ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ನೀಡಿದವರು ವಿಶ್ವಗುರು ಬಸವಣ್ಣ: ಹಮೀದಾಬೇಗಂ ದೇಸಾಯಿ
Shivanand
February 14, 2021
featured, General News
376 Views
ಬೆಳಗಾವಿ: ಹನ್ನೆರಡನೆಯ ಶತಮಾನದ ಬಸವಾದಿ ಶಿವಶರಣರು ಕೇವಲ ಆಧ್ಯಾತ್ಮಿಕ ಸಾಧನೆ ಮಾತ್ರವಲ್ಲದೆ ಸಾಮಾಜಿಕ ಸುಧಾರಣೆಗೂ ಕೂಡ ಶ್ರಮವಹಿಸಿ, ಕಾಯಕ ದಾಸೋಹ ಮೂಲಕ ತತ್ವಗಳ ತಮ್ಮ ಅನುಭಾವದ ವಚನಗಳನ್ನು ರಚಿಸಿ, ವಚನಗಳ ಆಶಯದಂತೆ ತಾವು ಬದುಕಿ ಮುಂದಿನ ಪೀಳಿಗೆ ಹೇಗೆ ಬದುಕಬೇಕೆಂಬ ಸಂದೇಶ ಸಾರಿ ಎಲ್ಲರ ಬದುಕಿಗೆ ಬೆಳಕಾದವರು ಎಂದು ಹಿರಿಯ ಸಾಹಿತಿ ಹಮೀದಾಬೇಗಂ ದೇಸಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿಯ ಮಹಾಂತೇಶ ನಗರದ ಮಹಾಂತ ಭವನದಲ್ಲಿ, ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಬೆಳಗಾವಿ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾಸಿಕ ಅನುಭಾವ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ವಿಶ್ವಗುರು ಬಸವೇಶ್ವರ ಭಾವಚಿತ್ರಕ್ಕೆ ಗೌರವ ಸಮರ್ಪಿಸಿ, ಬಳಿಕ ಲಿಂಗಾಯತ ಧರ್ಮದ ಧ್ವಜಾರೋಹಣ ನೆರವೇರಿಸಲಾಯಿತು.
ಈ ವೇಳೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಸಾಹಿತಿ ಹಮೀದಾಬೇಗಂ ದೇಸಾಯಿ ಅವರು ಮಾತನಾಡಿ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ನೀಡಿದ ಬಸವಣ್ಣನವರನ್ನು ವಿಶ್ವಗುರು ಎಂದು ಎಲ್ಲರೂ ಒಪ್ಪಬೇಕಾದರೆ ಅವರ ಸಾಧನೆಯ ಆಳ ನಮಗೆ ಅರ್ಥವಾಗುವದು. ಗುರು ಲಿಂಗ ಜಂಗಮ ಇವು ಮೂರೂ ಬೇರೆ ಬೇರೆ ಅಲ್ಲ. ಒಂದಕ್ಕೊಂದು ಪೂರಕವಾದುವು. ಗುರು ಒಬ್ಬ ವ್ಯಕ್ತಿ ಅಲ್ಲ.ತನ್ನರಿವೆ ತನಗೆ ಗುರು. ಅರಿವು ಗುರುವಾದಾಗ ಲಿಂಗ ಪ್ರಾಣವಾಗುವದು.ಗುರು, ಲಿಂಗದ ಲಿಂಗಾಂಗ ಸಾಮರಸ್ಯವೇ ಜಂಗಮ. ಚಲನಶೀಲ ಜಗತ್ತೇ ಜಂಗಮ. ಗುರು ಶಿಷ್ಯರ ಸಂಭಂದ ಅವಿನಾಭಾವ ಸಂಬಂಧ ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಗುರು,ಲಿಂಗ,ಜಂಗಮ ಮತ್ತು ಪ್ರಸಾದ ಇವು ನಾಲ್ಕು ಬಸವ ತತ್ವದ ಆಶ್ರಮಗಳು. ಚಲನಶೀಲ ವಾದ ಜಗತ್ತೇ ಜಂಗಮ. ಜಂಗಮ ಜಾತಿಯಲ್ಲ.ಭಕ್ತನಾದಲ್ಲಿ ಶರಣನಾಗಬಹುದು ಎಂದು ಹೇಳಿದರು.
ನಂತರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಪರಮ ಪೂಜ್ಯ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಮುಂಬರುವ 2011ರ ಜನಗಣತಿಯಲ್ಲಿ ಧರ್ಮದ ಕಾಲಂನಲ್ಲಿ “ಲಿಂಗಾಯತ ಅಂತಾ ಬರೆಯಿಸಿರಿ ಅಂತಾ ಕರೆಕೊಟ್ಟರು. ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಸಮಾವೇಶವನ್ನು ಅಯೋಜಿಸುವ ಕುರಿತು ಪೂರ್ವಭಾವಿಯಾಗಿ ಸಭೆಯನ್ನು ಇದೇ ಫೆ.18ರಂದು 11 ಗಂಟೆಗೆ ಗುರುವಾರ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗದಗ-ಡಂಬಳ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಶ್ರೀಗಳ ನೇತೃತ್ವದಲ್ಲಿ ಕರೆಯಲಾಗಿದ್ದು ಎಲ್ಲರೂ ಭಾಗವಹಿಸುವಂತೆ ಕರೆ ನೀಡಿದರು.
ಈ ವೇಳೆ ಲಿಂಗಾಯತ ಮುಖಂಡರಾದ ಅರವಿಂದ ಪರುಶೆಟ್ಟಿ, ಬಸವರಾಜ ರೊಟ್ಟಿ, ಶಂಕರ ಗುಡಸ, ಚಂದ್ರಪ್ಪ ಬೂದಿಹಾಳ, ಅಶೋಕ ಮಳಗಲಿ ಬಸವರಾಜ ಭಾಗೋಜಿ, ಅಡಿವೆಪ್ಪ ಬೆಂಡಿಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Check Also
ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …
ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …
ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …
ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …
ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …
ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …
ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …
ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …
ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …
ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …
ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …
ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …
೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …
ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …
ಬಾಗಲಕೋಟೆ: ಇಳಕಲ್ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ …