Home / featured / ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

 

ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನವನ್ನು ಅರಿಯಬಹುದು ಎಂದು ಬೈಲೂರು ನಿಷ್ಕಲ ಮಂಟಪದ ಪೂಜ್ಯ ಶ್ರೀ ನಿಜಗುಣಾನಂದ ಶ್ರೀಗಳು ಅಭಿಪ್ರಾಯಪಟ್ಟರು.

ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿಯ ಅನುಭವ ಮಂಟಪದಲ್ಲಿ ಗುರುವಾರ(ಜುಲೈ-1) ‘ಆಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ರಂಗಾಯಣ ನಿರ್ಮಿಸುತ್ತಿರುವ ‘ಸರ್ವರಿಗೂ ಸಂವಿಧಾನ’ ನಾಟಕ ತರಬೇತಿ ಹಾಗೂ ಸಿದ್ಧತಾ ಶಿಬಿರದ ಸಾನಿಧ್ಯ ವಹಿಸಿ ಮಾತನಾಡಿದರು.

ಕಲಾವಿದರು ಯಾವುದೇ ಒಂದು ನಾಟಕವನ್ನು ಆರಂಭಿಸುವ ಮೊದಲು ಅದರ ಇತಿಹಾಸವನ್ನು ಅರಿತಾಗ ಮಾತ್ರ ಪಾತ್ರಗಳಿಗೆ ಜೀವ ತುಂಬಲು ಸಾಧ್ಯ. ನಾಟಕಗಳ ಮೂಲಕ ಜನರಲ್ಲಿ ತಿಳುವಳಿಕೆ, ಜ್ಞಾನವನ್ನು ನೀಡಿ, ಅವರ ಮನಸ್ಸನ್ನು ಪರಿವರ್ತನೆಗೊಳಿಸುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಒಂದು ತಿಂಗಳ ಶಿಬಿರಕ್ಕೆ ಚಾಲನೆ ನೀಡಿದ ಸಾಮಾಜಿಕ ಹೋರಾಟಗಾರರಾದ ಲಕ್ಷ್ಮಣ ಬಕ್ಕಾಯಿ ಮಾತನಾಡಿ, ದೇಶದಲ್ಲಿರುವ ಅನಕ್ಷರಸ್ಥ ಜನರಿಗೆ ಜಾನಪದ ಕಲೆಗಳಾದ ಹಾಡು, ನಾಟಕಗಳ ಮೂಲಕ ಸಂವಿಧಾನದ ಕುರಿತು ಅರಿವು ಮೂಡಿಸಲು ಸಾಧ್ಯ. ವಿದ್ಯಾವಂತ ಜನರು ಸಂವಿಧಾನವನ್ನು ಓದಿ ತಿಳಿದುಕೊಂಡಿರುತ್ತಾರೆ. ಆದರೆ ಅನಕ್ಷರಸ್ಥ ಹಾಗೂ ಗ್ರಾಮೀಣ ಪ್ರದೇಶದ ಜನರಿಗೂ ಸಂವಿಧಾನದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂವಿಧಾನ ಆಶಯ ವಿವರಿಸಲು ಪ್ರಯತ್ನಿಸುತ್ತಿದೆ. ಅಂಬೇಡ್ಕರ್ ಅವರು ದಲಿತ ಸಮಾಜಕ್ಕೆ ಮಾತ್ರವಲ್ಲದೆ ಇಡೀ ದೇಶದ ಸಮಸ್ತ ಜೀವ ಸಂಕುಲದ ವ್ಯವಸ್ಥಿತವಾದ ಜೀವನಕ್ಕೆ ಒಂದು ಚೌಕಟ್ಟನ್ನು ಒದಗಿಸಿಕೊಟ್ಟ ಸಂವಿಧಾನವನ್ನು ಬರೆದಿದ್ದಾರೆ ಎಂದು ತಿಳಿಸಿದರು.

ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ ಮಾತನಾಡಿ, ಒಬ್ಬ ವ್ಯಕ್ತಿ ದುರ್ಬಲ ಅಥವಾ ಸಬಲನಾಗಿರಲಿ ಅವನು ತನ್ನ ಗುರಿಯನ್ನು ತಲುಪಲು ಸಂವಿಧಾನ ಸಮಾನವಾದ ಅವಕಾಶ ಹಾಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಮಾನವನಿಗೆ ಅವಶ್ಯವಿರುವ ಸಮಾನವಾದ ಸಮಾಜ ಸ್ಥಾಪಿಸಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ್ ಮಾತನಾಡಿ, ರಂಗಾಯಣಗಳು ಮೂರು ವರ್ಷಕ್ಕೊಮ್ಮೆ ಕಲಾವಿದರನ್ನು ಆಯ್ಕೆ ಮಾಡಿಕೊಂಡು, ಅವರಿಗೆ ತರಬೇತಿ ನೀಡಿ, ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳಸಲು ಶ್ರಮಿಸುತ್ತಿವೆ. ಧಾರವಾಡ ರಂಗಾಯಣವು ರಂಗನವಮಿ, ಮಹಿಳೆಯರಿಗಾಗಿ ಮಹಿಳಾ ನಾಟಕೋತ್ಸವ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ರಂಗಕರ್ಮಿ ಮಹಾದೇವ ದೊಡಮನಿ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಜಗದೀಶ ಹಾರುಗೊಪ್ಪ, ಸಾಹಿತಿ ಶಬಾನಾ ಅಣ್ಣಿಗೇರಿ, ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಶಾಖಾ ವ್ಯವಸ್ಥಾಪಕ ಮಹರ್ಷಿ ಪುಟ್ಟಾ, ರಂಗಸಮಾಜ ಸದಸ್ಯರಾದ ಹಿಪ್ಪರಗಿ ಸಿದ್ಧರಾಮ ಸೇರಿದಂತೆ ಇತರರು ಇದ್ದರು.

ನಾಟಕ ನಿರ್ದೇಶಕರಾದ ಬಾಬಾಸಾಹೇಬ ಕಾಂಬ್ಳೆ, ಸಹನಿರ್ದೇಶಕರಾದ ವಿಜಯ ದೊಡಮನಿ ಇವರನ್ನು ಸನ್ಮಾನಿಸಲಾಯಿತು‌. ರಂಗಕರ್ಮಿ ಮಹಾದೇವ ದೊಡಮನಿ ಅವರು ಸಂವಿಧಾನ ಕುರಿತು ಉಪನ್ಯಾಸ ನೀಡಿದರು.

ಎಂ.ಕೆ.ಹುಬ್ಬಳ್ಳಿಯ ಅನುಭವ ಮಂಟಪದಲ್ಲಿ ಜುಲೈ 25ರ ವರೆಗೆ ಈ ತರಬೇತಿ ಶಿಬಿರ ನಡೆಯಲಿದೆ. ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು, ತಜ್ಞರು ತರಬೇತಿ ನೀಡಲಿದ್ದಾರೆ.

About Shivanand

Admin : Lingayat Kranti Monthly news paper 8884000008 [email protected]

Check Also

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ …

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

  ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು …

ಕ್ರಿ.ಪೂ. 200 ವರ್ಷಗಳ ಹಿಂದೆ…

  ಲಿಂಗಾಯತ ಕ್ರಾಂತಿ: ಕ್ರಿ.ಪೂ. 200 ವರ್ಷಗಳ ಹಿಂದೆ ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಕ್ ದೇಶದ ಚಕ್ರವರ್ತಿಯಾಗಿದ್ದ. ಆತ ತುಂಬಾ …

ಪ್ರಕೃತಿಯ ಆರಾಧಕಳು ಅಕ್ಕ

  ಲಿಂಗಾಯತ ಕ್ರಾಂತಿ: ಪ್ರಕೃತಿಯ ಆರಾಧನೆ ಎಂದರೆ ಸತ್ಯ ಮತ್ತು ಸೌಂದರ್ಯದ ಅನುಸಂಧಾನದ ಪ್ರಕ್ರಿಯೆ. ಪಂಚಭೂತಗಳಿಂದ ಆವೃತವಾದ ಈ ಪ್ರಕೃತಿಯು …

‘ಲಿಂಗಾಯತ’ ಚಳವಳಿಗೆ ಕಿಚ್ಚು ಹಚ್ಚಿದವರೇ ಲಿಂಗಾನಂದ ಶ್ರೀ!

  ಲಿಂಗಾಯತ ಕ್ರಾಂತಿ:  ಆ ದುರ್ದಿನಗಳಲ್ಲಿ ಬಸವಾದಿ ಶರಣರನ್ನು ಹಳ್ಳಿ ಹಳ್ಳಿಗೂ ತಲುಪಿಸಿ, ಸಾಮಾನ್ಯರಲ್ಲಿ ‘ಲಿಂಗಾಯತ’ದ ಅರಿವು ಮೂಡಿಸಿದ್ದು ಲಿಂಗಾನಂದ …

ನಿಜಗುಣಪ್ರಭು ತೋಂಟದಾರ್ಯ ಶ್ರೀಗಳಿಗೆ ಇಂದು ಪ್ರಶಸ್ತಿ ಪ್ರದಾನ

  ಚನ್ನಮ್ಮನ ಕಿತ್ತೂರು: ಮೂರು ದಶಕಗಳಿಂದ ನಾನಾ ದೇಶಗಳನ್ನು ಸುತ್ತಿ ಬಸವ ತತ್ವಗಳನ್ನು ಬಿತ್ತುತ್ತಿರುವ ನಿಷ್ಕಲ ಮಂಟಪದ ಪೂಜ್ಯ ಶ್ರೀ …

ವಿಧಾನಸೌಧದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಸಿಎಂ ಸಿದ್ದತೆ

  ಬೆಂಗಳೂರು: ಲಿಂಗಾಯತ ಧರ್ಮೀಯರ ಬಹುದಿನಗಳ ಬೇಡಿಕೆಗೆ ಈಗ ಕಾಲ ಕೂಡಿಬಂದಿದೆ. ಹೌದು.! ವಿಧಾನಸೌಧದ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ …

ಬ್ರಾಹ್ಮಣ್ಯ ಕೇವಲ 15% ರಷ್ಟಿರುವ ಸವರ್ಣೀಯರಲ್ಲಷ್ಟೇ ಆಚರಿಸಲ್ಪಡುತ್ತದೆಯೇ..?

ಬ್ರಾಹ್ಮಣ್ಯದ ಬಗ್ಗೆ ಇತ್ತೀಚೆಗೆ ಎಲ್ಲೆಡೆ ಬಹಳ ಚರ್ಚೆ ಆಗುತ್ತಿದೆ. ಹಾಗಾಗಿ ನನ್ನ ಸೀಮಿತ ಅರಿವಿನ ಪರಿಧಿಯಲ್ಲಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು …

ಲಿಂಗಾಯತರಿಗೆ ಬೇಕಿರುವುದು ಬೆಲ್ಲದ್ ಅಲ್ಲ; ಎಂ.ಬಿ.ಪಾಟೀಲರಂತಹ ಸಕ್ಕರೆ!

  ಹೌದು. ಲಿಂಗಾಯತರ ಮೇಲೆ ಯಾರನ್ನೋ ತಂದು ಹೇರಬೇಡಿ. ಪರ್ಯಾಯ ನಾಯಕನನ್ನು ಹುಡುಕುವ ಮತ್ತು ಅವರ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವ …

ರವಿಯೊಳಡಗಿದ ಪ್ರತಿಬಿಂಬದಂತೆ

  ಲಿಂಗಾಯತ ಕ್ರಾಂತಿ: 12 ನೇ ಶತಮಾನದ ಶರಣೆಯರಲ್ಲಿ ಆಧ್ಯಾತ್ಮಿಕ ಪಥವನ್ನು ಮುಟ್ಟಿದ ವಿಶಿಷ್ಟ ಶರಣೆ ಮುಕ್ತಾಯಕ್ಕ. ಶರಣೆ ಎನ್ನುವ …

ವೈಚಾರಿಕ ಸಾಹಿತಿ ಡಾ.ಸಿದ್ದಲಿಂಗಯ್ಯ.

ಲಿಂಗಾಯತ ಕ್ರಾಂತಿ: ಕವಿ, ಸಾಹಿತಿ, ನಾಟಕಕಾರ, ಸಂಶೋಧಕ, ವಾಗ್ಮಿ, ಬಹುಮುಖ ಪ್ರತಿಭೆ, ಶೋಷಿತರ ಸಂವೇದನೆಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಅಕ್ಷರ ರೂಪದಲ್ಲಿ ಕಟ್ಟಿಕೊಟ್ಟ …

Leave a Reply

Your email address will not be published. Required fields are marked *