ಲಿಂಗಾಯತ ದಿನದರ್ಶಿಕೆ – 2022 ಬಿಡುಗಡೆ
nagaraj
December 25, 2021
General News, ಬೆಳಗಾವಿ
ಮೂಡಲಗಿ: ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ ‘ಲಿಂಗಾಯತ’ ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು.
ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ‘ಲಿಂಗಾಯತ’ ದಿನದರ್ಶಿಕೆ ೨೦೨೨ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಸಮಾನತೆ ಹೊಂದಿದ್ದ ಸಮಾಜದಲ್ಲಿ ಸಮಾನತೆ ತಂದದ್ದೇ ಲಿಂಗಾಯತ ಧರ್ಮ. ಇಂಥ ಧರ್ಮದ ಬಗ್ಗೆ ಎಲ್ಲರಿಗೂ ಮಾಹಿತಿ ಸಿಗಲಿ ಎಂಬ ಉದ್ದೇಶದಿಂದ ಈ ಕ್ಯಾಲೆಂಡರ್ ಸಿದ್ಧಪಡಿಸಲಾಗಿದೆ. ಇದರಲ್ಲಿ ಲಿಂಗಾಯತ ಧರ್ಮದ ವಿಸ್ತೃತ ಮಾಹಿತಿ ಸಿಗುತ್ತದೆ. ಈ ಕ್ಯಾಲೆಂಡರ್ ಪ್ರತಿಯೊಬ್ಬರ ಮನೆಯಲ್ಲೂ ಇರಬೇಕು ಎಂದರು.
ಬಿಜೆಪಿ ಮುಖಂಡ ಪ್ರಕಾಶ ಮಾದರ ಮಾತನಾಡಿ, ೧೨ ನೇ ಶತಮಾನದ ಬಸವಣ್ಣನವರು ಒಬ್ಬ ವಿಶ್ವಗುರು. ಅಂದು ಅವರು ಸಮಾನತೆಗೆ ಹೋರಾಡದಿದ್ದರೆ ಇಂದು ನಮ್ಮ ಸಮಾಜ ಹಲವು ಮೂಢನಂಬಿಕೆಗಳಿಗೆ ಸಿಲುಕಿ ಒದ್ದಾಡುತ್ತಿತ್ತು. ಬಸವಣ್ಣನವರು ಆಗಿನ ಕಾಲದಲ್ಲಿಯೇ ಸಂಸತ್ತನ್ನು ರಚಿಸಿ ಪ್ರಜಾಪ್ರಭುತ್ವದ ಕಲ್ಪನೆ ಮೂಡಿಸಿದ್ದರು. ಅವರ ಮಾರ್ಗದಲ್ಲಿಯೇ ಇಂದು ಲಿಂಗಾಯತ ಧರ್ಮ ಹೊರಟಿದೆ. ಲಿಂಗಾಯತ ದಿನದರ್ಶಿಕೆ ಬಿಡುಗಡೆ ಮಾಡಿದ್ದು ಸೂಕ್ತವಾಗಿದೆ. ಇದರಿಂದ ಸಮಾಜದಲ್ಲಿ ಸಮಾನತೆ ಮೂಡಲಿ ಎಂದು ಆಶಯ ನುಡಿ ನುಡಿದರು.
ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹಾಗೂ ಮಲ್ಲಪ್ಪ ಮದಗುಣಕಿ ಮಾತನಾಡಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಜಿ ಢವಳೇಶ್ವರ, ಪಂಚಮಸಾಲಿ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ, ಈಶ್ವರ ಮುರಗೋಡ, ಅರಭಾವಿ ಬ್ಲಾಕ್ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಶುಭೋದಯ ಸ್ವಾಭಿಮಾನಿ ಕನ್ನಡ ಬಳಗದ ಅಧ್ಯಕ್ಷ ಸುಭಾಸ ಕಡಾಡಿ, ಅಜ್ಜಪ್ಪ ಅಂಗಡಿ, ಈಶ್ವರ ಢವಳೇಶ್ವರ, ಅಣ್ಣೇಶಗೌಡಾ ಉಳ್ಳಾಗಡ್ಡಿ, ಬಸವರಾಜ ಕೌಜಲಗಿ, ರುದ್ರಪ್ಪ ವಾಲಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಈಶ್ವರ ಢವಳೇಶ್ವರ ಮೂಡಲಗಿ
Check Also
ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …
ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …
ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …