Home / featured / 2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕಾರಣಿಕತ್ವ ಮತ್ತು ಸಂದೇಶಗಳಲ್ಲಿ ನಂಬಿಕೆಯಿಟ್ಟು ಜೀವನ ನಡೆಸಬೇಕು. ಶರಣರು ನಮಗಾಗಿ ಜೀವನ ಮೌಲ್ಯಗಳನ್ನು ಹೇಳಿಕೊಟ್ಟು ಅದರಂತೆ ನಡೆದು ತೋರಿಸಿಕೊಟ್ಟು ಹೋಗಿದ್ದಾರೆ. ಅವರ ಆಚಾರ, ವಿಚಾರಗಳು ನಮ್ಮಿಡಿ ಬದುಕನ್ನು ಬೆಳಗಿಸಬಲ್ಲವು. ಅಂಥ ಶರಣರ ಆಚರಣೆ, ವಿಚಾರ, ಪರಂಪರೆಯ ಇತಿಹಾಸ ಹೊಂದಿರುವ ಲಿಂಗಾಯತ ಕ್ರಾಂತಿ ಪತ್ರಿಕೆಯ 2021ರ ಲಿಂಗಾಯತ ದಿನದರ್ಶಿಕೆ ಒಳಗೊಂಡಿದೆ. ಇದನ್ನು ಪ್ರತಿ ಕುಟುಂಬಗಳು ಮನೆಯಲ್ಲಿ ಹಾಕಿಕೊಂಡು,ಅದನ್ನು ಅನುಸರಿಸಿ ತಮ್ಮ ಮನ, ಮನೆ ಬೆಳಗಿಕೊಳ್ಳಬೇಕೆಂದು ಬೆಳಗಾವಿ ವಿಶ್ವಗುರು ಬಸವ ಮಂಟಪದ ಸದ್ಗುರು ಪ್ರಭುಲಿಂಗ ಸ್ವಾಮಿಗಳು ಹೇಳಿದರು.

ಅವರು ಗಜೇಂದ್ರಗಡದ ಬಸವೇಶ್ವರ ನಗರದಲ್ಲಿ ಶುಕ್ರವಾರ ಸಂಜೆ ಯುವ ಬಸವ ಕೇಂದ್ರದ ವತಿಯಿಂದ ನಡೆದ ಲಿಂಗಾಯತ ಕ್ರಾಂತಿ ಪತ್ರಿಕೆಯ ‘ಲಿಂಗಾಯತ ದಿನದರ್ಶಿಕೆ’ ಬಿಡುಗಡೆ ಹಾಗೂ ಅನುಭಾವ ಗೋಷ್ಠಿ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.

ಧಾರ್ಮಿಕ ಮುಸಲ್ಮಾನರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ,ಬೌದ್ಧರಿಗೆ ಬುದ್ಧಗಯೆ ಧರ್ಮಕ್ಷೇತ್ರಗಳಾಗಿರುವಂತೆ ಲಿಂಗಾಯತ ಧರ್ಮಾನುಯಾಯಿಗಳಿಗೆ ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ, ತಪೋಸ್ಥಾನ, ವಿದ್ಯಾಭೂಮಿ ಕೂಡಲಸಂಗಮವೇ ಧರ್ಮಕ್ಷೇತ್ರವಾಗಿದೆ. ಇಂಥ ಸುಕ್ಷೇತ್ರದಲ್ಲಿ ಲಿಂಗಾಯತ ಧರ್ಮ ಸಂಸ್ಥಾಪನ ದಿನದಂಗವಾಗಿ ಇದೇ ಜನವರಿ 12ರಿಂದ 14ರ ಮೂರುದಿನಗಳ ಕಾಲ ಶರಣ ಮೇಳ ನಡೆಯುತ್ತಿದೆ. ಬಸವ ಧರ್ಮಾನುಯಾಯಿಗಳು ಹಾಗೂ ತತ್ವಾಭಿಮಾನಿಗಳು ಪವಿತ್ರ ಶರಣ ಮೇಳದಲ್ಲಿ ಎಲ್ಲರೂ ಸಹೋದರ ಭಾವನೆಯಿಂದ ಬಂದು ಭಾಗವಹಿಸಬೇಕೆಂದು ಮನವಿ ಮಾಡಿಕೊಳ್ಳುವೆ. ಮೇಳದಲ್ಲಿ ಸಾಮೂಹಿಕ ಪ್ರಾರ್ಥನೆ,ಇಷ್ಟಲಿಂಗ ಪೂಜೆ, ಗಣಲಿಂಗ ದರ್ಶನ, ಚಿಂತನ ಗೋಷ್ಠಿ, ಉಪನ್ಯಾಸ, ಧಾರ್ಮಿಕ ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳು ನಡೆಯುತ್ತವೆ. ಜ್ಞಾನ ದಾಸೋಹದೊಡನೆ ಅನ್ನ ದಾಸೋಹ ಸಹ ಅಚ್ಚುಕಟ್ಟಾಗಿರುತ್ತದೆ ಎಂದು ಪ್ರಭುಲಿಂಗ ಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ಗಜೇಂದ್ರಗಡ ತಾಲೂಕ ಪಂಚಾಯತ ಉಪಾಧ್ಯಕ್ಷ ಶರಣ ಶಶಿಧರ ಹೂಗಾರ ಅವರನ್ನು ಸತ್ಕರಿಸಲಾಯಿತು.

ವೇದಿಕೆ ಮೇಲೆ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕ ಸಂಚಾಲಕ ಗುರುಲಿಂಗಯ್ಯ ಓದಸುಮಠ, ಶರಣ ಸಾಹಿತಿ ಮಲ್ಲಿಕಾರ್ಜುನ ಕುಂಬಾರ, ಯುವ ಬಸವ ಕೇಂದ್ರದ ಕಾರ್ಯದರ್ಶಿ ಕೆ.ಎಸ್.ಸಾಲಿಮಠ, ಅಧ್ಯಕ್ಷ ಕುಮಾರ ಸಂಗಮದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಘು ಹೊಳಿಗಿ ನಿರೂಪಿಸಿದರೆ, ಬಿ,ಎಸ್.ಶೀಲವಂತರ ಪ್ರಾಸ್ಥಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಸಾಲಿಮಠ, ಸವಿತಾ ಅರಳಿ, ಬಸವರಾಜ ಅಂಗಡಿ, ಮಹಾಂತೇಶ ಕಡಗದ, ಸಾಗರ ವಾಲಿ, ಎಂ.ಎಸ್.ಹಡಪದ, ರವೀಂದ್ರ ಹೊನವಾಡ, ಮಂಜುನಾಥ ಹರಿಹರ, ಸುರೇಶ ಚೋಳಿನ, ಕಳಕಪ್ಪ ಪತಂಗರಾಯ, ಬಸವರಾಜ ಹೊಳಿ, ವೀರೇಶ ವಾಲಿ, ಮಾರುತಿ ಚಿಟಗಿ, ಶಿವು ಅರಳಿ, ರಾಜು ನಾವಡೆ, ಪುಷ್ಪಾ ನಂದಿಹಾಳ, ಶಶಿಕಲಾ ಹದರಿ, ಸುನಂದಾ ಹಾಳಕೇರಿಮಠ ಮತ್ತೀತರರು ಉಪಸ್ಥಿತರಿದ್ದರು.

ವರದಿ: ರವೀಂದ್ರ ಹೊನವಾಡ ಗಜೇಂದ್ರಗಢ

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *