Home / featured / ಮಾರ್ಚ್ 31 ರಂದು ಲಿಂಗಾಯತ ಧರ್ಮದ ವಿಜಯೋತ್ಸವ ಹಾಗೂ ಬಲಿದಾನ ದಿನ

ಮಾರ್ಚ್ 31 ರಂದು ಲಿಂಗಾಯತ ಧರ್ಮದ ವಿಜಯೋತ್ಸವ ಹಾಗೂ ಬಲಿದಾನ ದಿನ

 

ಬೆಳಗಾವಿ: ಮಾರ್ಚ 19 ರಂದು ಆಯೋಜಿಸಲಾಗಿದ್ದ, ಡಾ.ನಾಗಮೋಹನ ದಾಸ ಅವರ ನೇತೃತ್ವದ ಉನ್ನತಾಧಿಕಾರ ಸಮಿತಿಯ ಸಪ್ತರ್ಷಿಗಳು 2018 ರಲ್ಲಿ ನೀಡಿರುವ ಲಿಂಗಾಯತ ಸ್ವತಂತ್ರ ಧರ್ಮವೆಂಬ ಅತ್ಯಂತ ವೈಜ್ಞಾನಿಕ ವರದಿಯ ಮೂರನೇ ವಾರ್ಷಿಕೋತ್ಸವ ಮತ್ತು ಬಸವ-ಭೀಮ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಮಾರ್ಚ 19 ಬದಲಾಗಿ, ಮಾರ್ಚ 31 ರಂದು ಈ ಕಾರ್ಯಕ್ರಮದೊಂದಿಗೆ ಹರಳಯ್ಯ-ಮಧುವರಸ-ಶೀಲವಂತರ ಬಲಿದಾನ ದಿನ ಹಾಗೂ ಲಿಂಗಾಯತ ಧರ್ಮದ ವಿಜಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.
ಲಿಂಗಾಯತ ಧರ್ಮದ ವಿಜಯೋತ್ಸವದ ಅಂಗವಾಗಿ ಬಸವಾದಿ ಶರಣರ ಮಾದರಿಯಲ್ಲಿ ಲಿಂಗಾಯತ ಧರ್ಮದ ಎಲ್ಲ ಜಾತಿ, ಜನಾಂಗ ಹಾಗೂ ಶೋಷಿತ ಸಮುದಾಯಗಳು ಮತ್ತು ಮಹಿಳೆಯರನ್ನು ಒಂದು ಗೂಡಿಸುವ ಪ್ರಯತ್ನವಾಗಿ ವಿವಿಧ ಕ್ಷೇತ್ರಗಳ ಹಾಗೂ ಸಮುದಾಯಗಳ ಸಾಧಕರಿಗೆ ಬಸವ ಚೇತನ, ಭೀಮ ಚೇತನ, ಬಸವ ಚೇತನ ಸಮಗಾರ ಹರಳಯ್ಯ, ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಿದೇವ, ಕುಂಬಾರ ಗುಂಡಯ್ಯ, ಜೇಡರ ದಾಸಿಮಯ್ಯ, ಮಧುವರಸ, ಒಕ್ಕಲಿಗ ಮುದ್ದಣ್ಣ, ವೈದ್ಯ ಸಂಗಣ್ಣ, ಶಾಂತರಸ, ಛಲವಾದಿ ನಾಗಿದೇವ, ತಳವಾರ ಕಾಮಿದೇವ, ಯುವ ಚೇತನ ಚನ್ನ ಬಸವಣ್ಣ, ಯುವ ಚೇತನ ಶೀಲವಂತ, ನಾರಿ ಕುಲ ತಿಲಕ ಅಕ್ಕ ಮಹಾದೇವಿ, ಮಹಾತಾಯಿ ರಮಾಬಾಯಿ ಅಂಬೇಡ್ಕರ, ಸ್ವಚ್ಛತಾ ತಾಯಿ ಕಸಗೂಡಿಸುವ ಸತ್ಯಕ್ಕ, ಕಲ್ಯಾಣಮ್ಮ ಹರಳಯ್ಯ ಆದರ್ಶ ದಂಪತಿಗಳು ಮುಂತಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವದು.

ಮಾರ್ಚ 19 ರ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ದಾಸೋಹ ಮನೋಭಾವದ ಹಾಗೂ ವೈಚಾರಿಕ ಚಿಂತನೆಗಳನ್ನು ಅಳವಡಿಸಿಕೊಂಡಿರುವ ಸಾಧಕರು ಪ್ರಶಸ್ತಿಗಾಗಿ ಮಾರ್ಚ 22 ರೊಳಗಾಗಿ “ಆರ್.ಎಸ್.ದರ್ಗೆ, ಅಧ್ಯಕ್ಷ ಬಸವ ಭೀಮ ಸೇನೆ. ಮನೆ ನಂ. 47, 2 ನೇ ಮುಖ್ಯರಸ್ತೆ, ಶಿವಾಜಿನಗರ, ಬೆಳಗಾವಿ” ಈ ವಿಳಾಸಕ್ಕೆ ತಮ್ಮ ಸ್ವ ವಿವರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ 25 ರಂದು ಪ್ರಶಸ್ತಿಗಳ ಸಾಧಕರ ಹೆಸರುಗಳು ಹಾಗೂ ಆಮಂತ್ರಣ ಪತ್ರಿಕೆಯನ್ನು ಪ್ರಕಟಿಸಲಾಗುವುದು.

ಮಾರ್ಚ 31 ರಂದು ಬೆಳಿಗ್ಗೆ 10.30 ಕ್ಕೆ ಬೆಳಗಾವಿ ನಗರದ ಚನ್ನಮ್ಮ ವೃತ್ತದ ಹತ್ತಿರವಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಅವರು ಮಾಧ್ಯಮ ಪ್ರಕಟನೆಯಲ್ಲಿ
ಹೆಚ್ಚಿನ ಮಾಹಿತಿಗಾಗಿ ಮೊ.ನಂ.9986710560 ಗೆ ಸಂಪರ್ಕಿಸಬಹುದು.
ಶರಣು ಶರಣಾರ್ಥಿಗಳು

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

Leave a Reply

Your email address will not be published. Required fields are marked *