Home / featured / ಪುನೀತ ರಾಜಕುಮಾರ

ಪುನೀತ ರಾಜಕುಮಾರ

ಆಡಿಸಿದಾತ ಬೇಸರ ಮೂಡಿ ಆಟ ಮುಗಿಸಿದ, ಸೂತ್ರವ ಹರಿದ… ಬೊಂಬೆಯ ಮುರಿದ… ಮಣ್ಣಾಗಿಸಿದ, ಎನ್ನುವ ಮಾತುಗಳು ಸಧ್ಯ ನೆನಪಿಗೆ ಬರುತ್ತಿವೆ. ಯಾಕೆಂದರೆ ಕನ್ನಡ ಚಿತ್ರರಂಗದ ಖ್ಯಾತ ನಟ, ನಾಡು ಕಂಡ ಅಪ್ರತಿಮ ಶ್ರೇಷ್ಠ ನಾಯಕ ನಟನಾಗಿ ಮಿಂಚಿ, ಸಮಸ್ತ ಕನ್ನಡಿಗರ ಹೃದಯ ಗೆದ್ದ, ಕೋಟ್ಯಾಂತರ ಅಭಿಮಾನಿಗಳ ಹೃದಯದ ಸಿಂಹಾಸನಾಧೀಶ್ವರರಾಗಿ ಮರೆದ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ ಇನ್ನಿಲ್ಲ ಎಂಬ ಅಗಲಿಕೆಯ ನೋವು, ಇಡೀ ಕರ್ನಾಟಕಕ್ಕೆ ಬರಸಿಡಿಲು ಬಡಿದಂತಾಗಿದೆ. ಮಾತುಗಳು ಬಾರದೆ ಮೌನವಾಗಿವೆ.ಮನಸ್ಸು ಭಾರವಾಗಿದೆ.

ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ ಮಗನಾಗಿ 17 ಮಾರ್ಚ್,1975 ಜನಿಸಿದರು. ರಾಜಕುಮಾರ್ ದಂಪತಿಯ ಕಿರಿಯ ಮಗ. ಪುನೀತರ ಮೊದಲ ಹೆಸರು ಲೋಹಿತವಾಗಿತ್ತು. ಚಿತ್ರರಂಗ ಪ್ರವೇಶ ಪಡೆದ ನಂತರ ಪುನೀತ್ ರಾಜಕುಮಾರ ಆದರು.ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ರಾಜಕುಮಾರ ರವರು ಅಶ್ವಿನಿ ರೇವಂತ್ ರನ್ನು ವಿವಾಹವಾಗಿದ್ದಾರೆ.ಇವರಿಗೆ ಇಬ್ಬರು ಪುತ್ರಿಯರಿದ್ದಾರೆ ದ್ರಿತಿ ಮತ್ತು ವಂದಿತಾ. ಇವರು ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡಿರುತ್ತಾರೆ . ಹಲವು ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದಿವೆ. ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದರು. ಮೊದಲ ಪ್ರಮುಖ ಪಾತ್ರ 2002 ರಲ್ಲಿ ಅಪ್ಪು ಅಭಿನಯಿಸಿದ ನಂತರ, ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿ ಜನರಿಂದ ಅಪಾರ ಮನ್ನಣೆ, ಗೌರವ, ಖ್ಯಾತಿಯನ್ನು ಪಡೆದಿದ್ದಾರೆ.

ಹೀಗೆ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ ಮೇರು ನಟ, ವಿಶಾಲ ದೂರದೃಷ್ಟಿ ಹೃದಯವಂತ, ನೊಂದವರ ನೆರವಿಗಾಗಿ ಧಾವಿಸಿ ಅದೆಷ್ಟೋ ಹಿರಿಯರಿಗೆ, ಮಕ್ಕಳಿಗೆ ಆಶ್ರಯ ನೀಡಿ, ನಿತ್ಯ ನಿರಂತರವಾಗಿ ದಾಸೋಹ ಸೇವೆ ಸಲ್ಲಿಸಿ, ಎಲ್ಲರಿಂದಲೂ ಸೈ ಎನಿಸಿಕೊಂಡ ಪುನೀತ್ ರಾಜಕುಮಾರ್ ನಿಸ್ವಾರ್ಥ ಸೇವೆ ಅಜರಾಮರ ಎಂದರೆ ತಪ್ಪಾಗಕಿಲ್ಲ.

ಅತ್ಯಂತ ಕಡಿಮೆ ವಯಸ್ಸಿನಲ್ಲಿ ಉತ್ತಮ ಸಾಧನೆ ಮಾಡಿ ಯುವಕರಿಗೆ ಸ್ಫೂರ್ತಿಯಾಗಿ, ಅನೇಕ ಸಾಮಾಜಕ ಜನೋಪಯೋಗಿ ಕಾರ್ಯಗಳಲ್ಲಿ ತನ್ನನ್ನು ತಾನು

ತೊಡಗಿಸಿಕೊಂಡು ಕನ್ನಡ ಚಿತ್ರರಂಗಕ್ಕೆ ತನ್ನದೇಯಾದ ವಿಶೇಷ ಕೊಡುಗೆ ನೀಡಿ,ಜನಮಾನಸದಲ್ಲಿ ನೆಲೆ ನಿಂತ ಕರುನಾಡಿನ ಕುವರ.

ಕನ್ನಡ ನಾಡು ನುಡಿ ಜಲ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಡಿದ, ಮಾನವೀಯ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಷ್ಟೋ ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದ. ಶ್ರೀಮಂತ ಇದ್ದರೂ ಅಹಂ ತೋರದೆ ಸರಳ ವ್ಯಕ್ತಿತ್ವ ಹೊಂದಿದ್ದ.ದೊಡ್ಮನೆ ಹುಡಗ, ನಟಸಾರ್ವಭೌಮ,ವೀರ ಕನ್ನಡಿಗನಾಗಿ, ಕರುನಾಡನ್ನು ಪ್ರೀತಿಸಿದ.

ಕನ್ನಡದ ಕೋಟ್ಯಾಧಿಪತಿಯಾಗಿ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಹಿರಿಯರು, ಕಿರಿಯರೆನ್ನದೆ ಎಲ್ಲರನ್ನೂ ಅತ್ಯಂತ ಗೌರವಯುತವಾಗಿ ಕಾಣುತ್ತಿದ್ದ ನಾಯಕ ಎಂದರೆ ತಪ್ಪಾಗಲಾರದು.ಬಾಲ ನಟರಾಗಿ, ನಾಯಕ ನಟರಾಗಿ, ಗಾಯಕರಾಗಿ, ದೂರದರ್ಶನದ ನಿರೂಪಕರಾಗಿ, ಅಪಾರ ಜನ ಮನ್ನಣೆ ಗಳಿಸಿದ ಪುನೀತ್ ರಾಜ್ ಕುಮಾರ ಅಗಲಿಕೆ ಕನ್ನಡ ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ. ಬೆಟ್ಟದ ಹೂ, ಪ್ರೇಮದ ಕಾಣಿಕೆ, ರಾಜಕುಮಾರ, ಮಿಲನ, ಯುವರತ್ನ ಹೀಗೆ ನೂರಾರು ಸಿನಿಮಾಗಳಲ್ಲಿ ನಟನೆ ಮಾಡಿ, ವಿವಿಧ ಪಾತ್ರಗಳಿಗೆ ಜೀವ ತುಂಬುವುದರ ಮೂಲಕ ಅಭಿಮಾನಿಗಳ ಮನದಂಗಳದಲ್ಲಿ ಅಜರಾಮರಾಗಿ ಉಳಿದ ಶ್ರೇಷ್ಠ ನಟನಾಗಿದ್ದಾರೆ.ಎಷ್ಟು ವರ್ಷ ಬದುಕಿದ್ದೇ ಅನ್ನೋದು ಮುಖ್ಯ ಅಲ್ಲ.ಬದುಕಿದ್ದಷ್ಟು ವರ್ಷ, ಹೆಂಗೆ ಬದುಕಿದೆ ಅನ್ನೋದು ಮುಖ್ಯ ಎನ್ನುವುದನ್ನು ನಾಡಿಗೆ ತೋರಿಸಿಕೊಟ್ಟ ಮೇಧಾವಿ ನಟ,ನಿಮ್ಮ ಅಗಲಿಕೆ ಕನ್ನಡ ಚಿತ್ರರಂಗಕಷ್ಟೆ ಅಲ್ಲ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟವಾಗಿದೆ. ನಿಮ್ಮ ಅಭಿಮಾನಿಗಳು ಹಾಗೂ ನಿಮ್ಮ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ.

ನಮನ : ಅಗಲಿದ ಮಾಹಾಚೇತನಕ್ಕೆ ಭಕ್ತಿಯ ನಮನಗಳು ಸಲ್ಲಿಸುತ್ತೇನೆ.

******

ಸಂಗಮೇಶ ಎನ್ ಜವಾದಿ, ಬೀದರ ಜಿಲ್ಲೆ.
ಸಾಹಿತಿ, ಪತ್ರಕರ್ತ.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.