Breaking News
Home / featured / ತರಳಬಾಳು ಹುಣ್ಣಿಮೆ ಮಹೋತ್ಸವ ಅಂತರ್ಜಾಲದಲ್ಲಿ ಆಚರಿಸಲು ತರಳಬಾಳು ಶ್ರೀ ಜಗದ್ಗುರುಗಳವರ ಸಂಕಲ್ಪ

ತರಳಬಾಳು ಹುಣ್ಣಿಮೆ ಮಹೋತ್ಸವ ಅಂತರ್ಜಾಲದಲ್ಲಿ ಆಚರಿಸಲು ತರಳಬಾಳು ಶ್ರೀ ಜಗದ್ಗುರುಗಳವರ ಸಂಕಲ್ಪ

 

ಕೊರೊನಾ ಸಂಕಷ್ಟದ ಕಾರಣದಿಂದ ಕೊಟ್ಟೂರು ತರಳಬಾಳು ಹುಣ್ಣಿಮೆ ಮಹೋತ್ಸವ ಮುಂದೂಡಿಕೆ

ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರು

ಲಕ್ಷಾಂತರ ಭಕ್ತಾದಿಗಳ ಜಮಾವಣೆಯಲ್ಲಿ ವೈಭವದಿಂದ ನಾಡಿನ ಒಳ ಒರಗೆ ನಡೆಯುವ
ಭಾವೈಕ್ಯತಾ ಪರಿಷತ್, ಚಲಿಸುವ ವಿಶ್ವ ವಿದ್ಯಾಲಯ,ಜ್ಞಾನ ದಾಸೋಹ ಕಾರ್ಯಕ್ರಮ ಎಂದೇ ಜನಮನದಲ್ಲಿ ಹೆಸರಾಗಿ ನಾಡಿನ ಎಲ್ಲಾ ಧಾರ್ಮಿಕ ಸಮಾರಂಭಗಳಿಗೆ ಮಾತೃ ಸಮಾರಂಭವಾಗಿ ಸರ್ವಜನಾಧರಣೆಯ ಸಮಾರಂಭವಾಗಿ ಈ ವರ್ಷ ಬಳ್ಳಾರಿ ಜಿಲ್ಲೆಯ ಕೊಟ್ಟರೂ ಪಟ್ಟಣದಲ್ಲಿ ನಡೆಯಲಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ, ಈ ವರ್ಷ ಅಂತರ್ಜಾಲದ ಮುಖಾಂತರ ಆಚರಿಸುವುದಾಗಿ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ತೀರ್ಮಾನಿಸಿದ್ದಾರೆ.

ಶ್ರೀ ತರಳಬಾಳು ಜಗದ್ಗುರು ಬೃಹನ್ನಠವು ಕಳೆದ 70 ವರ್ಷಗಳಿಂದ ನಾಡಿನ ಒಳ- ಹೊರಗೆ ನಡೆಸಿಕೊಂಡು ಬಂದಿರುವ ವಾರ್ಷಿಕ ಸಮಾರಂಭ “ತರಳಬಾಳು ಹುಣ್ಣಿಮೆ ಮಹೋತ್ಸವ” ಒಂದು ನಾಡಹಬ್ಬವಾಗಿ ಸರ್ವಜನಾದರಣೆಯನ್ನು ಗಳಿಸಿದೆ. ಸಂಕುಚಿತ ಬುದ್ಧಿಯ ಮೂಲಭೂತವಾದಿಗಳ ಕೋಲಾಹಲದಿಂದಾಗಿ ವಿವಿಧ ಧರ್ಮಗಳ ಮಧ್ಯೆ ಸಂಶಯದ ಅಡ್ಡಗೋಡೆಗಳು ನಿರ್ಮಾಣವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಜಾತಿ- ಮತ, ಪ್ರಾಂತ್ಯ- ಪ್ರದೇಶಗಳ ಭೇದವಿಲ್ಲದೆ ಎಲ್ಲರನ್ನೂ ಸದ್ಧರ್ಮದ ಬೆಸುಗೆಯಲ್ಲಿ ಒಗ್ಗೂಡಿಸುವ ಭಾವೈಕ್ಯ ಸಂಗಮವಾದ ಈ ಮಹೋತ್ಸವದ ‘ಮಹಾವೇದಿಕೆ’ ಒಂದು ಆಶಾಕಿರಣವಾಗಿದೆ.

12ನೆಯ ಶತಮಾನದ ಬಸವಾದಿ ಶಿವಶರಣರ ಹಿರಿಯ ಸಮಕಾಲೀನರಾದ ವಿಶ್ವಬಂಧು ಮರುಳಸಿದ್ಧರು ಅಂದಿನ ಸಮಾಜವನ್ನು ಪಟ್ಟಭದ್ರ ಹಿತಾಸಕ್ತಿಗಳ ಶೋಷಣೆಯ ಕಬಂಧಬಾಹುಗಳಿಂದ ರಕ್ಷಿಸಲು ಆಜೀವಪರ್ಯಂತ ಹೋರಾಡಿದರು. ಧರ್ಮದ ತಳಹದಿಯ ಮೇಲೆ ಮಾನವ ಮಾನವರ ಮಧ್ಯೆ ತರತಮ ಭಾವವಿಲ್ಲದೆ ನವ ಸಮಾಜವನ್ನು
ನಿರ್ಮಿಸಿ, ಸದ್ಧರ್ಮ ಪೀಠವನ್ನು ಸ್ಥಾಪಿಸಿದರು. ಮಾಘ ಶುದ್ಧ ಪೂರ್ಣಿಮೆಯಂದು ತಮ್ಮ ಶಿಷ್ಯ ತೆಲಗುಬಾಳು ಸಿದ್ಧನನ್ನು ಸದ್ಧರ್ಮ ಪೀಠದಲ್ಲಿ ಕುಳ್ಳಿರಿಸಿ ‘ತರಳಾ, ಬಾಳು’ ಎಂದು ಹರಸಿದರು. “ತರಳಾ, ಬಾಳು” ಎಂಬ ಪಂಚಾಕ್ಷರಿ ಮಂತ್ರದಲ್ಲಿ ಮಾನವ ಕುಲದ ಅಭ್ಯುದಯವೇ ಅಡಕವಾಗಿದೆ. ಈ ಆಶೀರ್ವಾದದ ಪರಂಪರೆಯಲ್ಲಿ ಸಾಗಿ ಬಂದ ಸದ್ಧರ್ಮ ಪೀಠಾಧಿಪತಿಗಳೇ ತರಳಬಾಳು ಜಗದ್ಗುರುಗಳವರು ಎಂದು ಹೆಸರಾಗಿದ್ದಾರೆ. ಈ ಐತಿಹಾಸಿಕ ಘಟನೆಯು ಜರುಗಿದ ಹುಣ್ಣಿಮೆಯು ನಾಡಿನಲ್ಲಿ “ತರಳಬಾಳು ಹುಣ್ಣಿಮೆ” ಎಂದು ಪ್ರಸಿದ್ಧವಾಗಿದೆ.

ಒಂದು ಮಠದ ಚಾರಿತ್ರಿಕ ಹಿನ್ನೆಲೆಯಲ್ಲಿ ನಡೆದುಕೊಂಡು ಬಂದಿರುವ ಈ ಹುಣ್ಣಿಮೆ
ಮಹೋತ್ಸವವನ್ನು ಜಾತಿ-ಮತ-ಪಂಥಗಳ ಚೌಕಟ್ಟನ್ನು ಮೀರಿ ನಾಡ ಜನರ ಭಾವೈಕ್ಯತೆಯ
ಸಾಧನವನ್ನಾಗಿ ರೂಪಿಸಿದವರು 20ನೆಯ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ
ಶಿವಾಚಾರ್ಯ ಮಹಾಸ್ವಾಮಿಗಳವರು.ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಪ್ರತಿ ವರ್ಷವೂ ನಾಡಿನ ಒಳಹೊರಗೆ ಯಶಸ್ವಿಯಾಗಿ ನಡೆದುಕೊಂಡು ಬಂದು ನಾಡಿನ ಪ್ರಮುಖ ಧಾರ್ಮಿಕ ಸಮಾರಂಭಗಳಿಗೆ ಮಾತೃ ಸ್ವರೂಪದಂತಿರುವ ಈ ತರಳಬಾಳು ಹುಣ್ಣಿಮೆ ಮಹೋತ್ಸವವು ಲಿಂಗೈಕ್ಯ ಗುರುಗಳವರ ಕರಕಮಲ ಸಂಜಾತರಾದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ಥಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಜ್ಞಾನ ದಾಸೋಹದ ಸಮಾರಂಭವಾಗಿ ಹೊಸ ಆಯಾಮವನ್ನು ಪಡೆದಿದೆ.

ತರಳಬಾಳು ಹುಣ್ಣಿಮೆ ಆಯಾಯ ಸಂದರ್ಭದ ಸಾಮಾಜಿಕ ಮತ್ತು ಧಾರ್ಮಿಕ ಸಂಕಷ್ಟಗಳನ್ನು ಪರಿಹರಿಸಿ ಸಮುದಾಯದ ಒಳಿತಿಗೆ ಶ್ರಮಿಸುವ ಮಾನವೀಯತೆಯ ಮಹೋತ್ಸವವೆಂದೇ ಹೆಸರಾಗಿದೆ.
ಜನರ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಸಮಾಮುಖಿಯ ಹಬ್ಬವಾಗಿ ಹತ್ತಾರು ಐತಿಹಾಸಿಕ ಜನಪರ ಯೋಜನೆಗಳು ಸಾಕಾರವಾಗಲು ದಿವ್ಯ ವೇದಿಕೆಯಾಗಿದೆ. ಭೂಕಂಪ, ಬರಗಾಲ, ಅನಾವೃಷ್ಠಿಯಂತಹ ಪ್ರಾಕೃತಿಕ ಸಮಸ್ಯೆಗಳು ನಾಡಿನಲ್ಲಿ ತಲೆದೋರಿದಾಗ ಸಮಸ್ಯೆಗಳಿಗೆ ಉತ್ತರದಾಯಿಯಾಗಿ ಸರಳವಾಗಿ ಅರ್ಥಪೂರ್ಣವಾಗಿ ಮಹೋತ್ಸವವನ್ನು ಆಚರಿಸಲಾಗಿದೆ.

2020 ರಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಐತಿಹಾಸಿಕ ಹಳೇಬೀಡಿನಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನದ ಪೂಜ್ಯ ಶ್ರೀ ತರಳಬಾಳು ಜಗದ್ಗುರುಗಳವರ ಆಶೀರ್ವಾಣಿಯಲ್ಲಿ 2021ರ ಫೆಬ್ರವರಿ ತಿಂಗಳಿನಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟರೂ ಪಟ್ಟಣದಲ್ಲಿ ನಡೆಯಲಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಮುಂದೂಡಿ ಕೊರೊನಾ ಮಹಾಮಾರಿಯ ಕಾರಣದಿಂದ ಸರ್ಕಾರದ ಆದೇಶ ಮೀರದಂತೆ, ಸಂಪ್ರದಾಯ ಮುರಿಯದಂತೆ ಸರಳವಾಗಿ ಆಚರಿಸಲು ನಿಶ್ಚಯಿಸಿ 19-02-2021 ರಿಂದ 27-02-2021 ರವರೆಗೆ ಅಂತರ್ಜಾಲದಲ್ಲಿ ಸಭಾ ಕಾರ್ಯಕ್ರಮಕ್ಕೆ ಮಾತ್ರ ಸೀಮಿತಗೊಳಿಸಿ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಆಚರಿಸಲು ಶ್ರೀ ಜಗದ್ಗುರುಗಳವರು ಸಂಕಲ್ಪಿಸಿದ್ದಾರೆ.

ಈ ಕಾರ್ಯಕ್ರಮಗಳ ನೇರ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ, ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವೆಬ್ ಸೈಟ್ ನಲ್ಲಿ ಪ್ರಸಾರವಾಗಲಿದೆ.
(www.hunnime.taralabalu.in)

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

  ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …

ಲಿಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

  ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …

ಪತ್ರಕರ್ತ ಶಿವರಂಜನ್ ಸತ್ಯಂಪೇಟೆಗೆ ಪಿಎಚ್.ಡಿ.ಪದವಿ

  ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …

“ನಿಜ ಹೇಳದಿದ್ದರೂ ಪರವಾಗಿಲ್ಲ ಸುಳ್ಳು ಹೇಳಬೇಡಿ”

  ೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …

ಇತಿಹಾಸ ತಿರುಚುವ ರಂಭಾಪುರಿ ಶ್ರೀಗಳ ಕೃತ್ಯ ಖಂಡನೀಯ

ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …

ಇಳಕಲ್ ಗುರುಮಹಾಂತ ಶ್ರೀಗಳಿಗೆ ‘ಸಂಯಮ ಪ್ರಶಸ್ತಿ’ ಪ್ರದಾನ

  ಬಾಗಲಕೋಟೆ: ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ …

Leave a Reply

Your email address will not be published. Required fields are marked *

error: Content is protected !!