Home / featured / ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ ಡಾ. ಎಂ.ಬಿ.ಪಾಟೀಲ(ಮಲ್ಲನಗೌಡ ಬಸನಗೌಡ ಪಾಟೀಲ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಶ್ರೀಯುತರಿಗೆ ಸೃಷ್ಟಿಕರ್ತ ಪರಮಾತ್ಮನ ಆಶೀರ್ವಾದ ಧರ್ಮಗುರು ಬಸವಣ್ಣನವರ, ಬಸವಾದಿ ಶರಣರ, ಸಂತರ, ಮಹಾಂತರ ಮಾರ್ಗದರ್ಶನ ಸದಾಕಾಲವೂ ಇರಲೇಂದು ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಬೇಡಿಕೊಳ್ಳುತ್ತೇವೆ.

ಸನ್ಮಾನ್ಯಶ್ರೀ ಡಾ. ಎಂ.ಬಿ.ಪಾಟೀಲ(ಮಲ್ಲನಗೌಡ ಬಸನಗೌಡ ಪಾಟೀಲ)ರು ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರು. ಮಾಜಿ ಗೃಹ ಮತ್ತು ಜಲಸಂಪನ್ಮೂಲ ಸಚಿವರು, ವಿಜಯಪುರದ ಮಾಜಿ ಸಂಸದರು, ಬಿ.ಎಲ್.ಡಿ.ಈ.ಸಂಸ್ಥೆಯ ಅಧ್ಯಕ್ಷರು, ಉದ್ಯಮಿಗಳು, ಲಿಂಗಾಯತ ಧರ್ಮೀಯರ ಪಕ್ಷಾತೀತ ನಾಯಕರಾಗಿದ್ದು ಇವರ ಪರಿಚಯವನ್ನು ತಪ್ಪದೇ ತಿಳಿಯಿರಿ.

ಸನ್ಮಾನ್ಯ ಎಂ.ಬಿ ಪಾಟೀಲರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ತೊರವಿ ಗ್ರಾಮದಲ್ಲಿ 7ನೇ ಅಕ್ಟೋಬರ 1964ರಂದು ತಂದೆ ಬಸನಗೌಡರು ತಾಯಿ ಕಮಲಾದೇವಿಯವರ ಉದರದಲ್ಲಿ ಜನಿಸಿದರು.
ಬೆಂಗಳೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ವಿಜಯಪುರದ ದರಬಾರ ಪ್ರೌಢ ಶಾಲೆಯಲ್ಲಿ ಪಡೆದಿದ್ದಾರೆ.
ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ, ವಿಜಯಪುರದಲ್ಲಿ ಪಡೆದಿದ್ದಾರೆ.

ಶ್ರೀಯುತರ ಧರ್ಮಪತ್ನಿ ಆಶಾ ಪಾಟೀಲಯವರನ್ನು ಮದುವೆಯಾಗಿದ್ದು ಅವರಿಗೆ ಬಸನಗೌಡ ಹಾಗೂ ಧ್ರುವ ಎಂಬ ಇಬ್ಬರು ಮಕ್ಕಳಿದ್ದು ವಿಜಯಪುರ ನಗರದಲ್ಲಿ ವಾಸವಾಗಿದ್ದಾರೆ.

ಮಕ್ಕಳಿಗೆ ಧಾರ್ಮಿಕ, ಶೈಕ್ಷಣಿಕ,ರಾಜಕೀಯ, ಪರಿಸರ ಕಾಳಜಿಯ ಹಲವಾರು ಯೋಜನೆಗಳಲ್ಲಿ ಮುಂದಾಳತ್ವ ವಹಿಸಿ ಸಮಾಜಸೇವೆಯಲ್ಲಿ ತಮ್ಮ ಸುಖ-ಸಂತೋಷ ಕಾಣಬೇಕೆಂಬ ಧ್ಯೇಯವನ್ನು ಕಲಿಸಿದ್ದಾರೆ. ಇಂದು ಸನ್ಮಾನ್ಯಶ್ರೀ ಡಾ. ಎಂ ಬಿ ಪಾಟೀಲರು ಮಾಡಿದ ಐತಿಹಾಸಿಕ ನೀರಾವರಿ ಯೋಜನೆಗಳು, ಅರಣ್ಯ ಅಭಿವೃದ್ಧಿಗೆ ಕೋಟಿವೃಕ್ಷ ಅಭಿಯಾನ, ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಮಾಡಿದ ಹೋರಾಟದಲ್ಲಿ ಮುಖಂಡತ್ವ ವಹಿಸಿಕೊಂಡಿದ್ದರಿಂದ ಅವರ ಹೆಸರು ಜಗತ್ತಿನಾದ್ಯಂತ ಜನಮನ್ನಣೆ ಗಳಿಸಿತು.

1991ರಲ್ಲಿ ತಂದೆ ಲಿಂಗೈಕ್ಯ ಬಿ.ಎಂ.ಪಾಟೀಲರು ನಿಧನರಾದಾಗ, ತಂದೆಯ ತೆರವಾದ ಶಾಸಕ ಸ್ಥಾನಕ್ಕೆ ತಮ್ಮ 27ನೇ ವಯಸ್ಸಿನಲ್ಲಿ ತಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಸ್ಪರ್ಧಿಸಿ ಪ್ರಥಮ ಬಾರಿಗೆ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು.

1994 ಮತ್ತು 1999ರಲ್ಲಿ ನಡೆದ ಚುನಾವಣೆಯಲ್ಲಿ ಶಿವಾನಂದ ಪಾಟೀಲರ ವಿರುದ್ಧ ಸೋತರು. ನಂತರ ವಿಜಯಪುರ ಲೋಕಸಭಾ ಕ್ಷೇತ್ರದಿಂದ 1998ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಆಯ್ಕೆಯಾಗಿದ್ದರು.
2004ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ.

2008, 2013ಮತ್ತು 2018ರಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2013ರಲ್ಲಿ ಕರ್ನಾಟಕದ ದಿಮಂತ ನಾಯಕ, ಮತ್ತೊಬ್ಬ ದೇವರಾಜ್ ಅರಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಸನ್ಮಾನ್ಯಶ್ರೀ ಸಿದ್ದರಾಮಯ್ಯನವರ
ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಸುಮಾರು 55,000 ಕೋಟಿ ರೂಗಳಷ್ಟು ನೀರಾವರಿ ಕಾಮಗಾರಿ ಮಾಡಿ ಬರಡು(ಬರದ) ನಾಡು ಎಂದೇ ಖ್ಯಾತಿ ಪಡೆದಿದ್ದ ವಿಜಯಪುರ ಜಿಲ್ಲೆಗೆ ಹಲವಾರು ಬೃಹತ್ ಕಾಲುವೆಗಳ ನಿರ್ಮಿಸಿ ನೀರು ಹರಿಸಿದ ಕೀರ್ತಿ ಡಾ. ಎಂ ಬಿ ಪಾಟೀಲರದ್ದು. ಆಧುನಿಕ ಭಗೀರಥ ಎಂದೇ ಬಿರುದಾಂಕಿತನಾದರು.

ಪೂಜ್ಯಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಕಂಡು ನೀರು ಅಂದ್ರೆ ಎಂ.ಬಿ ಪಾಟೀಲರು, ಎಂ.ಬಿ ಪಾಟೀಲರು ಅಂದ್ರೆ ನೀರು ಎಂದು ಹಾಡಿ ಹೊಗಳಿದರು.

2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಸಿಬ್ಬಂದಿಯ ವೇತನ ನವೀಕರಣದ ಸುತ್ತೋಲೆ ಹಲವಾರು ವರ್ಷಗಳಿಂದ ನೆನೆಗುದಿ ಬಿದಿದ್ದನ್ನು ಮರುಪರಿಶೀಲನೆ ಮಾಡಿ ವೇತನ ಹೆಚ್ಚಿಸಿಲು ಸಹಕಾರಿಯಾದರು.

2018ರಲ್ಲಿ ಇವರ ರಾಜಕೀಯ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಎಐಸಿಸಿ, ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯರನ್ನಾಗಿ ನೇಮಿಸಿದರು.

1990ರಿಂದ 2005ರ ವರೆಗೆ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹುದ್ದೆ, 2005ರಿಂದ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಲಿಂಗಾಯತ ಧರ್ಮದ ತಾಯಿಬೇರಾದ ವಚನ ಸಾಹಿತ್ಯ ರಕ್ಷಣೆ ಹಾಗೂ ಲಿಂ. ಫ.ಗು ಹಳಕಟ್ಟಿಯವರ ಶಿವಾನುಭವ ಪತ್ರಿಕೆಯ ಮರು ವರದಿಗಳನ್ನು ಮುದ್ರಿಸಲು ಸರಕಾರದ ಬೆನ್ನುಹತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟದಲ್ಲಿ ಜವಾಬ್ದಾರಿಯುತವಾಗಿ ನೆರವೇರಿಸಿದರು. ಜಾಗತಿಕ ಲಿಂಗಾಯತ ಮಹಾಸಭೆಗೆ ಭದ್ರ ಬುನಾದಿ ಹಾಕಿ ಪೋಷಕರಾಗಿ ಬೆಳೆಸುತ್ತಿದ್ದಾರೆ. ಸದ್ಯ ಜಾಗತಿಕ ಲಿಂಗಾಯತ ಮಹಾಸಭೆ 10,000ಕ್ಕೂ ಅಧಿಕ ಸದಸ್ಯರನ್ನು ಹೊಂದಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ಬೃಹತ್ ಲಿಂಗಾಯತ ಸಂಘಟನೆಯಾಗಿ ಹೊರಹೊಮ್ಮಿದೆ. ನಮ್ಮ ಲಿಂಗಾಯತ ಕ್ರಾಂತಿ ಪತ್ರಿಕೆಯಂತಹ ಹಲವಾರು ಮಾದ್ಯಮಗಳು ಸಮಾಜದ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇಂತಹ ಮಹಾನ್ ಚೇತನದ ಜನ್ಮದಿನಕ್ಕೆ ಮತ್ತೊಮ್ಮೆ ಹಾರ್ದಿಕ ಶುಭಾಶಯಗಳು.

About Shivanand

Admin : Lingayat Kranti Monthly news paper 8884000008 [email protected]

Check Also

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

ಹಡಪದರನ್ನು ನೋಡುವ ನೋಟ ಬದಲಾಗಲಿ

ಗಜೇಂದ್ರಗಡ ಜುಲೈ 25: ಅಸಮಾನತೆ, ಜಾತಿವಾದ ವ್ಯವಸ್ಥೆಯ ಈ ಸಮಾಜದಲ್ಲಿ ದಲಿತ ಜನಾಂಗದವರು ಮುಟ್ಟಿಸಿಕೊಳ್ಳದ ಅಸ್ಪೃಶ್ಯತೆಯ ಅವಮಾನಕ್ಕೊಳಗಾಗುತ್ತಿದ್ದಾರೆ. ಹಾಗೆಯೇ ಹಡಪದ …

Leave a Reply

Your email address will not be published. Required fields are marked *