Breaking News
Home / featured / ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

 

ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು
ತೋಂಟದಾರ್ಯ ಸಂಸ್ಥಾನ ಮಠ ಗದಗ

ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ ಬೆಳಗಿದ ಪುಣ್ಯಪುರುಷರಲ್ಲಿ ಶಿರಸಂಗಿ ಲಿಂಗರಾಜರು ಅಗ್ರಗಣ್ಯರು. ಶಿರಸಂಗಿ – ನವಲಗುಂದ ಸಂಸ್ಥಾನದ ಅಧಿಪತಿಯಾಗಿದ್ದ ಅವರು ಜನಕಲ್ಯಾಣದ ಕಾರ್ಯಗಳನ್ನು ಕೈಕೊಂಡು ಅತ್ಯಂತ ಜನಾನುರಾಗಿಯಾಗಿದ್ದರು.

ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಅವರು ವಸಂತದ ಗಾಳಿಯಂತೆ ಸುಳಿದು ಅಜ್ಞಾನ – ದಾರಿದ್ರದಲ್ಲಿ ಮೈಮರೆತು ಮಲಗಿದ್ದ ಸಮಾಜವನ್ನು ಎಚ್ಚರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅರಟಾಳ ರುದ್ರಗೌಡರು , ಗಿಲಗಂಚಿ ಗುರುಸಿದ್ಧಪ್ಪನವರು , ವಾರದ ಮಲ್ಲಪ್ಪನವರು ಹಾಗು ಹಳಕಟ್ಟಿ ಗುರುಬಸಪ್ಪನವರೇ ಮುಂತಾದ ಗಣ್ಯವ್ಯಕ್ತಿಗಳ ಹೆಗಲಿಗೆ ಹೆಗಲುಕೊಟ್ಟು ಸಮಾಜವನ್ನು ಮುನ್ನಡೆಸಿದ ಕೀರ್ತಿಶಾಲಿಗಳು ತ್ಯಾಗವೀರ ಶಿರಸಂಗಿ ಲಿಂಗರಾಜರು . ಇಂದಿನ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಮಡ್ಲಿ ಗೂಳಪ್ಪ ಹಾಗು ಎಲ್ಲಮ್ಮ ದಂಪತಿಗಳ ಸುಪುತ್ರನಾಗಿ ೧೮೬೧ ರ ಜನೇವರಿ ೧೦ ರಂದು ಜನಿಸಿದ ಲಿಂಗರಾಜರು ಶಿರಸಂಗಿ ಮತ್ತು ನವಲಗುಂದ ಸಂಸ್ಥಾನದ ದತ್ತುಪುತ್ರನಾದುದು ಯೋಗಾಯೋಗ, ಆಗ ಅವರಿಗೆ ಕೇವಲ ೧೧ ರ ಹರೆಯ ಕೊಲ್ಲಾಪುರದಲ್ಲಿದ್ದು ಪ್ರಾಥಮಿಕ ಇಂಗ್ಲೀಷ್ ಶಿಕ್ಷಣವನ್ನು ಪೂರ್ಣಗೊಳಿಸುವ ಪೂರ್ವದಲ್ಲಿಯೇ ದತ್ತು ತಾಯಿ ಗಂಗಾಬಾಯಿಯವರು ಲಿಂಗೈಕ್ಯರಾದುದು ಲಿಂಗರಾಜರಿಗೆ ಬರಸಿಡಿಲೆರಗಿದಂತಾಯಿತು.

ಆಗ ಶಿಕ್ಷಣವನ್ನು ಪೂರ್ಣಗೊಳಿಸುವುದೊತ್ತಟ್ಟಿಗಿರಲಿ ಇನ್ನೋರ್ವ ದತ್ತಕ ತಾಯಿ, ಉಮಾಬಾಯಿಯವರಿಂದ ಅನೇಕ ತೊಂದರೆಗಳನ್ನು ಲಿಂಗರಾಜರು ಎದುರಿಸಬೇಕಾಗಿ ಬಂದಿತು . ಕೋರ್ಟು ಕಚೇರಿಗಳಿಗೆ ಸುತ್ತಿ ಬೆಂದು ಬಸವಳಿದಿದ್ದ ಅವರಿಗೆ ಮುಂಬಯಿ ನ್ಯಾಯಾಲಯವು ಕ್ರಿ.ಶ ೧೮೮೧ ರಲ್ಲಿ ಶಿರಸಂಗಿ – ನವಲಗುಂದ ಸಂಸ್ಥಾನದ ನಿಜವಾರಸುದಾರರೆಂದು ತೀರ್ಪು ನೀಡಿದಾಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಕೋರ್ಟಿನಲ್ಲಿ ಡಾ . ಸಿದ್ಧರಾಮ ಸ್ವಾಮಿಗಳು ಜಯಶಾಲಿಯಾದ ನಂತರ ತನ್ನನ್ನು ಅತಿಯಾಗಿ ಕಾಡಿದ ದತ್ತು ತಾಯಿ ಉಮಾಬಾಯಿಯವರನ್ನೂ ಕೂಡ ಅತ್ಯಂತ ಗೌರವದಿಂದ ಕಂಡು ಅವರ ಯೋಗಕ್ಷೇಮವನ್ನು ನೋಡಿಕೊಂಡ ದಯಾರ್ದ್ರ ಹೃದಯಿಗಳು ಲಿಂಗರಾಜರು. ಕೋರ್ಟು – ಕಚೇರಿಗಳ ಗೊಂದಲದಲ್ಲಿ ಆರ್ಥಿಕವಾಗಿ ದಯನೀಯ ಸ್ಥಿತಿಗೆ ತಲುಪಿದ್ದ ಶಿರಸಂಗಿ ಸಂಸ್ಥಾನದ ಆದಾಯವನ್ನು ಹೆಚ್ಚಿಸುವಲ್ಲಿ ಲಿಂಗರಾಜರು ಬಹುವಾಗಿ ಶ್ರಮಿಸಿದರು.

ಆ ಕಾಲದಲ್ಲಿ ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅನುಸರಿಸುವ ಮೂಲಕ ಅವರು ಕೃಷಿ ಆದಾಯವನ್ನು ಹೆಚ್ಚಿಸುವುದಲ್ಲದೆ ಇತರ ರೈತರಿಗೆ ಮಾದರಿಯಾದರು. ಹಾಗೆಯೇ ಇದೇ ರೀತಿಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ಅವರು ರೈತರಿಗೆ ನೆರವಾದರು. ಕ್ರಿ , ಶ , ೧೮೯೬ ರಲ್ಲಿ ಮಳೆಯಾಗದೇ ಜನ ಕಂಗಾಲಾಗಿರುವುದನ್ನು ಗಮನಿಸಿದ ಅವರು ಮುಂದೆಯೂ ಜನರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಅಲ್ಲಲ್ಲಿ ಕೆರೆ ಕಾಲುವೆಗಳನ್ನು ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಟ್ಟರು. ನವಲಗುಂದ ಭಾಗದಲ್ಲಿ ಅವರು ಕಟ್ಟಿದ ಕೆರೆ ಕಾಲುವೆಗಳು ಇಂದಿಗೂ ಜನರ ಜೀವನಾಡಿಯಾಗಿರುವುದನ್ನು ಕಾಣಬಹುದಾಗಿದೆ. ಲಿಂಗರಾಜರ ಕೌಟುಂಬಿಕ ಜೀವನ ಸುಖಮಯವಾಗಿರಲಿಲ್ಲ. ಆದರೂ ಅದಕ್ಕಾಗಿ ಅವರೆಂದೂ ಚಿಂತಿಸಲಿಲ್ಲ. ಲಿಂ . ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ಮಾರ್ಗದರ್ಶನ ಹಾಗು ಅರಟಾಳ ರುದ್ರಗೌಡರ ಸಹಾಯ ಸಹಕಾರದಿಂದ ಜನಪರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಅವರ ಜನಪರ ಕಾಳಜಿ, ಸತ್ಯ, ನ್ಯಾಯ ಮತ್ತು ಪ್ರಾಮಾಣಿಕತೆಗಳು ಬ್ರಿಟಿಷ ಆಳರಸರ ಗಮನ ಸೆಳೆದವು. ಸರಕಾರ ಅವರಿಗೆ ವಿಶೇಷ ಗೌರವವನ್ನು ನೀಡಿ ಸನ್ಮಾನಿಸಿತು. ಇದಕ್ಕೆ ನಿದರ್ಶನವೆಂಬಂತೆ ಕ್ರಿ.ಶ. ೧೯೦೧ ರಲ್ಲಿ ಎಡ್ವರ್ಡ ಚಕ್ರವರ್ತಿಯ ಸಿಂಹಾಸನಾರೋಹಣದ ನಿಮಿತ್ತ ಜರುಗಿದ ಸಮಾರಂಭಕ್ಕೆ ಸರಕಾರದ ಪ್ರತಿನಿಧಿಯಾಗಿ ಲಿಂಗರಾಜರು ದಿಲ್ಲಿಗೆ ಹೋಗಿ ಬಂದರು. ಹಾಗೆಯೇ ಸರಕಾರದ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಸದಸ್ಯರಾಗಿ, ಅತಿಥಿಗಳಾಗಿ ಭಾಗವಹಿಸಿದ ಗೌರವಕ್ಕೆ ಅವರು ಪಾತ್ರರಾದರು.

ಲಿಂಗಾಯತ ಸಮಾಜದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಆ ಕಾಲದ ಹಿರಿಯರ ನೆರವಿನಿಂದ ಕ್ರಿ.ಶ ೧೯೦೪ ರಲ್ಲಿ ಲಿಂ, ಹಾನಗಲ್ಲ ಕುಮಾರ ಮಹಾಸ್ವಾಮಿಗಳು ಸ್ಥಾಪಿಸಿದ ಅಖಿಲ ಭಾರತ ವೀರಶೈವ ಮಹಾಸಭೆಯ ಪ್ರಥಮ ಅಧಿವೇಶನದ ಅಧ್ಯಕ್ಷರಾಗಿ ಲಿಂಗರಾಜರು ಮಾಡಿದ ಭಾಷಣವು ಇಡೀ ಸಮಾಜದ ಅಭಿವೃದ್ಧಿಯ ದಿಕ್ಕೂಚಿಯಾಗಿತ್ತು. ಬೆಂಗಳೂರಿನಲ್ಲಿ ಜರುಗಿದ ದ್ವಿತೀಯ ಅಧಿವೇಶನಕ್ಕೂ ಅವರೇ ಅಧ್ಯಕ್ಷರಾಗಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣಗಳಲ್ಲಿ ಶಿಕ್ಷಣ, ಕೃಷಿ, ಉದ್ಯೋಗ ಮುಂತಾದ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿದರು. ಹಾಗೆಯೇ ಬಾಲ್ಯವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಅನಿಷ್ಟಗಳನ್ನು ನಿವಾರಿಸಲು ಕರೆ ನೀಡಿದರು. ಅದರ ಪರಿಣಾಮವಾಗಿ ಸಮಾಜದಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿತು. ಅಲ್ಲಲ್ಲಿ ಶಾಲೆ – ಕಾಲೇಜುಗಳು, ಮಠ ಮಂದಿರಗಳಲ್ಲಿ ಪ್ರಸಾದ ನಿಲಯಗಳು ಪ್ರಾರಂಭಗೊಳ್ಳುವುದಕ್ಕೆ ಅವರ ಮಾತುಗಳು ಪ್ರೇರಕಶಕ್ತಿಯಾದವು . ಕ್ರಿ.ಶ. ೧೯೦೬ ರಲ್ಲಿ ಲಿಂಗರಾಜರ ಆರೋಗ್ಯದಲ್ಲಿ ಏರುಪೇರಾಗುತ್ತಿರುವುದನ್ನು ಗಮನಿಸಿದ ಅವರ ಅಭಿಮಾನಿಗಳು ದತ್ತಕ ಪುತ್ರನನ್ನು ತೆಗೆದುಕೊಂಡು ಸಂಸ್ಥಾನವನ್ನು ಮುಂದುವರೆಸಬೇಕೆಂದು ಸಲಹೆ ನೀಡಿದರು. ಆದರೆ ಅದಾಗಲೇ ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ಹಾಗು ಅರಟಾಳ ರುದ್ರಗೌಡರ ಮಾರ್ಗದರ್ಶನ ಪಡೆದ ಅವರು ಗುಪ್ತವಾಗಿ ಮೃತ್ಯು ಪತ್ರವನ್ನು ಬರೆದು ಬೆಳಗಾವಿಯ ಜಿಲ್ಲಾಧಿಕಾರಿಯ ಕೈಗಿತ್ತು ಕ್ರಿ.ಶ ೧೯೦೬ ರ ಅಗಸ್ಟ ೨೩ , ಗಣೇಶ ಚೌತಿಯಂದು ಲಿಂಗೈಕ್ಯರಾದರು .

ನವಲಗುಂದದಲ್ಲಿ ಅವರ ಸಮಾಧಿ ಕಾರ್ಯವನ್ನು ಪೂರೈಸಿದ ೨ ದಿನಗಳ ನಂತರ ಜಿಲ್ಲಾಧಿಕಾರಿಗಳು ಮೃತ್ಯುಪತ್ರವನ್ನು ಹೊರತೆಗೆದು ಓದಿದಾಗ ಅವರಿಗೆ ಆಶ್ಚರ್ಯ ಕಾದಿತ್ತು. ಲಿಂಗರಾಜರು ತಮ್ಮ ಸಂಸ್ಥಾನದ ಸಮಸ್ತ ಸ್ಥಾವರ ಮತ್ತು ಜಂಗಮ ಆಸ್ತಿಯನ್ನು ಸಮಾಜದ ಬಡಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಬಳಸಬೇಕೆಂದೂ, ಬೆಳಗಾವಿ ಜಿಲ್ಲಾಧಿಕಾರಿ [ ಕಲೆಕ್ಟರ್ ] ಯ ಅಧ್ಯಕ್ಷತೆಯಲ್ಲಿ ಟ್ರಸ್ಟ್ ಮಾಡಿ ಸಮಸ್ತ ಆಸ್ತಿಯನ್ನು ಅದರ ಅಧೀನಕ್ಕೆ ಒಳಪಡಿಸಬೇಕೆಂದೂ ಮೃತ್ಯುಪತ್ರದಲ್ಲಿ ಬರೆದಿದ್ದರು ಆಶೆ ಆಮಿಷಗಳಿಗಾಗಿ ಹೆಂಡರು ಮಕ್ಕಳಿಗಾಗಿ ಕುದಿವ ಕೋಟಿ ಕೋಟಿ ಜನರಿರುವ ಈ ಪ್ರಪಂಚದಲ್ಲಿ ಬಡಮಕ್ಕಳಲ್ಲಿ ಭಗವಂತನನ್ನು ಕಂಡ ಲಿಂಗರಾಜರಂಥ ತ್ಯಾಗಜೀವಿಗಳು ಅಪರೂಪವೆಂಬ ಮಾತು ಜಗತ್ತಿಗೆ ಗೋಚರಿಸಿತು . ಇಂತಹ ದಾನ ಪರಂಪರೆಗೆ ಕಾರಣರಾದ ಅವರು ಇತಿಹಾಸದಲ್ಲಿ ಅಮರರಾದರು ; ತ್ಯಾಗಿಗಳಲ್ಲಿಂ ವೀರರಾಗಿ ತ್ಯಾಗವೀರರೆನಿಸಿದರು.

ಶಿರಸಂಗಿ ಲಿಂಗರಾಜರು ಬರೆದಿಟ್ಟ ಈ ಮೃತ್ಯುಪತ್ರವನ್ನು ಪ್ರಶ್ನಿಸಿ ಅವರ ಧರ್ಮಪತ್ನಿ ಸುಂದರಾಬಾಯಿ ಅವರು ಹಾನಗಲ್ಲ ಕುಮಾರ ಸ್ವಾಮಿಗಳನ್ನು , ಅರಟಾಳ ರುದ್ರಗೌಡರನ್ನು ಹಾಗು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಎದುರು ಪಕ್ಷಗಾರರನ್ನಾಗಿಸಿ ನ್ಯಾಯಾಲಯದಲ್ಲಿ ವ್ಯಾಜ್ಯ ಹೂಡಿದರು . ಸತತ ೧೩ ವರ್ಷಗಳವರೆಗೆ ನಡೆದ ಈ ವ್ಯಾಜ್ಯವು ಕ್ರಿ. ಶ ೧೯೧೯ ರಲ್ಲಿ ಕೊನೆಗೊಂಡು ಲಿಂಗರಾಜರು ಬರೆದ ಮೃತ್ಯುಪತ್ರವು ನ್ಯಾಯಸಮ್ಮತವಾಗಿದೆ ಎಂಬ ನಿರ್ಣಯ ಹೊರಬಂದಿತು. ಅಂದಿನಿಂದ ಇಂದಿನವರೆಗೆ ಸಹಸ್ರ ಸಹಸ್ತೆ ಸಂಖ್ಯೆಯ ಬಡಮಕ್ಕಳು ಶಿರಸಂಗಿ ಟ್ರಸ್ಸಿನ ನೆರವಿನಿಂದ ಉನ್ನತ ಶಿಕ್ಷಣ ಪಡೆದಿದ್ದಾರೆ, ಪಡೆಯುತ್ತಿದ್ದಾರೆ . ಡಾ. ಡಿ.ಸಿ ಪಾವಟೆ, ಪ್ರೊ, ಶಿ. ಶಿ ಬಸವನಾಳ , ಪ್ರೊ, ಎಮ್.ಆರ್ ಸಾಖರೆ, ಡಾ.ಎಸ್.ಸಿ ನಂದೀಮಠ, ಡಾ. ಎಮ್.ಸಿ ಮೋದಿ ಅವರಂಥ ಗಣ್ಯಾತಿಗಣ್ಯರು ಉನ್ನತ ಶಿಕ್ಷಣ ಪಡೆಯುವಲ್ಲಿ ಶಿರಸಂಗಿ ಟ್ರಸ್ಟಿನ ಪಾತ್ರ ಗಮನಾರ್ಹವಾಗಿದೆ . ಇತ್ತೀಚೆಗೆ ಶತಮಾನೋತ್ಸವವನ್ನು ಆಚರಿಸಿಕೊಂಡ ಬೆಳಗಾವಿಂದು ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಾದಿಯಾಗಿ ಅನೇಕ ಶಿಕ್ಷಣ ಸಂಸ್ಥೆಗಳು ತ್ಯಾಗವೀರ ಲಿಂಗರಾಜರ ಹಾಗು ಯುಗಪುರುಷ ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ಸಹಾಯ – ಸಹಕಾರ, ಪ್ರೇರಣೆ ಪ್ರೋತ್ಸಾಹಗಳಿಂದ ಸ್ಥಾಪನೆಯಾಗಿರುವಲ್ಲಿ ಎರಡು ಮಾತಿಲ್ಲ. ಅವರು ಸಮಾಜದಲ್ಲಿ ಚಳುವಳಿಯೋಪಾದಿಯಲ್ಲಿ ನಡೆಸಿದ ವಿದ್ಯಾಭಿವೃದ್ಧಿಯ ಚಿಂತನ ಮಂಥನಗಳ ಪರಿಣಾಮವೇ ಅವುಗಳ ಸ್ಥಾಪನೆಗೆ ಬಲ ನೀಡಿತು. ಹೀಗೆ ಸಮಾಜಕ್ಕಾಗಿ, ವಿದ್ಯೆಯ ಅಭಿವೃದ್ಧಿಗಾಗಿ ಸರ್ವಸ್ವವನ್ನು ತ್ಯಾಗಮಾಡಿದ ಶಿರಸಂಗಿಯ ಲಿಂಗರಾಜರು ಸದಾ ಸ್ಮರಣೀಯರಾಗಿದ್ದಾರೆ. “ ನಿಮ್ಮ ನೆನಪಾದಾಗಲೇ ಉದಯ , ಮರೆದಾಗಲೇ ಅಸ್ತಮಾನ ‘ ಎನ್ನುವಂತೆ ಇಂತಹ ಪುಣ್ಯಪುರುಷರನ್ನು ಸದಾ ಸ್ಮರಿಸುವುದೇ ಸಮಾಜದ ಭಾಗ್ಯೋದಯವಾಗಿದೆ .

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

  ‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …

ಲಿಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

  ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …

ಪತ್ರಕರ್ತ ಶಿವರಂಜನ್ ಸತ್ಯಂಪೇಟೆಗೆ ಪಿಎಚ್.ಡಿ.ಪದವಿ

  ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …

“ನಿಜ ಹೇಳದಿದ್ದರೂ ಪರವಾಗಿಲ್ಲ ಸುಳ್ಳು ಹೇಳಬೇಡಿ”

  ೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …

ಇತಿಹಾಸ ತಿರುಚುವ ರಂಭಾಪುರಿ ಶ್ರೀಗಳ ಕೃತ್ಯ ಖಂಡನೀಯ

ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …

ಇಳಕಲ್ ಗುರುಮಹಾಂತ ಶ್ರೀಗಳಿಗೆ ‘ಸಂಯಮ ಪ್ರಶಸ್ತಿ’ ಪ್ರದಾನ

  ಬಾಗಲಕೋಟೆ: ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ …

Leave a Reply

Your email address will not be published. Required fields are marked *

error: Content is protected !!