Home / featured / 20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ.
ಪತ್ರಕರ್ತ, ಪ್ರಗತಿಪರ ಚಿಂತಕರು.
ಬೀದರ ಜಿಲ್ಲೆ.

ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು ಕಲ್ಯಾಣದಲ್ಲಿ ಗಣ ಪರ್ವಗಳು ನಡೆಯುತ್ತಿದ್ದವು. ಕಲ್ಯಾಣದ ಕ್ರಾಂತಿಯ ನಂತರ ಸಂಪೂರ್ಣವಾಗಿ ಗಣ ಪರ್ವ ನಿಂತಿದ್ದವು. ಮತ್ತೆ 21ನೇ ಶತಮಾನದಲ್ಲಿ ಕಲ್ಯಾಣ ಪರ್ವದ ಮೂಲಕ ಗಣ ಪರ್ವಗಳು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಲಿಂ. ಮಾತಾಜಿಯ ನೇತೃತ್ವದಲ್ಲಿ ಪ್ರಾರಂಭವಾಗಿವೆ. ದೇಶ ಎಂದೂ ಮರೆಯದ ಐತಿಹಾಸಿಕ ಕೆಲಸ ಮಾತಾಜಿಯವರು ಮಾಡಿದ್ದಾರೆ. ಮಾತಾಜಿಯವರು ಹಾಕಿಕೊಟ್ಟ ಮಾರ್ಗದಲ್ಲಿ ಅನೇಕ ಚಟುವಟಿಕೆಗಳು ಸಧ್ಯ ನಿತ್ಯ ನಿರಂತರವಾಗಿ ನಡೆಯುತ್ತಿವೆ.
ಇದರ ಒಂದು ಭಾಗವೇ ಕಲ್ಯಾಣ ಪರ್ವ ಕಾರ್ಯಕ್ರಮ ಶರಣ ಬಂಧುಗಳೆ.

ಮನುಕುಲದ ಉದ್ಧಾರಕ,ಸತ್ಯ ತತ್ವದ ಪ್ರತಿಪಾದಕ,ಶರಣ ಗಣಮೇಳದ ರೂವಾರಿ ಅಣ್ಣ ಬಸವಣ್ಣನವರು ಹಾಗೂ
ಶರಣರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಭವ್ಯವಾದ ಬಸವೇಶ್ವರ ಪ್ರತಿಮೆಯ ಬಸವ ಮಹಾಮನೆಯ ಆವರಣದಲ್ಲಿ 20ನೇ ಕಲ್ಯಾಣ ಪರ್ವ ಕಾರ್ಯಕ್ರಮ ಕ್ಷಣಗಣನೆ ಆರಂಭವಾಗಲಿದೆ.

18,19,20ರ ಈ ಮೂರು ದಿವಸಗಳ ಕಾಲ ಅತ್ಯಂತ ಶಿಸ್ತು ಬದ್ಧ, ಅರ್ಥಪೂರ್ಣ, ವೈಜ್ಞಾನಿಕ, ವೈಚಾರಿಕ ನೆಲೆಗಟ್ಟಿನ ನೆಲೆಯಲ್ಲಿ ಕಾರ್ಯಕ್ರಮವು ಜರುಗಲಿದೆ. ಕಲ್ಯಾಣ ಪರ್ವಕ್ಕೆ ಕರ್ನಾಟಕ, ತೆಲಂಗಾಣ ಮಹಾರಾಷ್ಟ್ರ, ಮೊದಲಾದ ಭಾಗಗಳಿಂದ ಸಾವಿರಾರು ಶರಣ ಬಂಧುಗಳು ಭಾವಹಿಸಲಿದ್ದಾರೆ.ಮೂರು ದಿವಸಗಳ ಕಾಲ ಯೋಗ , ಇಷ್ಟಲಿಂಗ ಪೂಜೆ, ಪ್ರಾರ್ಥನೆ,ಶರಣ ಸ್ಮರಣೆ, ಧರ್ಮಚಿಂತನೆ,ವಿಚಾರಗೋಷ್ಟಿ, ವಚನ ಸಂಗೀತ, ವಚನ ನೃತ್ಯ ,ಪೀಠಾರೋಹಣ,ಪಥ ಸಂಚಲನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.

108 ಅಡಿ ಎತ್ತರದ ಪ್ರತಿಮೆ :

ವಿಶ್ವಗುರು ಬಸವಣ್ಣನವರ 108 ಅಡಿ ಎತ್ತರದ ಪ್ರತಿಮೆಯನ್ನು 2001ರಲ್ಲಿ ನಿರ್ಮಿಸಿದ ಕೀರ್ತಿ ಮಾತಾಜಿಯವರಿಗೆ ಸಲ್ಲುತ್ತದೆ. ಕುಳಿತ ಭಂಗಿಯಲ್ಲಿರುವ ಬಸವಣ್ಣನವರ ಹಸನ್ಮುಖಿಯ ಈ ಪ್ರತಿಮೆ ಬಸವಾಭಿಮಾನಿಗಳಿಗೆ ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿದ್ದು, ಪ್ರಮುಖ ಧಾರ್ಮಿಕ, ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ. ಜಗತ್ತಿನ ಜನ, ಮತ್ತೆ ಕಲ್ಯಾಣಕ್ಕೆ ಬಂದು ನೋಡುವಂತಾಗಿದೆ.

ಧನ್ಯನಾಗಬೇಕು :

ಕಲ್ಯಾಣದಲ್ಲಿ ಜರುಗುತ್ತಿರುವ ಕಲ್ಯಾಣ ಪರ್ವ ಕಾರ್ಯಕ್ರಮದ ಮೂಲಕ ಬಸವಾದಿ ಶರಣರ ಸಂದೇಶವನ್ನು ನಾಡಿನ ಉದ್ಧಕ್ಕೂ ಪಸರಿಸುವ ಕಾರ್ಯ ರಾಷ್ಟ್ರೀಯ ಬಸವದಳ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಜನಸಾಮಾನ್ಯರಿಗೆ ಬಸವ ತತ್ವದ ಜಾಗೃತಿ ಮೂಡಿಸುತ್ತಿರುವ ಕಾರ್ಯ ಅನನ್ಯ. ಮಹಾ ಮಾನವತಾವಾದಿ ಬಸವಣ್ಣನವರ ವಚನ ಸಾಹಿತ್ಯದ ಸಂದೇಶಗಳಲ್ಲಿ ನಂಬಿಕೆ ಇಟ್ಟು ಬದುಕುವ ಸಮಸ್ತ ಬಸವಭಕ್ತರು, ಬಸವ ತತ್ವಾಭಿಮಾನಿಗಳೆಲ್ಲರೂ ವರ್ಷಕ್ಕೆ ಒಮ್ಮೆಯಾದರೂ ಕಲ್ಯಾಣ ಪರ್ವಕ್ಕೆ ಬಂದು ಧನ್ಯರಾಗಬೇಕಾಗಿದೆ.

ಕಾರ್ಯಕ್ರಮದ ವಿವರ ಮಾಹಿತಿ: ಉದ್ಘಾಟನಾ ಸಮಾರಂಭ, ಇಷ್ಟಲಿಂಗಾರ್ಚನೆ, ಸಮುದಾಯ ಪ್ರಾರ್ಥನೆ, ಶರಣರ ಸ್ಮರಣೆ, ಸಮುದಾಯ ಪ್ರಾರ್ಥನೆ, ವೈಚಾರಿಕ ಚಿಂತನ ಗೋಷ್ಠಿ ನಡೆಯಲಿವೆ.

ಜ್ಞಾನ ದಾಸೋಹದೊಡನೆ ಅನ್ನದಾಸೋಹವನ್ನು ಸಹ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ.

ಅಲ್ಲಮಪ್ರಭು ಪೀಠಾರೋಹಣ ಕಾರ್ಯಕ್ರಮ,
ಮತ್ತು ಸಮಾರೋಪ ಸಮಾರಂಭ ಜರುಗಲಿದೆ.

ಸರ್ವರಿಗೂ ಆದರದ ಸ್ವಾಗತ:

12ನೇ ಶತಮಾನವು ವಿಶ್ವಕ್ಕೆ ಸಮಾನತೆ ಸಾರುವ ಭಾವೈಕ್ಯದ ಯುಗವಾಗಿತ್ತು. ಅಂದಿನ ಕಾಲದಲ್ಲಿ ಶರಣರು ಸಮಾನತೆಗಾಗಿ ಕ್ರಾಂತಿ ನಡೆಸಿದ ಪವಿತ್ರ ಭೂಮಿಯಲ್ಲಿ ಕಲ್ಯಾಣ ಪರ್ವ ಜರುಗುತ್ತಿದೆ. ಜೀವನಕ್ಕೆ ಬೇಕಾಗುವ ಮೌಲ್ಯಾಧಾರಿತ ಸಿದ್ಧಾಂತಗಳು ವಚನಗಳಲ್ಲಿ ಅಡಗಿವೆ.

ಇಂತಹ ವಚನಗಳಲ್ಲಿ ಅಡಗಿರುವ ಮಾನವೀಯ ಮೌಲ್ಯಗಳು ಜನರಿಗೆ ತಿಳಿಸುವ ಕಾರ್ಯ ಆಗಬೇಕಾಗಿದೆ. ವಚನ ಸಾಹಿತ್ಯವು ಲಿಂಗಾಯತ ಧರ್ಮದ ಪವಿತ್ರ ಗ್ರಂಥವಾಗಿದೆ. ಕೂಡಲಸಂಗಮ ಮತ್ತು ಬಸವಕಲ್ಯಾಣ ಕ್ಷೇತ್ರಗಳು ಮಾನವೀಯ ಸಮಾನತೆ ಸಾರಿದ ಪುಣ್ಯಕ್ಷೇತ್ರಗಳಾಗಿವೆ‌. ಲಿಂಗಾಯತರು ಒಮ್ಮೆಯಾದರೂ ಈ ಸ್ಥಳಗಳಿಗೆ ಭೇಟಿ ನೀಡಬೇಕು, ಭೇಟಿ ನೀಡಿದಾಗಲೇ ನಮ್ಮ ಜೀವನ ಪಾವನವಾಗುತ್ತದೆ. ಕಾರಣ ನಮ್ಮ ದೇಹದಲ್ಲಿ ಜೀವ ಇರುವವರೆಗೂ ಒಮ್ಮೆಯಾದರೂ ಕಲ್ಯಾಣ ಪರ್ವದಲ್ಲಿ ಭಾಗಿಯಾಗುವ ಮೂಲಕ ಪಾವನರಾಗೊಣ. ಈ ಪವಿತ್ರ ಸಮಾವೇಶ ಕಲ್ಯಾಣ ಪರ್ವಕ್ಕೆ ಜಾತಿ ಮತ ಪಂಥಗಳ ಭೇದವಿಲ್ಲದೆ, ಸರ್ವರಿಗೂ ಆದರದ ಸ್ವಾಗತವಿದೆ.

ಮಾಸ್ಕ್ ಹಾಕಿಕೊಂಡು, ದೇಹಿಕ ಅಂತರ ಕಾಪಾಡಿಕೊಂಡು, ಸರ್ಕಾರದ ನೀತಿ ನಿಯಮಗಳನ್ನು ಪಾಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಮನವಿ.

ಲೇಖಕರು – ಸಂಗಮೇಶ ಎನ್ ಜವಾದಿ.
ಪತ್ರಕರ್ತ, ಪ್ರಗತಿಪರ ಚಿಂತಕರು.
ಬೀದರ ಜಿಲ್ಲೆ.

About Shivanand

Admin : Lingayat Kranti Monthly news paper 8884000008 [email protected]

Check Also

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

ಹಡಪದರನ್ನು ನೋಡುವ ನೋಟ ಬದಲಾಗಲಿ

ಗಜೇಂದ್ರಗಡ ಜುಲೈ 25: ಅಸಮಾನತೆ, ಜಾತಿವಾದ ವ್ಯವಸ್ಥೆಯ ಈ ಸಮಾಜದಲ್ಲಿ ದಲಿತ ಜನಾಂಗದವರು ಮುಟ್ಟಿಸಿಕೊಳ್ಳದ ಅಸ್ಪೃಶ್ಯತೆಯ ಅವಮಾನಕ್ಕೊಳಗಾಗುತ್ತಿದ್ದಾರೆ. ಹಾಗೆಯೇ ಹಡಪದ …

Leave a Reply

Your email address will not be published. Required fields are marked *