Home / featured / ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಅಧ್ಯಯನದ ಕೊರತೆಯಿದೆ: ಕೂಡಲಸಂಗಮ ಶ್ರೀಗಳು ಗರಂ

ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಅಧ್ಯಯನದ ಕೊರತೆಯಿದೆ: ಕೂಡಲಸಂಗಮ ಶ್ರೀಗಳು ಗರಂ

 

ಬೆಳಗಾವಿ: ಅಧ್ಯಯನದ ಕೊರತೆ ಮತ್ತು ತಪ್ಪು ಮಾಹಿತಿಯಿಂದ ಕೆಲವರು ಲಿಂಗಾಯತ ಧರ್ಮ ಹೋರಾಟವನ್ನು ವಿರೋಧಿಸುತ್ತಿದ್ದಾರೆ. ಅಂತವರು ವಚನ ಸಾಹಿತ್ಯವನ್ನು ಅಧ್ಯಯನ ಮಾಡಿ, ಈ ಧರ್ಮದ ನಿಜವಾದ ಸತ್ಯಾಸತ್ಯತೆ ಬಗ್ಗೆ ತಿಳಿದುಕೊಂಡು ಚರ್ಚೆ ಮಾಡಲಿ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಟಾಂಗ್ ಕೊಟ್ಟಿದ್ದಾರೆ.

ಇತ್ತಿಚೆಗೆ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತ್ಯೇಕ ಧರ್ಮದ ಹೋರಾಟದಲ್ಲಿ ನಾವು ಪಾಲ್ಗೊಳ್ಳಬಾರದಿತ್ತು. ಆ ಸಂಬಂಧ ನಾವು ಈಗಾಗಲೇ ಕ್ಷಮೆ ಕೇಳಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದಾರಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಉತ್ತರಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅದನ್ನು ಅವರನ್ನೆ ಕೇಳಿ, ಅವರಿಗೆ ಅಧ್ಯಯನದ ಕೊರತೆ ಇರಬಹುದು. ವಚನ ಸಾಹಿತ್ಯವನ್ನು ಅಧ್ಯಯನ ಮಾಡಿ, ಈ ಧರ್ಮದ ನಿಜವಾದ ಸತ್ಯಾಸತ್ಯತೆ ಬಗ್ಗೆ ತಿಳಿದುಕೊಂಡು ಬಂದು ಆಮೇಲೆ ಚರ್ಚೆ ಮಾಡಲಿ. 12ನೇ ಶತಮಾನದಲ್ಲಿ ಬಸವಣ್ಣನವರು ವೈದಿಕ ಧರ್ಮದ, ವರ್ಣಾಶ್ರಮದ ವಿರುದ್ಧ ಹುಟ್ಟಿಕೊಂಡತಹ ಧರ್ಮವೇ ಲಿಂಗಾಯತ ಧರ್ಮ. ಹೊಸ ಧರ್ಮ ಕಟ್ಟುತ್ತಿದ್ದಾರೆ ಎಂದು ಬಹಳಷ್ಟು ಜನರಿಗೆ ಗೊಂದಲವಾಗಿದೆ. ಆದ್ರೆ ನಾವು ಹೊಸ ಧರ್ಮ ಕೇಳುತ್ತಿಲ್ಲ. ನಮ್ಮ ಧರ್ಮ 900 ವರ್ಷಗಳ ಹಿಂದೆಯೇ ಸ್ಥಾಪನೆಯಾಗಿದೆ. ಹೀಗಾಗಿ ನಮ್ಮ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಒತ್ತಾಯಿಸುತ್ತಿದ್ದೇವೆ ಎಂದರು.

ಧರ್ಮ ಅಂತ ಬಂದರೆ ಲಿಂಗಾಯತ ಧರ್ಮ, ಸಮಾಜ ಅಂತಾ ಬಂದ್ರೆ ಪಂಚಮಸಾಲಿ ಸಮಾಜವಾಗಿದೆ. ಹೀಗಾಗಿ ದೇಶ ಮತ್ತು ರಾಜ್ಯ ಹೇಗೆ ಮುಖ್ಯವೋ ಅದೇ ರೀತಿ ನನಗೆ ಧರ್ಮ ಮತ್ತ ಸಮಾಜ ಮುಖ್ಯವಾಗಿದೆ. ಕೆಲವರು ಹೊಟ್ಟೆ ಕಿಚ್ಚಿನಿಂದ ನಮ್ಮ ಹೋರಾಟದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಟ್ಟಾರೆ ಲಿಂಗಾಯತ ಧರ್ಮ ವಿರೋಧಿಸುವವರಿಗೆ ಅಧ್ಯಯನದ ಕೊರತೆಯಿದೆ. ಮೊದಲು ವಚನ ಸಾಹಿತ್ಯ ಅಧ್ಯಯನ ಮಾಡಿ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಿವಿಮಾತು ಹೇಳುವ ಮೂಲಕ ಎಚ್ಚರಿಕೆ ಕೂಡ ಕೊಟ್ಟಿದ್ದಾರೆ.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *