Home / featured / ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

 

ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ’ ಎಂದು ಹಾಕಿರುವದು ಬಸವಾದಿ ಶರಣರಿಗೆ ಮಾಡಿದ ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ದೂರಿದ್ದಾರೆ.

ಈಗ ನಿರ್ಮಾಣವಾಗುತ್ತಿರುವದು ಶರಣರ ಪ್ರಗತಿಪರ ಚಿಂತನೆಯ ಮರುಹುಟ್ಟೇ ಅನುಭವ ಮಂಟಪ. ಈ ಕುರಿತು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವಾರು ಶ್ರೀಗಳು ಮತ್ತು ಬಸವ ಪರಂಪರೆಯವರು ಹೇಳಿರುವದು ಅಕ್ಷರಶಃ ಸತ್ಯ, ಅನುಭವ ಮಂಟಪ ಸನಾತನಿಗಳ ಆಡಳಿತಕ್ಕೆ ಸಿಕ್ಕರೆ ಬಸವಾದಿ ಶಿವಶರಣರ ಸಮಾಜದ ಉದ್ಧಾರಕ್ಕಾಗಿ ಮಾಡಿದ ಧಾರ್ಮಿಕ ಚಿಂತನೆ ಹಿಸುಕಿ ಮತ್ತೆ ಪುರೋಹಿತ ಪರಂಪರೆ ಬೆಳೆಸಿದಂತೆ ಆಗುತ್ತದೆ ಎಂದು ಹೇಳಿದ್ದಾರೆ. ಹಿರಿಯರಾದ ಗೊ.ರು. ಚನ್ನಬಸಪ್ಪನವರು ಸಹ ಸನಾತನ ಎಂಬ ಪದ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಂತಹ ದೋಷಗಳು ಮುಂದೆ ಆಗದಂತೆ ಬಸವ ಅನುಯಾಯಿಗಳು ಜಾಗರೂಕರಾಗಿರಬೇಕು. ಸರ್ಕಾರ ಸಹ ಶರಣರ ಆಚಾರ ವಿಚಾರಗಳಿಗೆ ಚ್ಯುತಿ ಬಾರದಂತೆ ಎಚ್ಚರವಹಿಸುವದು ಒಳಿತು. ಸನಾತನ ಮತ್ತು ಪ್ರಗತಿಪರ ಪರಸ್ಪರ ವಿರುದ್ದ ಶಬ್ದಗಳು ಶರಣರದು ನಡೆ, ನುಡಿ ಒಂದಾದ ಪ್ರಾಯೋಗಿಕ ಮತ್ತು ವೈಚಾರಿಕ ಧರ್ಮ, ಶರಣರ ಹೋರಾಟ ಸನಾತನ ಪರಂಪರೆಗಳ ವಿರುದ್ಧವಾಗಿದೆ. ಶರಣರು ವೇದ, ಶಾಸ್ತ್ರ, ಪುರಾಣ, ಆಗಮಳ ವಿರುದ್ಧ ಧ್ವನಿ ಈ ವಚನಗಳಲ್ಲಿ ಕಾಣಬಹುದು. ಸನಾತನ ಪರಂಪರೆಯವರೇ ಕಲ್ಯಾಣದಲ್ಲಿ ರಕ್ತಕ್ರಾಂತಿಯ ಬೀಜ ಬಿತ್ತಿ ವಚನ ಸಾಹಿತ್ಯ ಭಸ್ಮ ಮಾಡಲು ಮುಂದಾಗಿದ್ದರು. ಈ ವಿಷಯ ಎಲ್ಲ ಬಸವಾಭಿಮಾನಿಗಳು ಮನಗಂಡು ಮುಂಬರುವ ದಿನಗಳಲ್ಲಿ ನಿರ್ಮಾಣವಾಗುವ ಅನುಭವ ಮಂಟಪವನ್ನು ಸನಾತನವಾದಿಗಳಿಂದ ಮುಕ್ತಗೊಳಿಸಬೇಕು ಎಂದಿದ್ದಾರೆ.

ಕೆಲವೇ ಸನಾತನವಾದಿಗಳ ಮಾತು ಕೇಳಿ, ಸರ್ಕಾರ ಈ ರೀತಿ ತಪ್ಪು ಮಾಡುವದು ಸರಿಯಲ್ಲ. ಇದರಲ್ಲಿ ಸಾಕಷ್ಟು ಜಾತಿ, ಮತ ಪಂಥ ಎದ್ದು ತೋರಿಸುವ ಸನಾತನವಾದಿಗಳ ಮೂಲ ಉದ್ದೇಶವೇ ಇದಾಗಿದೆ. ಅದಕ್ಕೆ ಸರ್ಕಾರ ಬಲಿ ಬೀಳಬಾರದು. ಈಗಲಾದರೂ ಅದನ್ನು ಸರಿಪಡಿಸಿಕೊಳ್ಳದಿದ್ದರೆ ರಾಜ್ಯದಲ್ಲಿ ಅಶಾಂತಿ ಹುಟ್ಟಬಹುದೆಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಲಿ.

ನೂತನ ಅನುಭವ ಮಂಟಪ ರೂಪುರೇಷೆ ತಯಾರಿಕೆಯ ತಜ್ಞರ ಸಲಹಾ ಸಮಿತಿಯ ಗೊ.ರು.ಚನ್ನಬಸಪ್ಪನವರು ಸಹ ನಿಮ್ಮ ಎದುರಿನಲ್ಲಿಯೇ ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ನಿಮ್ಮ ಅಭಿಪ್ರಾಯ ಈಗಲಾದರೂ ವ್ಯಕ್ತಪಡಿಸಬೇಕು ಬಸವರಾಜ ಹೊರಟ್ಟಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *