರುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಿದ್ರೆ ಕಡಲೆಕಾಯಿಯ ವಿಶೇಷತೆಯ ಬಗ್ಗೆ ತಿಳಿದುಕೊಳ್ಳೋಣ.

ಕಡಲೆಕಾಯಿ ಗುಣಲಕ್ಷಣಗಳು: ಕಡಲೆಕಾಯಿಯಲ್ಲಿ ಮೊಟ್ಟೆ ಅಥವಾ ಮಾಂಸಕ್ಕಿಂತ ಎರಡು ಪಟ್ಟು ಹೆಚ್ಚು ಪ್ರೋಟೀನ್ ಇದೆ. ಕೆಲವು ಅಧ್ಯಯನಗಳ ಪ್ರಕಾರ, 100 ಗ್ರಾಂ ಹಸಿ ಕಡಲೆಕಾಯಿ ತಿನ್ನುವುದು 1 ಲೀಟರ್ ಹಾಲು ಕುಡಿಯುವುದಕ್ಕೆ ಸಮಾನವಾಗಿರುತ್ತದೆ. ಕೋಳಿ ಮತ್ತು ಕಡಲೆಕಾಯಿಯನ್ನು ಹೋಲಿಸಿದರೆ, 250 ಗ್ರಾಂ ಹುರಿದ ಕಡಲೆಕಾಯಿಯಲ್ಲಿ 250 ಗ್ರಾಂ ಕೋಳಿಗಿಂತ ಹೆಚ್ಚಿನ ಖನಿಜಾಂಶಗಳು ಮತ್ತು ಜೀವಸತ್ವಗಳಿವೆ. ಕಡಲೆಕಾಯಿಯಲ್ಲಿ ಸಮೃದ್ಧ ಖನಿಜಗಳು, ಜೀವಸತ್ವಗಳು ಮತ್ತು ಆಂಟಿ-ಆಕ್ಸಿಡೆಂಟ್‌ಗಳಿವೆ.

ಕಡಲೆಕಾಯಿ ಸ್ವತಃ ಪ್ರೋಟೀನ್‌ನ ಉತ್ತಮ ಮೂಲವಾಗಿದೆ, ಇದು ದೇಹದಲ್ಲಿನ ಹಾಲು ಮತ್ತು ತುಪ್ಪದ ಕೊರತೆಯನ್ನು ಸಹ ಪೂರೈಸುತ್ತದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಜನರು ಇದನ್ನು ತಿನ್ನುವುದರಿಂದ ಪ್ರಯೋಜನ ಪಡೆಯಬಹುದು.

ಕಡಲೆಕಾಯಿ ತಿನ್ನುವುದರಿಂದ ಸಿಗುವ ಪ್ರಯೋಜನಗಳು:

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ: ಕಡಲೆಕಾಯಿ ತಿನ್ನುವುದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇಲ್ಲಿ ನೆನಪಿಡಬೇಕಾದ ವಿಷಯ, ನಾವು ಮಾತನಾಡುತ್ತಿರುವುದು ಕಡಲೆಕಾಯಿ ಬಗ್ಗೆ, ಕಡಲೆಕಾಯಿ ಎಣ್ಣೆಯ ಬಗ್ಗೆ ಅಲ್ಲ. ಕಡಲೆಕಾಯಿ ಎಣ್ಣೆಯನ್ನು ಅಧಿಕವಾಗಿ ಸೇವಿಸಿದರೆ, ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚಾಗುವ ಸಾಧ್ಯತೆಯಿದೆ. ಕೆಲವು ಸಂಶೋಧನೆಗಳು ಕಡಲೆಕಾಯಿಯನ್ನು ವಾರದಲ್ಲಿ 5 ದಿನಗಳು ಸಣ್ಣ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿದೆ.ಶೀತಕ್ಕೆ ಪರಿಹಾರ: ಚಳಿಗಾಲವಾಗಲಿ, ಮಳೆಯಾಗಲಿ, ಬೆಲ್ಲದೊಂದಿಗೆ ಕಡಲೆಕಾಯಿಯನ್ನು ತಿನ್ನುವುದು ದೇಹವನ್ನು ಬೆಚ್ಚಗಿಡುತ್ತದೆ. ಇದು ಶೀತ ಮತ್ತು ನೆಗಡಿಯಿಂದ ರಕ್ಷಿಸುತ್ತದೆ.

ಜೀರ್ಣಕ್ರಿಯೆ ಉತ್ತಮ: ಊಟದ ನಂತರ, ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಕಡಲೆಕಾಯಿಯನ್ನು ತಿನ್ನಬಹುದು. ಕಡಲೆಕಾಯಿ ಧಾನ್ಯಗಳಲ್ಲಿ ಫೈಬರ್ ಕಂಡುಬರುತ್ತದೆ, ಇದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.

ಕಣ್ಣುಗಳಿಗೆ ಪರಿಣಾಮಕಾರಿ: ಕಡಲೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ . ಕಡಲೆಕಾಯಿಯಲ್ಲಿ ‘ಬೀಟಾ ಕ್ಯಾರೋಟಿನ್’ ಇದ್ದು, ಇದು ಕಣ್ಣುಗಳಿಗೆ ಒಳ್ಳೆಯದು. ಕಡಲೆಕಾಯಿಯನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸಿದರೆ, ಇದು ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.

ಕಡಲೆಕಾಯಿ ಒತ್ತಡವನ್ನು ನಿವಾರಿಸುತ್ತದೆ : ಕಡಲೆಕಾಯಿಯಲ್ಲಿ ಟೆಸ್ಟೋಫೆನ್ ಎಂಬ ಅಂಶವಿದೆ. ಇದು ವ್ಯಕ್ತಿಯ ಒತ್ತಡ ಕಡಿಮೆ ಮಾಡಿ, ನಿರಾಳತೆ ಅನುಭವಿಸಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯ: ಕಡಲೆಕಾಯಿಯಲ್ಲಿ ಒಮೆಗಾ -6 ಕೊಬ್ಬು ಸಮೃದ್ಧವಾಗಿದೆ, ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಇದು ಉತ್ತಮ ಕೋಶಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಎಲ್ಲಾ ಪ್ರೋಟೀನ್​ಗಳು, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಮುಖದ ಸುಕ್ಕುಗಳನ್ನು ಸಹ ತೆಗೆದುಹಾಕುತ್ತವೆ.

ರಕ್ತದಲ್ಲಿ ಸಕ್ಕರೆಯನ್ನು ನಿಯಂತ್ರಿಸಿ: ಕಡಲೆಕಾಯಿಯನ್ನು ಪ್ರತಿದಿನ ನೆನೆಸಿ ಸೇವಿಸುವ ಮೂಲಕ, ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು. ಮಧುಮೇಹ ರೋಗಿಗಳು ಪ್ರತಿದಿನ ನೆನೆಸಿದ ಕಡಲೆಕಾಯಿಯನ್ನು ಸೇವಿಸುವುದು ಉತ್ತಮ.

ಗರ್ಭಿಣಿ ಮಹಿಳೆಯರಿಗೆ ಪ್ರಯೋಜನಕಾರಿ: ಕಡಲೆಕಾಯಿ ಫೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಗರ್ಭಿಣಿ ಮಗುವಿನ ಬೆಳವಣಿಗೆಗೆ ಸಹಕಾರಿಯಾಗಿದೆ. ಅದಕ್ಕಾಗಿಯೇ ಗರ್ಭಿಣಿಯರು ಕಡಲೆಕಾಯಿಯನ್ನು ಕಡ್ಡಾಯವಾಗಿ ಸೇವಿಸಬೇಕು ಎಂದು ವೈದ್ಯರು ಶಿಫಾರಸ್ಸು ಮಾಡುತ್ತಾರೆ.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *