Home / featured / ಚಂಪಾ ಲಿಂಗೈಕ್ಯ

ಚಂಪಾ ಲಿಂಗೈಕ್ಯ

ಲಿಂಗಾಯತ ಕ್ರಾಂತಿ: ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದ ಚಂದ್ರಶೇಖರ ಪಾಟೀಲ ಅವರು ಇಂದು ಲಿಂಗೈಕ್ಯರಾಗಿದ್ದಾರೆ.

ಚಂದ್ರಶೇಖರ ಪಾಟೀಲರು
ಜೂನ್ ೧೮, ೧೯೩೯ ರಂದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು.

ಕಾವ್ಯನಾಮ: ಚಂಪಾ,
ವೃತ್ತಿ: ಲೇಖಕ, ಪ್ರಾಧ್ಯಾಪಕ, ಸಂಘಟನಕಾರರು, ಅಂಕಣಕಾರರು

ಪ್ರಕಾರ/ಶೈಲಿ: ಕಥೆ, ಕವನ, ಕಾದಂಬರಿ, ನಾಟಕ, ಸಂಪಾದನೆ,
ಕನ್ನಡ ಸಾಹಿತ್ಯ, ಸಾಹಿತ್ಯ ಚಳುವಳಿ
ಬಂಡಾಯ, ನವೋದಯವ
ಜೀವನ ಅಧ್ಯಾಪನದ ಜೊತೆಗೆ ಬರಹ ಕಾವ್ಯ ನಾಟಕ ಸಂಪಾದನೆ
ಸಂಕ್ರಮಣ ಕನ್ನಡ ಹೋರಾಟ
ಜವಾಬ್ಧಾರಿಗಳು, ಪ್ರಶಸ್ತಿ ಗೌರವಗಳು, ಪ್ರಸಿದ್ಧ ಗೀತೆಗಳು
ವಿನೋದ ಪ್ರವೃತ್ತಿ ಅವರದಾಗಿತ್ತು.

‘ಚಂಪಾ’ ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ-ನಾಟಕಕಾರ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ’ಚಂಪಾ’ ಅವರದು.
ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು (1939). ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ. ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ, ಹಾವೇರಿಯಲ್ಲಿ ಹೈಸ್ಕೂಲು ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ ‘ಚಂಪಾ’ ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು.

’ನಮಗೆಲ್ಲ ಕಾವ್ಯಲೋಕದ ರಹಸ್ಯಗಳನ್ನು ತೋರಿಸಿಕೊಟ್ಟವರು ಗುರು ವಿ.ಕೃ. ಗೋಕಾಕರು’ ಎನ್ನುವ ಚಂಪಾ ಅವರು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ಅವರ ಪ್ರಥಮ ಕವನ ಸಂಕಲನ ‘ಬಾನುಲಿ’ (1960) ಪ್ರಕಟವಾಯಿತು.
ನವ್ಯ ಮಾರ್ಗದಲ್ಲಿ ತಮ್ಮ ಕಾವ್ಯ ಕೃಷಿ ಆರಂಭಿಸಿದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ಎಂ.ಎ. (1962) ಪದವೀಧರರು. ತಾವು ಓದಿದ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ‘ಚಂಪಾ’ ಅವರು ಗೆಳೆಯರಾದ ಗಿರಡ್ಡಿ ಗೋವಿಂದರಾಜು, ಸಿದ್ದಲಿಂಗ ಪಟ್ಟಣ ಶೆಟ್ಟಿ ಜೊತೆ ಸೇರಿ ’ಸಂಕ್ರಮಣ’ (1964)ಎಂಬ ದ್ವೈಮಾಸಿಕ ಸಾಹಿತ್ಯ ಪತ್ರಿಕೆ ಆರಂಭಿಸಿದರು, 1976 ರವರೆಗೂ ‘ಸಂಕ್ರಮಣ’. ಈ ಮೂರು ಜನರ ಸಂಪಾದಕತ್ವದಲ್ಲಿ ಪ್ರಕಟವಾಯಿತು. ನಂತರ ಮುಂದೆ ‘ಚಂಪಾ’ ಅವರೇ ಅದರ ಜವಾಬ್ದಾರಿ ವಹಿಸಿಕೊಂಡರು. ಐದು ದಶಕಗಳ ಸತತವಾಗಿ ಪ್ರಕಟವಾದ ಹಿರಿಮೆ ‘ಸಂಕ್ರಮಣ’ದ್ದು.

ಹೈದರಾಬಾದಿನ ವಿದೇಶಿ ಭಾಷಾ ಕೇಂದ್ರೀಯ ಸಂಸ್ಥೆಯಿಂದ ಇಂಗ್ಲಿಷ್‌ನಲ್ಲಿ ಡಿಪ್ಲೊಮಾ ಪದವಿ (1969) ಪಡೆದಿರುವ ಅವರು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿ ಎಂ.ಎ. ಪದವಿ ಗಳಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾಗಿ, ಛೇರ್‌ಮನ್ ಆಗಿ ನಿವೃತ್ತರಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.

ಎಡಪಂಥೀಯ ರಾಜಕೀಯ ಸಿದ್ಧಾಂತಗಳಿಗೆ ಬದ್ಧವಾಗಿರುವ ಲೋಹಿಯಾವಾದಿ ‘ಚಂಪಾ’ ಅವರು ತುರ್ತುಪರಿಸ್ಥಿತಿಯ ದಿನಗಳಲ್ಲಿ, ಅದನ್ನು ಪ್ರತಿಭಟಿಸಿ, ಜೆ.ಪಿ. ಚಳುವಳಿ ಬೆಂಬಲಿಸಿ ಜೈಲುವಾಸ ಅನಿಭವಿಸಿದ್ದಾರೆ. ಗೋಕಾಕ್ ಚಳುವಳಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಅವರು ಕರ್ನಾಟಕದ ಭಾಷಾ ಚಳುವಳಿಯಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದರು.

“ಚಂಪಾ” ರವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಶ್ರೇಷ್ಠ ಬಂಡಾಯ ಸಾಹಿತಿಗಾರರನ್ನ ಕಳೆದುಕೊಂಡಂತಾಗಿದೆ.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.