Home / featured / ಲೇಖಕಿ ಡಾ.ಅನುಪಮಾ ಅವರಿಗೆ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ ಪ್ರದಾನ

ಲೇಖಕಿ ಡಾ.ಅನುಪಮಾ ಅವರಿಗೆ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ ಪ್ರದಾನ

 

ಅಣ್ಣಿಗೇರಿ: ವಿಚಾರಗಳು ಹಾಗೂ ಸಂಘಟನೆಗಳ ಭಾಗ ಆಗಿರುವ ಲೇಖಕಿ,ಹೋರಾಟಗಾರ್ತಿ ಎಚ್.ಎಸ್.ಅನುಪಮಾ ಅವರು ಈ ಸಮಾಜ ನನ್ನನ್ನು ಪ್ರಶಸ್ತಿಗಳ ಮೂಲಕ ಗುರ್ತಿಸುವಂತಾಗಬಾರದು ಎಂದವರು. ಅವರು ಸಮಾಜದಲ್ಲಿ ಲಿಂಗ ಸಮಾನತೆ, ಸಾಮಾಜಿಕ ನ್ಯಾಯ ಅನುಸರಣೆಯಾಗುತ್ತಿಬೇಕು. ಬರಹದಂತೆ ಬರಹಗಾರ ಬದುಕಬೇಕೆಂಬ ನಿಲುವು ತಾಳಿದವರು ಎಂದು ಲಡಾಯಿ ಪ್ರಕಾಶನ ಮುಖ್ಯಸ್ಥ,ಸಾಹಿತಿ ಬಸವರಾಜ ಸೂಳಿಬಾವಿ ಅಭಿಪ್ರಾಯಪಟ್ಟರು. ಅವರು ಧಾರವಾಡ ಜಿಲ್ಲೆ, ಅಣ್ಣಿಗೇರಿ ಪಟ್ಟಣದ ನಿಂಗಮ್ಮ ಹೂಗಾರ ಕಾಲೇಜು ಆವರಣದಲ್ಲಿ ರವಿವಾರ ಸಂಜೆ, ರಾಜ್ಯಪ್ರಶಸ್ತಿ ಸಮಿತಿ ವತಿಯಿಂದ ನಡೆದ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನು ಹೇಳಿದರು.

ಲಿಂ.ಸಿದ್ಧಲಿಂಗ ಶ್ರೀಗಳು ಮನುಷ್ಯತ್ವವನ್ನು, ಕಾಯಕ ತತ್ವವನ್ನು ಪ್ರೀತಿಸುತ್ತಿದ್ದರು. ಜನಸಾಮಾನ್ಯರೊಂದಿಗೆ ಬೆರೆಯುವ ಸ್ವಾಮೀಜಿಯೆಂದೆನಿಸಿಕೊಂಡಿದ್ದರು. ಮಠದಿಂದ ಆರುನೂರಕ್ಕು ಹೆಚ್ಚು ಗುಣಮಟ್ಟದ ಪುಸ್ತಕಗಳನ್ನು ಪ್ರಕಟಿಸಿ ಪುಸ್ತಕದ ಸ್ವಾಮೀಜಿ ಎಂದೆನಿಸಿಕೊಂಡಿದ್ದರು.ಲಿಂಗೈಕ್ಯ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಹೆಸರಿನಲ್ಲಿ ನೀಡಲಾಗುವ ರಾಜ್ಯಮಟ್ಟದ ಈ ಪುರಸ್ಕಾರವನ್ನು ಈ ವರ್ಷ ಈಗಾಗಲೇ ಐವತ್ತು ಪುಸಕ್ತ ಬರೆದಿರುವ ಡಾ.ಎಚ್.ಎಸ್.ಅನುಪಮಾ ಅವರಿಗೆ ಕೊಡಮಾಡಲಾಗುತ್ತಿರುವುದು ಹೆಮ್ಮೆ ಹಾಗೂ ಸಂತಸದಾಯಕವಾಗಿದೆ ಎಂದು ಪ್ರಾಚಾರ್ಯ ಎಸ್.ಎಸ್.ಹರ್ಲಾಪೂರ ಅವರು ಪ್ರಾಸ್ತಾವಿಕ ಮಾತುಗಳಲ್ಲಿ ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅನುಪಮಾ ಅವರು,ಬರವಣಿಗೆ ಬರೀ ಅಕ್ಷರವಾಗಬಾರದು. ಬರಹವನ್ನು ಆಚರಣಾ ಪಟ್ಟಿಯಾಗಿ ನೋಡಬೇಕು.ಬರದಂಗೆ ಬದುಕಲಿಕ್ಕೆ ಸಾಧ್ಯವಾಗಬೇಕೆಂದರು. ಸದ್ಯದ ವ್ಯವಸ್ಥೆಯಲ್ಲಿ ಸತ್ಯದ ನಾಲಿಗೆ ಕತ್ತರಿಸಿ ಬೀದಿಯಲ್ಲಿ ಬೀಸಾಕುತ್ತಿರುವ ಸದ್ದು ಕೇಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ಸನ್ನಿಧಾನ ವಹಿಸಿದ್ದ ಗದಗ ತೋಂಟದಾರ್ಯ ಮಠದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿ,ಅನಿಷ್ಠ ಆಚರಣೆಗಳಿಂದ ಪಾರಾಗದೇ ದೇಶಕ್ಕೆ ಭವಿಷ್ಯವಿಲ್ಲ.ಮನುಷ್ಯ ಕುಲವೆಲ್ಲವು ಒಂದೇ ಎಂದು ಸಾರಿಹೋದ ಪಂಪನಂತೆ ಲಿಂಗೈಕ್ಯ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಅಣ್ಣಿಗೇರಿ ಭಾಗದಲ್ಲಿ ಭಾವೈಕ್ಯತೆಯ ಬೀಜವನ್ನು ಬಿತ್ತಿ ಹೋಗಿದ್ದಾರೆಂದು ಹೇಳಿದರು.

ಅನ್ವರ ಹುಬ್ಬಳ್ಳಿ, ಸುಧಾ ಕೌಜಗೇರಿ, ಮಲ್ವಿಕಾರ್ಜುನ ಸುರಕೋಡ, ಡಾ.ಗೀತಾ ಹರ್ಲಾಪೂರ, ಅರ್ಜುನ ಕಲಾಲ, ಎಚ್.ಡಿ.ಡಬರಿ, ಕುಸುಮಾ ಉಳ್ಳಾಗಡ್ಡಿ ,ವಿ.ಎಂ.ಹಿರೇಮಠ, ಹಾಲಪ್ಪ ತುರ್ಕಾಣಿ, ಶಿವಯೋಗಿ ಹುಬ್ಬಳ್ಳಿ, ಶಶಿಧರ ಹರ್ಲಾಪೂರ, ಷಣ್ಮುಖ ಗುರಿಕಾರ, ಭಗವಂತಪ್ಪ ಪುಟ್ಟಣ್ಣವರ,ಮೃತ್ಯುಂಜಯ ನವಲಗುಂದ, ವೀರೇಶ ಶಾನುಭೋಗರ, ಡಿ.ಬಿ.ಗವಾನಿ, ಶರೀಫ ಬಿಳಿಯಲಿ, ರಾಮಚಂದ್ರ ಹಂಸನೂರ,ಮುತ್ತು ಬಿಳಿಯಲಿ, ಪರಶುರಾಮ ಕಾಳೆ, ರವೀಂದ್ರ ಹೊನವಾಡ , ಎನ್.ಬಿ.ಬೀರಣ್ಣವರ , ಎ.ಆರ್.ಅಕ್ಕಿ , ಬಿ.ಆರ್.ದಿವಟರ ಮತ್ತೀತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

🖌ರವೀಂದ್ರ ಹೊನವಾಡ

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *