Home / featured / ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

 

‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ

ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು ಸರ್ಕಾರ ಪತ್ರಿಕೆಗಳಿಗೆ ಕೊಟ್ಟ ಜಾಹೀರಾತಿಗೆ ‘ಸನಾತನ ಪ್ರಗತಿ ಪರ ಚಿಂತನೆಗಳ ಮರು ಸೃಷ್ಟಿ’ ಎನ್ನುವ ಶೀರ್ಷಿಕೆ ನೀಡಿರುವುದಕ್ಕೆ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅನುಭವ ಮಂಟಪವು ಶರಣರ ಪ್ರಗತಿಪರ ಚಿಂತನೆಗಳ ಮರು ಸೃಷ್ಟಿ ಆಗಲಿದೆಯೇ ಹೊರತು ಸನಾತನ ಪ್ರಗತಿಪರ ಚಿಂತನೆಗಳ ಮರು ಸೃಷ್ಟಿ ಅಲ್ಲ ಎಂದು ಹೇಳಿದ್ದಾರೆ.

ಬಸವಣ್ಣನವರು 12ನೇ ಶತಮಾನದಲ್ಲಿ ಸನಾತನ ಪರಂಪರೆ ವಿರುದ್ಧ ಸಿಡಿದೆದ್ದು ನವೀನ ಶರಣ ಪರಂಪರೆ ಹುಟ್ಟು ಹಾಕಿದ್ದರು. ಅವರ ವಿಚಾರಧಾರೆಗಳು ಸನಾತನ ಪರಂಪರೆಯ ವಿರುದ್ಧವಾಗಿ ದ್ದವು. ಹೀಗಾಗಿ ಶರಣರ ಪ್ರಗತಿಪರ ಚಿಂತನೆಗಳನ್ನು ಸನಾತನ ಪ್ರಗತಿ ಪರ ಚಿಂತನೆಗಳೆಂದು ಬಿಂಬಿಸಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಬಸವಣ್ಣನವರ ಹಾಗೆ ವಿಶ್ವಮಾನ್ಯವಾದ ಪ್ರಗತಿ ಪರ ವಿಚಾರಧಾರೆಗಳನ್ನು ಹಿಂದೆ ಯಾರೂ ಮಂಡಿಸಿರಲಿಲ್ಲ. ಅದಕ್ಕಾಗಿಯೇ ಅಂದಿನ ಕಾಲಮಾನದಲ್ಲಿ ಅವರ ವಿಚಾರಧಾರೆಗಳನ್ನು ಒಪ್ಪಿಕೊಂಡು, ದೇಶದ ನಾನಾ ಭಾಗಗಳ ಎಲ್ಲ ಜಾತಿ, ಮತ, ಪಂಥಗಳ ಜನ ಬಸವಕಲ್ಯಾಣದತ್ತ ಮುಖ ಮಾಡಿದರು. ಆಗ ಹೊಸ ಪರಂಪರೆಯೇ ಉದಯಿಸಿತು. ಅದುವೇ ಬಸವ ಪರಂಪರೆ, ಶರಣ ಪರಂಪರೆ ಹಾಗೂ ವಚನ ಪರಂಪರೆ ಎಂದಿದ್ದಾರೆ.

ಬಸವಾದಿ ಶರಣರು ಎಂದೆಂದಿಗೂ ಪ್ರಸ್ತುತವಾದ ವಿಶಿಷ್ಟ ಮೌಲ್ಯಗಳನ್ನು ಜಗತ್ತಿಗೆ ಕೊಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿ ಇದ್ದ ಮೌಢ್ಯವನ್ನು ಕಿತ್ತೊಗೆದು ಹೊಸ ವ್ಯಕ್ತಿ ಹಾಗೂ ಸಮಾಜ ನಿರ್ಮಾಣ ಮಾಡಿದ್ದರು. ಅವರದ್ದು ಸರ್ವರಿಗೂ ಸಮಾನ ಹಕ್ಕು ನೀಡಿದ, ಸ್ತ್ರೀ ಸ್ವಾತಂತ್ರ್ಯ ಕಲ್ಪಿಸಿದ, ವೃತ್ತಿ, ಮಾನವ ಘನತೆ ಎತ್ತಿ ಹಿಡಿದ ಹಾಗೂ ಹೊಸ ವೈಚಾರಿಕತೆ ಬಿತ್ತಿದ ಪರಂಪರೆ ಎಂದು ಹೇಳಿದ್ದಾರೆ.

ಶರಣ ಪರಂಪರೆಗೆ ಸನಾತನ ದೊಂದಿಗೆ ಥಳಕು ಹಾಕುವುದನ್ನು ಒಪ್ಪಲಾಗದು. ತತ್ವಕ್ಕೆ ಚ್ಯುತಿ ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನೂತನ ಅನುಭವ ಮಂಟಪವು ಶರಣ ಪರಂಪರೆಯನ್ನು ಪ್ರತಿನಿಧಿಸುವ ಸ್ಮಾರಕವಾಗಲಿರುವ ಕಾರಣ ಶರಣ ಪರಂಪರೆಗೆ ಅನುಗುಣವಾಗಿಯೇ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಭಿನಂದನಾರ್ಹ ಕಾರ್ಯ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹500 ಕೋಟಿ ಅನುದಾನ ಘೋಷಿಸಿ, ನೂತನ ಅನುಭವ ಮಂಟಪಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಸವ ಭಕ್ತರ ಬಹುದಿನಗಳ ಬೇಡಿಕೆ ಈಡೇರಿಸಿದ ಅವರ ಕಾರ್ಯ ಅಭಿನಂದ ನಾರ್ಹವಾಗಿದೆ ಎಂದು ಹೇಳಿದ್ದಾರೆ.

ಸುದ್ದಿಮೂಲ: ಪ್ರಜಾವಾಣಿ

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *