Home / featured / ಶರಣ ಶ್ರೀ ಡಾ. ಈಶ್ವರ ಮಂಟೂರ ಲಿಂಗೈಕ್ಯ: ಅವರ ಸಾಧನೆ ಹಾದಿಯ ಸಂಕ್ಷಿಪ್ತ ಪರಿಚಯ

ಶರಣ ಶ್ರೀ ಡಾ. ಈಶ್ವರ ಮಂಟೂರ ಲಿಂಗೈಕ್ಯ: ಅವರ ಸಾಧನೆ ಹಾದಿಯ ಸಂಕ್ಷಿಪ್ತ ಪರಿಚಯ

ಶರಣ ಶ್ರೀ ಡಾ. ಈಶ್ವರ ಮಂಟೂರ ಅವರು ಕವಿಯಾಗಿ, ಚಿಂತಕರಾಗಿ, ಅನುಭಾವಿ ಪ್ರವಚನಕಾರರಾಗಿ, ಸಾಹಿತಿಗಳಾಗಿ, ಸಮಾಜೋದ್ಧಾರ್ಮಿಕ ಕಾರ್ಯಗಳನ್ನು ಮಾಡುತ್ತ ಮುನ್ನಡೆದಿದ್ದರು. ಕಲ್ಲು ಮನಸ್ಸಿನ ಹೃದಯಗಳನ್ನು ಹೂವಿನಂತೆ ಅರಳಿಸುವ ಕ್ರೂರಿಗಳ ಭಾವದಲ್ಲಿ ದಯೆಯನ್ನು ತುಂಬುವ, ದ್ವೇಷಿಗಳ ಮನದಲ್ಲಿ ಪ್ರೀತಿಯ ಹಣತೆಯನ್ನು ಹಚ್ಚುವ, ವಿನಯಗುಣ ಸರಳ ಸಂಪನ್ನ ಶರಣರಾದ ಇವರ ತ್ಯಾಗ, ಸೇವೆ ಅನುಪಮವಾದುದು.

ಶರಣ ಶ್ರೀ ಡಾ. ಈಶ್ವರ ಮಂಟೂರ ಅವರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುನ್ನೂರಿನ ‘ಕಲಾನೇಕಾರ’ ಕುಟುಂಬದಲ್ಲಿ 23-03-1972 ರಂದು ತಂದೆ ಶ್ರೀಶೈಲಪ್ಪ ತಾಯಿ ಅನ್ನಪೂರ್ಣ ಶರಣ ದಂಪತಿಗಳ ಪುಣ್ಯ ಉದರದಿಂದ ಜನ್ಮ ತಾಳಿದವರು. ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಸಂಗೀತ, ಸಾಹಿತ್ಯ, ಭಜನೆ, ಪುರಾಣ, ಪ್ರವಚನ ಮುಂತಾದ ಕಲೆಗಳನ್ನು ಮೈಗೂಡಿಸಿಕೊಂಡು ಬೆಳೆದವರು, ತಿಳಿಯಲಾರದ ಘನವನ್ನು ತಿಳಿಯುವ ಕಾಣಬಾರದ ಪರವಸ್ತುಗಳನ್ನು ಕಾಣುವ ಅಂತರಂಗದ ರತ್ನವಾದ ಆತ್ಮವಿದ್ಯೆಯ ಕಡೆಗೆ ಒಲವು ತೋರಿದವರು.

ಪೂಜ್ಯ ಶರಣರು 1993 ರಲ್ಲಿ ಬಿ.ಕಾಂ. ಪದವಿ ಪಡೆದು, ಅಣ್ಣಾಗೃಹಪಾಠ ಶಿಕ್ಷಣ ಕೇಂದ್ರ ಆರಂಭಿಸಿ ಐದು ವರ್ಷಗಳ ಕಾಲ ಜ್ಞಾನಚಿಂತನದಡಿಯಲ್ಲಿ ಆಧ್ಯಾತ್ಮಿಕ ತಳಹದಿಯ ಮೇಲೆ ಸಹಸ್ರಾರು ಮಕ್ಕಳಿಗೆ ಜ್ಞಾನದಾಸೋಹ ನೀಡುತ್ತಲೇ ಬ್ಯಾಂಕಿನಲ್ಲಿ ಕರಣಿಕರಾಗಿ ಸೇವೆ ಸಲ್ಲಿಸಿದವರು.

ಬಸವಾದಿ ಶಿವಶರಣರ ತತ್ತ್ವಸಿದ್ಧಾಂತಗಳನ್ನು ಅಪ್ಪಿಕೊಂಡ ಶರಣ ಈಶ್ವರ ಮಂಟೂರ ಅವರು ಪ್ರವಚನಗಳ ಮೂಲಕ ನಾಡಿನ ಜನಮನದಲ್ಲಿ ಬಸವತತ್ವವನ್ನು ಬಿತ್ತರಿಸುವ ಸಂಕಲ್ಪ ತೊಟ್ಟ ಇವರು ಬ್ಯಾಂಕ್ ಹುದ್ದೆಗೆ ರಾಜೀನಾಮೆ ನೀಡಿ, ಶರಣ ಪಥದಲ್ಲಿ ಹೆಜ್ಜೆಯಿರಿಸಿದವರು.

ನಾಡಿನ ದೇಶೀ ಕಲೆಗಳನ್ನು ಉಳಿಸಿ ಬೆಳೆಸಲು ‘ರಾಗರಶ್ಮಿ’ ಎಂಬ ಹತ್ತು ಕಲಾವಿದರ ಜಾನಪದ ಬಳಗ ಕಟ್ಟಿಕೊಂಡು ಹಳ್ಳಿ-ಹಳ್ಳಿಗೆ ಸಂಚರಿಸಿ, ಸುಗಮ ಸಂಗೀತ ಕ್ಷೇತ್ರವನ್ನು ಶ್ರೀಮಂತಗೊಳಿಸಿದವರು. ಸಮಾಜದ ಏಳ್ಗೆಗಾಗಿ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾದ ಗಡಿಭಾಗದಲ್ಲೆಲ್ಲಾ ಶರಣರಂತೆ ಸಂಚರಿಸಿ, ಬೆಹರೀನ್, ದುಬೈ ರಾಷ್ಟ್ರಗಳಲ್ಲೂ ಶರಣ ಸಂಸ್ಕೃತಿಯ ಪ್ರಚಾರ-ಪ್ರಸಾರ, ವಚನ ಪ್ರವಚನ ಮಾಡಿದ ಕೀರ್ತಿ ಈ ಶರಣರಿಗೆ ಸಲ್ಲುತ್ತದೆ.

ಶ್ರೇಷ್ಠ ಅನುಭಾವಿ ಪ್ರವಚನಕಾರರಾದ ಶರಣ ಶ್ರೀ ಡಾ. ಈಶ್ವರ ಮಂಟೂರ ಅವರು ಗೀತ ರಚನಕಾರರು ಹಾಗೂ ಶ್ರೇಷ್ಠ ಸಂಗೀತಗಾರರು. ಬಸವಭಾವ ಗೀತೆಗಳು, ಬಸವಭಾವ ಪೂಜೆ, ವಚನವಂದನೆ, ತವರಿನ ತಾವರೆ ಮುಂತಾದ ಭಕ್ತಿ ಪರವಶೆಯ ಹತ್ತಾರು ಸಿ. ಡಿ., ವ್ಹಿ.ಸಿ.ಡಿ ಗಳು ಕನ್ನಡಿಗರ ಕೈ ಸೇರುವುದರ ಜೊತೆಗೆ, ದೇಶ-ವಿದೇಶಗಳಲ್ಲಿರುವ ಕನ್ನಡದ ಮನೆಗಳಲ್ಲಿ ಸಂಭ್ರಮಿಸುತ್ತಿವೆ. ನೆತ್ತಿಗೆ ಬುತ್ತಿ, ಅಂತರಂಗದ ಮೃದಂಗ, ಪುಟ್ಟಹಣತೆ, ವಚನ ಹನಿ, ಮಹಾಂತ ಜೋಳಿಗೆ, ವಚನವೃಕ್ಷ ಮುಂತಾದ ಕೃತಿ ಕುಸುಮಗಳು ಓದುಗರ ಅಭಿಮಾನಕ್ಕೆ ಸಾಕ್ಷಿಯಾಗಿವೆ.

ಪ್ರವಚನ ಭಾಸ್ಕರ, ಪ್ರವಚನ ಪ್ರಭಾಕರ, ಪ್ರವಚನ ಚೇತನ, ಪ್ರವಚನ ಭೂಷಣ, ಸಂಗೀತ ಸುಧಾಕರ, ಕಂಚಿನಕಂಠದ ವೀರವಾಣಿ, ಶರಣಶ್ರೀ ಶ್ರೇಷ್ಠ ಕವಿ, ಅನಾಥ ಮಕ್ಕಳ ತಾಯಿ, ಅಬಲೆಯ ಬಂಧು, ಉತ್ಸಾಹದ ಖಣಿ, ಸಾಹಿತ್ಯದ ಚಿಲುಮೆ, ಮುಂತಾದ ಗೌರವ ಬಿರುದುಗಳಿಗೆ ಭಾಜನರಾಗಿದ್ದಾರೆ.

ಎಂ. ಎ. ಪದವಿ ಪಡೆದ ಶರಣರು ಸತತ ಅಧ್ಯಯನ, ಕಠಣ ಪರಿಶ್ರಮ, ಅಂದು ಕೊಂಡದ್ದನ್ನು ಸಾಧಿಸುವ ಛಲ, ನಿರಂತರ ಚಿಂತನದ ಫಲವಾಗಿ ಸ್ವತಃ ಖ್ಯಾತ ಪ್ರವಚನಕಾರರಾಗಿರುವುದರಿಂದ ತಮ್ಮ ಪ್ರವಚನ ಕ್ಷೇತ್ರವನ್ನೇ ಆಧಾರವಾಗಿಟ್ಟುಕೊಂಡು ಇದುವರೆಗೂ ಅಧ್ಯಯನಕ್ಕೆ ಒಳಪಡದ “ಕನ್ನಡದಲ್ಲಿ ಪ್ರವಚನ ಸಾಹಿತ್ಯ” ಪಿಎಚ್.ಡಿ. ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ 2013 ಡಿಸೆಂಬರ್ 21ರ ನುಡಿಹಬ್ಬದ ಸಂಭ್ರಮದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವುದು ಅಭಿಮಾನದ ಸಂಗತಿ.

ಜಮಖಂಡಿ ತಾಲೂಕಿನ ಹುನ್ನೂರ-ಮಧುರಖಂಡಿಯ ಸುಂದರ ಪರಿಸರದಲ್ಲಿ ಬೆಟ್ಟದ ಇಳಿಜಾರುವಿನಲ್ಲಿ “ಬಸವಜ್ಞಾನ ಗುರುಕುಲ” ಸಾಂಸ್ಕೃತಿಕ, ಧಾರ್ಮಿಕ, ಆಧ್ಯಾತ್ಮಿಕ ಯೋಗಾಶ್ರಮವನ್ನು ಸ್ಥಾಪಿಸಿದ್ದಾರೆ. ಈ ಆಶ್ರಮದಲ್ಲಿ ನಾಡಿನ ಅನಾಥ ಬಡಮಕ್ಕಳಿಗೆ ಅನ್ನ, ವಸ್ತ್ರ, ಆಶ್ರಯ, ಶಿಕ್ಷಣ, ಸಂಸ್ಕಾರ ನೀಡುವುದರ ಜೊತೆಗೆ ಸಂಗೀತ, ಗಣಕಯಂತ್ರ ಜ್ಞಾನ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ‘ವ್ಯಕ್ತಿತ್ವ ವಿಕಸನ ಶಿಬಿರ’, ಪರಿಸರ ಸಂರಕ್ಷಣೆ, ನೇತ್ರದಾನ, ರಕ್ತದಾನ, ಉಚಿತ ಆರೋಗ್ಯ ಶಿಬಿರಗಳು, ಪುಸ್ತಕ ಪ್ರಕಟಣೆ, ಪ್ರತಿ ತಿಂಗಳ ಕೊನೆಯ ಶನಿವಾರ ‘ಶಿವಾನುಭವ ಸಂಪದ’ ಮಾಸಿಕ ಕಾರ್ಯಕ್ರಮ ನಿರಂತವಾಗಿ ನಡೆಯುತ್ತಿದ್ದವು.

ಪ್ರತಿ ವರ್ಷ ಡಿಸೆಂಬರ್ 25, 26 ಮತ್ತು 27 ಮೂರು ದಿನಗಳ ಕಾಲ ‘ಶರಣ ಸಂಸ್ಕೃತಿ ಉತ್ಸವ ಹಾಗೂ ಜಾನಪದ ಕಲಾಮಹೋತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದ್ದರು.

ಈ ಮೂಲಕ ನೆಲ-ಜಲ, ಕಲೆ, ಕೃಷಿ, ದಾಸೋಹ ನಾಡು-ನುಡಿ ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸಿದ ಸಾಧಕರಿಗೆ ರಾಜ್ಯಮಟ್ಟದ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವುದು ಇವರ ಆಶ್ರಮದ ವಿಶೇಷತೆ. ನೂರಾರು ಜನ ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಗೌರವಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ‘ಎನಗಿಂತ ಕಿರಿಯರಿಲ್ಲ’ ಎಂಬುದಕ್ಕೆ ರೂಪಕವಾಗಿದ್ದು ಕಾಯಕದಲ್ಲೇ ಕೈಲಾಸ ಇದೆ ಎಂಬುದನ್ನು ಕರಸ್ಥಲದಲ್ಲಿ ಪ್ರತಿಷ್ಠಾಪಿಸಿಕೊಂಡ ಶಿವಾನುಭಾವಿ ಶರಣ.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.