Home / featured / ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

 

ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು ಡಾ.ಫ.ಗು.ಹಳಕಟ್ಟಿವರು ಎಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಹೇಳಿದರು.

ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ತ ಬಿ.ಎಲ್.ಡಿ.ಇ ಸಂಸ್ಥೆ ಆವರಣದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು, ಬಸವಣ್ಣ ಹಾಗೂ ಬಸವಾದಿ ಶರಣರು ಬರೆದಂತದಹ ವಚನ ಕಟ್ಟುಗಳು ಕಲ್ಯಾಣ ಕ್ರಾಂತಿಯ ನಂತರ ಮಠ-ಮಂದಿರಗಳಲ್ಲಿ, ಗುಡಿ-ಗುಂಡಾರಗಳಲ್ಲಿ, ಅಂಗಡಿ-ಮನೆಗಳಲ್ಲಿ, ಅಲ್ಲಲ್ಲಿ ಜಗುಲಿಗಳಲ್ಲಿ ಇದ್ದವು. ವಕೀಲಿ ವೃತ್ತಿಯ ನಿಮಿತ್ತ ವಿಜಯಪುರಕ್ಕೆ ಬಂದ ಹಳಕಟ್ಟಿಯವರು ವಿಜಯಪುರದಲ್ಲಿ ವಕೀಲರಾಗಿ, ನಗರ ಸಭೆ ಅಧ್ಯಕ್ಷರಾಗಿ, ವಿಧಾನಪರಿಷತ್ ಸದಸ್ಯರಾಗಿ ಹಲವು ಜನೋಪಯೋಗಿ ಕಾರ್ಯಗಳನ್ನು ಮಾಡಿದರು. ಶೈಕ್ಷಣಿಕವಾಗಿ ಬಿ.ಎಲ್.ಡಿ.ಇ ಸಂಸ್ಥೆಯನ್ನು, ಆರ್ಥಿಕವಾಗಿ ಸಬಲರಾಗಲು ಸಿದ್ದೇಶ್ವರ ಬ್ಯಾಂಕ್, ಆಧ್ಯಾತ್ಮಿಕವಾಗಿ ಚಿಂತಿಸಲು ಶ್ರೀ ಸಿದ್ದೇಶ್ವರ ಸಂಸ್ಥೆ, ರೈತರಿಗಾಗಿ ಬರಗಾಲ ನಿವಾರಣಾ ಸಂಸ್ಥೆ, ನಗರಕ್ಕೆ ಕುಡಿಯುವ ನೀರು ಒದಗಿಸಲು ಭೂತನಾಳ ಕೆರೆ ಮತ್ತಿತರ ಕಾರ್ಯಗಳನ್ನು ಮಾಡಿದ ಸಾಧನೆ ಒಂದಡೆಯಾದರೆ, ವಚನದ ಕಟ್ಟುಗಳನ್ನು ಹುಡುಕಿ, ಹೊರತಂದು ಅದರಲ್ಲಿನ ಸಾಹಿತ್ಯವನ್ನು ತಾವೇ ಸ್ವತಃ ತಮ್ಮ ಶಿವಾನುಭವ ಪತ್ರಿಕೆಯಲ್ಲಿ ಪ್ರಕಟಿಸಿ, 270ಕ್ಕೂ ಹೆಚ್ಚು ವಚನಕಾರರ 10ಸಾವಿರ ವಚನಗಳನ್ನು ಪ್ರಕಟಿಸಿದ ಅವರ ಸಾಧನೆ ಅಪ್ರತಿಮವಾಗಿದೆ ಎಂದರು.

ಹಳಕಟ್ಟಿಯವರ ಅವರ ನೆನಪಿನಲ್ಲಿರುವ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ತನ್ನ ಉತ್ತಮ ಸಂಶೋಧನಾತ್ಮಕ ಕಾರ್ಯಗಳ ಮೂಲಕ ನಾಡಿನಲ್ಲಿಯೇ ಹೆಸರುವಾಸಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಕೈಗೊಳ್ಳುವ ಯೋಜನೆಗಳನ್ನು ಪ್ರಥಮವಾಗಿ ಹಳಕಟ್ಟಿ ಸಂಶೋಧನ ಕೇಂದ್ರಕ್ಕೆ ನೀಡುತ್ತದೆ. ಅಷ್ಟರ ಮಟ್ಟಿಗೆ ಈ ಕೇಂದ್ರ ಸಾಧನೆ ತೋರಿದೆ ಎಂದರು.

ಬಿ.ಎಲ್.ಡಿ.ಇ ಡೀಮ್ಡ್ ವಿವಿ ಉಪಕುಲಪತಿ ಡಾ.ಆರ್.ಎಸ್.ಮುಧೋಳ, ರಿಜಿಸ್ಟಾರ್ ಡಾ.ಜೆ.ಜಿ.ಅಂಬೇಕರ್, ಹಿರಿಯ ಸಂಶೋಧಕ ಕೃಷ್ಣಕೋಲ್ಹಾರ ಕುಲಕರ್ಣಿ, ಡಾ.ಅರುಣ ಇನಾಮದಾರ, ಡಾ.ರಾಘವೇಂದ್ರ ಕುಲಕರ್ಣಿ, ಹಳಕಟ್ಟಿಯವರ ಮೊಮ್ಮಗ ಗೀರಿಶ ಹಳಕಟ್ಟಿ, ಮಹಾಂತೇಶ ಬಿರಾದಾರ, ದಾವಣಗೆರೆ ಬಸವ ಕೇಂದ್ರದ ಮಹಾಂತೇಶ ಅಗಡಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ವೇಳೆ ಹಳಕಟ್ಟಿಯವರ ಕುಟುಂಬ ವರ್ಗದವರಿಗೆ ವಿದ್ಯಾಭ್ಯಾಸಕ್ಕಾಗಿ ಧನಸಹಾಯವನ್ನು ಸಂಸ್ಥೆ ವತಿಯಿಂದ ನೀಡಲಾಯಿತು.

About Shivanand

Admin : Lingayat Kranti Monthly news paper 8884000008 [email protected]

Check Also

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ …

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

  ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ …

ಕ್ರಿ.ಪೂ. 200 ವರ್ಷಗಳ ಹಿಂದೆ…

  ಲಿಂಗಾಯತ ಕ್ರಾಂತಿ: ಕ್ರಿ.ಪೂ. 200 ವರ್ಷಗಳ ಹಿಂದೆ ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಕ್ ದೇಶದ ಚಕ್ರವರ್ತಿಯಾಗಿದ್ದ. ಆತ ತುಂಬಾ …

ಪ್ರಕೃತಿಯ ಆರಾಧಕಳು ಅಕ್ಕ

  ಲಿಂಗಾಯತ ಕ್ರಾಂತಿ: ಪ್ರಕೃತಿಯ ಆರಾಧನೆ ಎಂದರೆ ಸತ್ಯ ಮತ್ತು ಸೌಂದರ್ಯದ ಅನುಸಂಧಾನದ ಪ್ರಕ್ರಿಯೆ. ಪಂಚಭೂತಗಳಿಂದ ಆವೃತವಾದ ಈ ಪ್ರಕೃತಿಯು …

‘ಲಿಂಗಾಯತ’ ಚಳವಳಿಗೆ ಕಿಚ್ಚು ಹಚ್ಚಿದವರೇ ಲಿಂಗಾನಂದ ಶ್ರೀ!

  ಲಿಂಗಾಯತ ಕ್ರಾಂತಿ:  ಆ ದುರ್ದಿನಗಳಲ್ಲಿ ಬಸವಾದಿ ಶರಣರನ್ನು ಹಳ್ಳಿ ಹಳ್ಳಿಗೂ ತಲುಪಿಸಿ, ಸಾಮಾನ್ಯರಲ್ಲಿ ‘ಲಿಂಗಾಯತ’ದ ಅರಿವು ಮೂಡಿಸಿದ್ದು ಲಿಂಗಾನಂದ …

ನಿಜಗುಣಪ್ರಭು ತೋಂಟದಾರ್ಯ ಶ್ರೀಗಳಿಗೆ ಇಂದು ಪ್ರಶಸ್ತಿ ಪ್ರದಾನ

  ಚನ್ನಮ್ಮನ ಕಿತ್ತೂರು: ಮೂರು ದಶಕಗಳಿಂದ ನಾನಾ ದೇಶಗಳನ್ನು ಸುತ್ತಿ ಬಸವ ತತ್ವಗಳನ್ನು ಬಿತ್ತುತ್ತಿರುವ ನಿಷ್ಕಲ ಮಂಟಪದ ಪೂಜ್ಯ ಶ್ರೀ …

ವಿಧಾನಸೌಧದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಸಿಎಂ ಸಿದ್ದತೆ

  ಬೆಂಗಳೂರು: ಲಿಂಗಾಯತ ಧರ್ಮೀಯರ ಬಹುದಿನಗಳ ಬೇಡಿಕೆಗೆ ಈಗ ಕಾಲ ಕೂಡಿಬಂದಿದೆ. ಹೌದು.! ವಿಧಾನಸೌಧದ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ …

ಬ್ರಾಹ್ಮಣ್ಯ ಕೇವಲ 15% ರಷ್ಟಿರುವ ಸವರ್ಣೀಯರಲ್ಲಷ್ಟೇ ಆಚರಿಸಲ್ಪಡುತ್ತದೆಯೇ..?

ಬ್ರಾಹ್ಮಣ್ಯದ ಬಗ್ಗೆ ಇತ್ತೀಚೆಗೆ ಎಲ್ಲೆಡೆ ಬಹಳ ಚರ್ಚೆ ಆಗುತ್ತಿದೆ. ಹಾಗಾಗಿ ನನ್ನ ಸೀಮಿತ ಅರಿವಿನ ಪರಿಧಿಯಲ್ಲಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು …

ಲಿಂಗಾಯತರಿಗೆ ಬೇಕಿರುವುದು ಬೆಲ್ಲದ್ ಅಲ್ಲ; ಎಂ.ಬಿ.ಪಾಟೀಲರಂತಹ ಸಕ್ಕರೆ!

  ಹೌದು. ಲಿಂಗಾಯತರ ಮೇಲೆ ಯಾರನ್ನೋ ತಂದು ಹೇರಬೇಡಿ. ಪರ್ಯಾಯ ನಾಯಕನನ್ನು ಹುಡುಕುವ ಮತ್ತು ಅವರ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವ …

ರವಿಯೊಳಡಗಿದ ಪ್ರತಿಬಿಂಬದಂತೆ

  ಲಿಂಗಾಯತ ಕ್ರಾಂತಿ: 12 ನೇ ಶತಮಾನದ ಶರಣೆಯರಲ್ಲಿ ಆಧ್ಯಾತ್ಮಿಕ ಪಥವನ್ನು ಮುಟ್ಟಿದ ವಿಶಿಷ್ಟ ಶರಣೆ ಮುಕ್ತಾಯಕ್ಕ. ಶರಣೆ ಎನ್ನುವ …

ವೈಚಾರಿಕ ಸಾಹಿತಿ ಡಾ.ಸಿದ್ದಲಿಂಗಯ್ಯ.

ಲಿಂಗಾಯತ ಕ್ರಾಂತಿ: ಕವಿ, ಸಾಹಿತಿ, ನಾಟಕಕಾರ, ಸಂಶೋಧಕ, ವಾಗ್ಮಿ, ಬಹುಮುಖ ಪ್ರತಿಭೆ, ಶೋಷಿತರ ಸಂವೇದನೆಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಅಕ್ಷರ ರೂಪದಲ್ಲಿ ಕಟ್ಟಿಕೊಟ್ಟ …

Leave a Reply

Your email address will not be published. Required fields are marked *