Home / featured / ಭಾವೈಕ್ಯ ದಿನ ಆಚರಿಸಲು ಒತ್ತಾಯ

ಭಾವೈಕ್ಯ ದಿನ ಆಚರಿಸಲು ಒತ್ತಾಯ

 

ಗದಗ ತೋಂಟದಾರ್ಯ ಮಠದಲ್ಲಿ ಭಾನುವಾರ ನಡೆದ ಲಿಂ.ಡಾ. ತೋಂಟದ ಸಿದ್ಧಲಿಂಗ ಶ್ರೀ ಜಯಂತಿಯಲ್ಲಿ ಲಿಂ. ಡಾ.ತೋಂಟದ ಸಿದ್ಧಲಿಂಗ ಶ್ರೀ ಕುರಿತು ಕೃತಿಗಳನ್ನು ಬಿಡುಗಡೆ ಮಾಡಲಾಯಿತು
ದಗ: ‘ಜಾತಿ, ಮತ, ಪಂಥವೆನ್ನದೇ ಸಕಲರಿಗೂ ಲೇಸು ಬಯಸಿದ, ಅಪಾರ ಜೀವಪರ ಕಾಳಜಿ ಹೊಂದಿದ್ದ ಲಿಂ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಜಯಂತಿಯನ್ನು ರಾಜ್ಯ ಸರ್ಕಾರ ಭಾವೈಕ್ಯ ದಿನವನ್ನಾಗಿ ಆಚರಿಸಬೇಕು’ ಎಂದು ಗದುಗಿನ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ನಗರದ ತೋಂಟದಾರ್ಯ ಮಠದಲ್ಲಿ ಭಾನುವಾರ ಲಿಂ.ತೋಂಟದ ಸಿದ್ಧಲಿಂಗ ಶ್ರೀಗಳ ಜಯಂತಿ ಅಂಗವಾಗಿ ನಡೆದ ಭಾವೈಕ್ಯ ದಿನಾಚರಣೆಯಲ್ಲಿ ಅವರು ಆಶೀರ್ವಚನ ನೀಡಿದರು.

‘ಸಿದ್ಧಲಿಂಗ ಶ್ರೀಗಳ ಕೋಮು ಸೌಹಾರ್ದ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ ಪಡೆದ ದಕ್ಷಿಣ ಭಾರತದ ಏಕೈಕ ಸ್ವಾಮೀಜಿ. ನಾಡಿನ ಅನೇಕ ಮಠಗಳು ಪುಸ್ತಕಗಳ ಪ್ರಕಟಣೆಯಲ್ಲಿ ತೊಡಗಿದ್ದರೆ, ಅದಕ್ಕೆ ಲಿಂಗೈಕ್ಯ ಶ್ರೀ ಅವರೇ ಆದರ್ಶ’ ಎಂದರು.

ಮುಂಡರಗಿ ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ‘ಹುಟ್ಟು ಸಾವುಗಳು ಎಲ್ಲರಿಗೂ ನಿಸರ್ಗ ವಿಧಿಸಿದ ಪ್ರಕ್ರಿಯೆಗಳು, ಅದನ್ನು ಮೀರಿ ಕೆಲವರು ತಮ್ಮ ಸಾರ್ಥಕ ಜೀವನದ ಮೂಲಕ ಅಮರರಾಗುತ್ತಾರೆ. ಅಂತವರಲ್ಲಿ ತೋಂಟದ ಸಿದ್ಧಲಿಂಗ ಶ್ರೀಗಳು ಅಗ್ರಗಣ್ಯರು. 12ನೇ ಶತಮಾನದ ಬಸವತತ್ವಕ್ಕೆ 21ನೇ ಶತಮಾನದಲ್ಲಿ ಹೊಸ ಭಾಷ್ಯ ಬರೆದ ಸ್ವಾಮೀಜಿ ಅವರು’ ಎಂದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ‘ಗೃಹಸ್ಥರ ಮನೆಯಲ್ಲಿ ಪುತ್ರೋತ್ಸವವಾದರೆ, ಮಠಗಳಲ್ಲಿ ಪುಸ್ತಕೋತ್ಸವಗಳಾಗ ಬೇಕೆಂದು ನುಡಿಯುತ್ತಿದ್ದ ಲಿಂಗೈಕ್ಯ ಶ್ರೀಗಳ ಜಯಂತಿಯಲ್ಲಿ ಪುಸ್ತಕಗಳ ಬಿಡುಗಡೆಗೆ ಆದ್ಯತೆ ನೀಡಿರುವುದು ಅವರಿಗೆ ಸಲ್ಲಿಸುತ್ತಿರುವ ಗೌರವ’ ಎಂದರು.

ಶಿರೋಳ ತೋಂಟದಾರ್ಯ ಶಾಖಾಮಠದ ಗುರುಬಸವ ಶ್ರೀ, ಸಂಡೂರಿನ ವಿರಕ್ತಮಠದ ಪ್ರಭು ಶ್ರೀ, ಅರಸಿಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ಶ್ರೀ, ಯಶವಂತನಗರ ಸಿದ್ಧರಾಮೇಶ್ವರಮಠದ ಗಂಗಾಧರ ಶ್ರೀ, ಹಿರಿಯ ಸಾಹಿತಿ ವೀರಣ್ಣ ರಾಜೂರ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಮಾಜಿ ಸಚಿವ ಎಸ್ ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ, ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ತೊಗಲುಗೊಂಬೆ ಕಲಾವಿದ ವೀರಣ್ಣ ಬೆಳಗಲ್, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಎಂ.ಸಿ. ಐಲಿ, ವಿವೇಕಾನಂದಗೌಡ ಪಾಟೀಲ ಇದ್ದರು.

ವಿವಿಧ ಪುಸ್ತಕಗಳ ಬಿಡುಗಡೆ

ಲಿಂ. ತೋಂಟದ ಸಿದ್ಧಲಿಂಗ ಶ್ರೀ ಕುರಿತು ಡಾ. ಜಗದೀಶ ಕೊಪ್ಪ ಹಾಗೂ ಶಶಿಧರ ತೋಡಕರ ಸಂಪಾದಿಸಿದ ಸಮಾಜಮುಖಿ, ಮಲ್ಲಿಕಾರ್ಜುನ ಹುಲಗಬಾಳಿ ರಚಿಸಿದ ಸನ್ನಿಧಾನ, ವೀರನಗೌಡ ಮರಿಗೌಡರ ರಚಿಸಿದ ವಿಶ್ವ ಮಾನವ, ಜಿ.ವಿ. ಹಿರೇಮಠ ರಚಿಸಿದ ಡಂಬಳದ ತೋಂಟದ ಅರ್ಧನಾರೀಶ್ವರ ಶಿವಯೋಗಿಗಳು ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *