Home / featured / ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ, ಇತ್ತೀಚಿಗೆ ಬೆಂಗಳೂರಿನಲ್ಲಿ ತಾವು ನೀಡಿರುವ ಹೇಳಿಕೆಯ ವಿಡಿಯೋವನ್ನು ಪತ್ರಕರ್ತರಿಗೆ ತೋರಿಸಿ, ನಂತರ ಮಾತನಾಡಿದರು..

ಈ ಹಿಂದೆ ನಾವು ವೀರಶೈವ ಒಳಗೊಂಡಂತೆ 99 ಉಪಪಂಗಡಗಳನ್ನು ಸೇರಿಸಿ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕೇಳಿದ್ದೇವು. ಮುಂದಿನ ಚುನಾವಣೆ ನಂತರ ನಾವೇಲ್ಲ ಒಗ್ಗೂಡಿ ಮುನ್ನೆಡೆಯುತ್ತೇವೆ ಎಂದು ಹೇಳಿದ್ದೆ. ಇಲ್ಲಿ ಹೋರಾಟ ಕೂಗು ಪ್ರತ್ಯೇಕ ಈ ಶಬ್ದಗಳನ್ನು ನಾನು ಬಳಸಿಯೇ ಇಲ್ಲ.

ಚುನಾವಣೆ ಮುಂಚೆ ಮಾಡಿದರೆ ಇದಕ್ಕೆ ಮತ್ತೆ ರಾಜಕೀಯ ಬಣ್ಣ ನೀಡಿ, ಅಪಪ್ರಚಾರ ಮಾಡುತ್ತಾರೆ ಎಂಬ ಕಾರಣಕ್ಕೆ ಬರುವ ಚುನಾವಣೆ ನಂತರದಲ್ಲಿ ನಾವು ಪಂಚಪೀಠಾಧಿಶರು, ವೀರಕ್ತಮಠಗಳು, ವೀರಶೈವ ಮಹಾಸಭಾ, ಜಾಗತೀಕ ಲಿಂಗಾಯತ ಮಹಾಸಭಾ ಕೂಡಿ ಚರ್ಚೆ ಮಾಡಿ ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಮುಂದುವರೆಯುತ್ತೇವೆ ಎಂದು ಬೆಂಗಳೂರಿನಲ್ಲಿ ಹೇಳಿದ್ದೆ. ಈಗ ನಾವು ಒಂದಾಗುವಾಗ ಅಥವಾ ಒಂದಾದರೆ ಇದು ಯಾರಿಗೆ ಮತ್ತು ಏಕೆ ಸಮಸ್ಯೆ? ಎಂದರು.

ನಾನು ಚುನಾವಣೆ ನಂತರ ಎಂದು ಹೇಳಿದ್ದನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಬಿಂಬಿಸಿದ್ದರಿಂದ ಬೇರೆ ಸಂದೇಶ ಹೋಗಿದೆ. ಈಗ ಯಾವುದೇ ಹೋರಾಟ, ಕೂಗು ಸದ್ಯಕ್ಕೆ ಇಲ್ಲ. ಮುಂದಿನ ದಿನಗಳಲ್ಲಿ ನಮ್ಮಲ್ಲಿನ ತಾತ್ವಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಇದಕ್ಕೆ ಎಷ್ಟು ಸಮಯ ಬೇಕಾಗುತ್ತದೆ ಎಂಬುದು ಗೊತ್ತಿಲ್ಲ. ಆದರೆ ನಮ್ಮ ಮಕ್ಕಳಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಒಳ್ಳೆಯದಾಗಬೇಕು. ಸಮಾಜದ ಮಠಗಳು, ಶಿಕ್ಷಣ ಸಂಸ್ಥೆಗಳಿಗೂ ಒಳಿತಾಗುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಮಠದ ಎಲ್ಲಾ ಶ್ರೀಗಳು, ಪಂಚಪೀಠಾಧೀಶರು, ವೀರಶೈವ ಮಹಾಸಭೆ, ಜಾಗತೀಕ ಲಿಂಗಾಯತ ಮಹಾಸಭಾ ಸೇರಿದಂತೆ ಸಮಾಜದ ಎಲ್ಲ ಗಣ್ಯರನ್ನು ಒಳಗೊಂಡು ಸಮಾಜಕ್ಕೆ ಒಳ್ಳೆಯದಾಗುವ ನಿರ್ಣಯ ಕೈಗೊಳ್ಳುತ್ತೇವೆ ಎಂದರು.

*ಸಾಮೂಹಿಕ ನಾಯಕತ್ವ :*

ಈ ವಿಚಾರದಲ್ಲಿ ನಾನು ನಾಯಕತ್ವ ವಹಿಸುವುದಿಲ್ಲ. ನಾನು ಎರಡು ಹೆಜ್ಜೆ ಹಿಂದಿಟ್ಟು, ಸಾಮೂಹಿಕ ನಾಯಕತ್ವದಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆಯೂ ಗೊತ್ತಿಲ್ಲ. ಆದರೆ ಪ್ರಾಮಾಣಿಕ ಪ್ರಯತ್ನ  ಮಾಡುತ್ತೇನೆ.

ನಾವು ಹಿಂದೆ ಹೋರಾಟ ಮಾಡಿದ್ದಾಗ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ, ಅಲ್ಪಸಂಖ್ಯಾತರ ಸ್ಥಾನಮಾನ, ಇತರೆ ಸೌಲಭ್ಯಗಳು ಸಿಗುತ್ತಿದ್ದವು. ಎಂಜಿನಿಯರಿಂಗ್, ಮೆಡಿಕಲ್ ಮತ್ತು ಡೆಂಟಲ್ ಶಿಕ್ಷಣದಲ್ಲಿ ಶೇ.50ರಷ್ಟು ಮೀಸಲಾತಿ ಸಿಗುತ್ತಿತ್ತು. ಯುಪಿಎಸ್‍ಸಿ ಯಿಂದ ಕೆಪಿಎಸ್‍ಸಿ ಯವರಿಗೆ ಕೇಂದ್ರದಿಂದ ರಾಜ್ಯದವರೆಗೆ ಉದ್ಯೋಗಗಳಲ್ಲಿ ಮೀಸಲಾತಿ ದೊರಕುತಿತ್ತು. ಆದರೆ ಅಂದು ಸಮಯದ ಅಭಾವದಿಂದ ಮತ್ತು ಗಡಿಬಿಡಿಯಲ್ಲಿ ನಮ್ಮಿಂದಲೂ ಸಣ್ಣ ಪುಟ್ಟ ಲೋಪದೋಷದಿಂದ ಆ ಕೆಲಸ ಆಗಲಿಲ್ಲ. ಅಂದು ಚುನಾವಣೆ ಹತ್ತಿರವಿದ್ದ ಸಂದರ್ಭದಲ್ಲಿ ಇದಕ್ಕೆ ರಾಜಕೀಯ ಬಣ್ಣ ನೀಡಿದರು.

ಈ ಹಿಂದೆ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವಂತೆ ವೀರಶೈವ ಮಹಾಸಭೆಯವರು ಮನವಿ ಸಲ್ಲಿಸಿದ್ದರು. ಆದರೆ ಶಬ್ದದ ತಾಂತ್ರಿಕ ಬಳಕೆಯ ತೊಂದರೆಯಿಂದಾಗಿ ಆ ಬೇಡಿಕೆ ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ನಾವು ಲಿಂಗಾಯತ ಸ್ವತಂತ್ರ ಧರ್ಮದ ಬೇಡಿಕೆ ಇಟ್ಟುಕೊಂಡು ಹೋರಾಟ ಮಾಡಿದ್ದೇವು. ಈ ಹೋರಾಟವನ್ನು ಮೊದಲು ಬೀದರ ಮತ್ತು ಬೆಳಗಾವಿಯಲ್ಲಿ ಆರಂಭ ಮಾಡಲಾಗಿತ್ತು. ಅದರ ನಂತರ ನಾನು ಹೋರಾಟದಲ್ಲಿ ಪಾಲ್ಗೊಂಡಿದ್ದೆ ಹೊರತು ನಾನು ಈ ಹೋರಾಟವನ್ನು ಆರಂಭಿಸಿರಲಿಲ್ಲ.

ಒಂದು ವೇಳೆ ಈಗಾಗಲೇ ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ನಮ್ಮ ಉಪಪಂಗಡಗಳು 2ಎ ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ. ಪಂಚಮಸಾಲಿ ಸೇರಿದಂತೆ ಬಹುತೇಕ ಎಲ್ಲ ಸಮಾಜಗಳು ಕೃಷಿ ಆಧಾರಿತ ಜೀವನ ಸಾಗಿಸುತ್ತೀವೆ. ಅವರಲ್ಲೂ ಬಡತನವಿದೆ. ಈ ಹಿನ್ನೆಲೆಯಲ್ಲಿ ಕೂಡಲಸಂಗಮ ಮತ್ತು ಹರಿಹರ ಸ್ವಾಮಿಜಿಗಳು ಹೋರಾಟ ಮಾಡುತ್ತಿದ್ದಾರೆ ಅದು ತಪ್ಪಲ್ಲ. ಈ ಸ್ವಾಮಿಜಿಗಳು ನಡೆಸಿದ ಹೋರಾಟದಲ್ಲಿ ನಾನು ಕೂಡ ಚಿತ್ರದುರ್ಗಕ್ಕೆ ತೆರಳಿ ಪಾಲ್ಗೊಂಡು, ನ್ಯಾಯಯುತ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ್ದೇನೆ ಎಂದರು.

ಮಾಧ್ಯಮದರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಬೇಡಿಕೆಗಳಿಗೂ ಮತ್ತು ಕಾಂಗ್ರೆಸ್ ಪಕ್ಷಕ್ಕೂ ಈ ಹಿಂದೆಯೂ ಸಂಬಂಧವಿರಲಿಲ್ಲ. ಇಂದೂ ಸಂಬಂಧವಿಲ್ಲ. ಮುಂದೆಯೂ ಸಂಬಂಧವಿರಲ್ಲ. ಈ ವಿಷಯದಲ್ಲಿ ಯಾರಲ್ಲಿಯೂ ಭಿನ್ನಾಭಿಪ್ರಾಯ ಬರುವ ಪ್ರಶ್ನೆಯೇ ಇಲ್ಲ. ನಾವು ಈಗ ಒಗ್ಗಟ್ಟಾಗುತ್ತಿದ್ದೇವೆ. ಇದರಲ್ಲಿ ಯಾರಿಗೆ ತೊಂದರೆ ಆಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ನಾನು ಬೆಂಗಳೂರಿನಲ್ಲಿ ನೀಡಿರುವ ಹೇಳಿಕೆಯ ಕುರಿತು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಈ ಮಧ್ಯೆ ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಆಗಿರುವ ಹಿನ್ನೆಲೆಯಲ್ಲಿ 2023ರ ಚುನಾವಣೆ ದೃಷ್ಠಿಯಿಂದ ಈ ವಿಚಾರ ಪ್ರಸ್ತಾಪಿಸುತ್ತಿದ್ದೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ಎಂ.ಬಿ.ಪಾಟೀಲ ಅವರು, ಕಾಂಗ್ರೆಸ್ ನಲ್ಲಿ 113 ಸ್ಥಾನಗಳನ್ನು ಗೆದ್ದ ನಂತರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಯಾವುದೇ ಸಮುದಾಯ, ಯಾವುದೇ ಪಕ್ಷಗಳಲ್ಲಿ ನಾವೇ ನಾಯಕರಾಗುತ್ತೇವೆ ಎಂದರೆ ಸಾಧ್ಯವಿಲ್ಲ. ಜನ ಒಪ್ಪಿ ಬೆಂಬಲ ನೀಡಿದಾಗ ಮಾತ್ರ ನಾವು ನಾಯಕರಾಗುತ್ತೇವೆ. ನಾನು ಈ ಹಿನ್ನೆಲೆಯಲ್ಲಿಯೇ ಚುನಾವಣೆಯ ನಂತರ ಸಭೆ ಸೇರುತ್ತೇನೆ ಎಂದು ಹೇಳಿದ್ದೇನೆ. ಈಗಲೇ ಹೇಳಿದರೆ ಅದಕ್ಕೆ ರಾಜಕೀಯ ಬಣ್ಣ ಕೊಡುತ್ತಾರೆ ಎಂಬ ಪರಿಜ್ಞಾನವು ನನಗೆ ಇದೆ ಎಂದು ಉತ್ತರಿಸಿದರು.

ತಾವು ಹೋರಾಟದಿಂದ ಹೆದರಿ ಹಿಂದೆ ಸರಿಯುತ್ತಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ತಂದೆ–ತಾಯಿ ಬಿಟ್ಟು ಯಾರಿಗೂ ಹೆದರಲ್ಲ. ನಾನು ಈ ಹಿಂದೆಯೂ ತಪ್ಪು ಮಾಡಿಲ್ಲ. ಇಂದು ಮಾಡಿಲ್ಲ. ಮುಂದೆಯೂ ತಪ್ಪು ಮಾಡಲ್ಲ. ಬೀದರನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮನದಾಳದ ಮಾತನ್ನು ಹೇಳಿದ್ದೇನೆ. ಕಳೆದ ಹೋರಾಟದ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳಿಂದ ಪೆಟ್ಟು ತಿಂದಿದ್ದೇನೆ. ಅಧಿಕಾರ ಕಳೆದುಕೊಂಡಿದ್ದೇನೆ ಎಂದು ಅಂದು ಮನದಾಳದ ಮಾತನ್ನು ಹೇಳಿದ್ದೇನೆ. ಇದರಲ್ಲಿ ನನಗೆ ಯಾವುದೇ ರಾಜಕೀಯ ಅಜಂಡಾ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ಈ ಕುರಿತು ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತನಾಡುತ್ತೀರಾ? ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಆ ವಿಚಾರವಿಲ್ಲ. ಆದ್ಯಾಗ್ಯೂ ಯಡಿಯೂರಪ್ಪನವರು ನಮ್ಮ ಸಮಾಜದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳು. ಚುನಾವಣೆ ನಂತರ ಆ ಸಂದರ್ಭ ಬಂದಾಗ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ತಮ್ಮ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆಯಾಗಿದೆ? ಎಂದು ಕೆಲವರು ನೀಡಿರುವ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಮುಜುಗರ ಆಗುವುದಿಲ್ಲ.  ಈ ಹಿಂದೆ ನಾನು ಹೋರಾಟ ಮಾಡಿದಾಗ ಕಾಂಗ್ರೆಸ್ ಪಕ್ಷಕ್ಕೆ ಯಾವುದೆ ಹಿನ್ನೆಡೆ ಆಗಿಲ್ಲ. 2008ರಲ್ಲಿ ಹಾಗೂ 2013ರಲ್ಲಿ ಬಂದಷ್ಟೆ ಲಿಂಗಾಯತ ಮತಗಳು 2018ರಲ್ಲಿಯೂ ಬಂದಿದ್ದನ್ನು ದಾಖಲೆ ಸಮೇತ ಈ ಹಿಂದೆಯೆ ಮಾಹಿತಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈ ಹೋರಾಟದಲ್ಲಿ ತಮ್ಮನ್ನು ಕೆಲವರು ಬೆಂಬಲಿಸುತ್ತಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನನ್ನ ಹೇಳಿಕೆ ಸ್ಪಷ್ಟವಾಗಿದೆ. ಇದಕ್ಕೆ ರಾಜಕೀಯ ಬಣ್ಣ ಕೊಡುತ್ತಾರೆ ಎಂಬದು ನನಗೆ ಮೊದಲೇ ಗೊತ್ತಿತ್ತು. ಕಾಂಗ್ರೆಸ್ ಪಕ್ಷಕ್ಕೂ ನನ್ನ ಹೇಳಿಕೆಗೂ ಈ ಹಿಂದೆಯೂ ಯಾವುದೇ ಸಂಬಂಧವಿಲ್ಲ, ಇಂದು ಸಂಬಂಧವಿಲ್ಲ. ಮುಂದೆಯೂ ಸಂಬಂಧವಿಲ್ಲ. ಡ್ಯಾಮೆಜ್ ಕೂಡ ಆಗಲ್ಲ. ವೀರಶೈವ-ಲಿಂಗಾಯತರು ಒಂದಾಗಿ ಹೋದರೆ ಕಾಂಗ್ರೆಸ್‍ಗೆ ಏನು ಸಮಸ್ಯೆಯಾಗುತ್ತೆ? ಎಂದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

Leave a Reply

Your email address will not be published.