Home / featured / ಮಹಾಯೋಗಿ ಶ್ರೀ ವೇಮನ ಜಯಂತಿ

ಮಹಾಯೋಗಿ ಶ್ರೀ ವೇಮನ ಜಯಂತಿ

ಮಹಾಯೋಗಿ ವೇಮನ 15ನೇ ಶತಮಾನದ ತೆಲಗು ಕವಿಗಳಲ್ಲಿ ಪ್ರಮುಖ ಹೆಸರು. ಕನ್ನಡದ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ಮಹಾಕವಿ, ಮಹಾಯೋಗಿಯಾಗಿದ್ದಾರೆ.

ಮಹಾಯೋಗಿ ವೇಮನ ಅವರು ಲಿಂಗಾಯತದ ಧರ್ಮಕ್ಕೆ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲ ಸಂಶೋಧಕರು ವೇಮನರು ಮೂಲತಃ ರೈತರೆಂದು ಹೇಳಿದರೆ, ಕೆಲವರು ಇವರು ಕೊಂಗವೀಡು ಸಂಸ್ಥಾನದ ರಾಜ ಗದ್ದಮ್ ವೇಮ ಅವರ ಕಿರಿಯ ಪುತ್ರನೆಂದು ಹೇಳುತ್ತಾರೆ. ಆಂಧ್ರದ ಅನಂತಪುರ ಜಿಲ್ಲೆಯ ಕದಿರಿ ಪಲ್ಲಿಯಲ್ಲಿ ಯೋಗಿ ವೇಮನ ಅವರ ಸಮಾಧಿ ಇದೆ.

ಕಲ್ಲು ಕಲ್ಲೇ;
ಒಂದು ವೃಕ್ಷ ವೃಕ್ಷವೇ;
ಒಂದು ಪ್ರಾಣಿ ಪ್ರಾಣಿಯೇ;
ಒಬ್ಬ ಮಾನವನು ಮಾನವನೇ;
ಶಿವನು ಮಾತ್ರವೇ ಶಿವನು.. ನಮ್ಮಲ್ಲಿರುವ ಶಿವನನ್ನು ನಾವು ಏಕೆ ಗುರುತಿಸಲಾಗುತ್ತಿಲ್ಲ.? ಎಂದು ನೊಂದುಕೊಳ್ಳುತ್ತಾರೆ ಯೋಗಿ ವೇಮನರು..

ದೊರೆತಿರುವ ದಾಖಲೆಗಳ ಪ್ರಕಾರ ವೇಮನರು ಸಿದ್ಧಾಪುರ ಸಮೀಪದ ಕುಮಾರಗಿರಿಯ ವೇಮರೆಡ್ಡಿಯ ಮಗ. ವೇಮನ ಹೆತ್ತವರಿಂದ, ಒಡಹುಟ್ಟಿದವರಿಂದ, ಸಂಬಂಧಿಕರಿಂದ ಅನಾದರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗುತ್ತಾನೆ. ಪರಸ್ತ್ರೀ ಸಂಗದಲ್ಲಿ ವಿಷಯಾಸಕ್ತನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಸಹವಾಸ ಮಾಡಿ, ಮನೆಯ ಸಂಪತ್ತು ಹಾಳುಗೆಡವುತ್ತಾನೆ. ವೇಮನನಿಗೆ ಅತ್ತಿಗೆಯಾಗಿ ಬಂದ *”ಹೇಮರೆಡ್ಡಿ ಮಲ್ಲಮ್ಮ”* ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲಳಾಗುತ್ತಾರೆ.

ದುಶ್ಚಟಗಳ ದಾಸನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಮನದಾಸೆ ಈಡೇರಿಸಲು, ಅತ್ತಿಗೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಬೇಕೆಂದು ಕೇಳುತ್ತಾನೆ. ಹೇಮರೆಡ್ಡಿ ಮಲ್ಲಮ್ಮ ಮೈದುನನಾದ ವೇಮನನಿಗೆ ಮೂಗುತಿ ಕೊಡಲು ಒಪ್ಪಿ ಕರಾರೊಂದನ್ನು ವಿಧಿಸುತ್ತಾಳೆ.

“ವೇಮನ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಆ ವೇಶ್ಯಾಸ್ತ್ರೀಗೆ ಕೊಡುವಾಗ, ಆಕೆ ನಗ್ನಳಾಗಿ ಬಂದು ವೇಮನ ಕುಳಿತದ್ದ ಮಂಚವನ್ನು ಮೂರು ಸುತ್ತು ಸುತ್ತಬೇಕು. ಮೂರು ಸುತ್ತು ಹಾಕಿದ ನಂತರ ಹಿಂಬದಿಗೆ ಬಾಗಿ, ಎರಡು ಕಾಲುಗಳ ನಡುವೆ ಬಗ್ಗಿ ಕೈ ಚಾಚಿ ವೇಮನನಿಂದ ಮೂಗುತಿಯನ್ನು ಪಡೆಯಬೇಕು. ಅವಳು ಆ ಮೂಗುತಿಯನ್ನು ಪಡೆಯುವವರೆಗೂ ವೆಮನ ಆಕೆಯ ನಗ್ನದೇಹವನ್ನು ತದೇಕ ಚಿತ್ತನಾಗಿ ನೋಡಬೇಕು”. ವೇಮನ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಮಾತನ್ನು ಚಾಚು ತಪ್ಪದೆ ಪಾಲಿಸುತ್ತಾನೆ.

ವೇಮನ ತನ್ನ ಪ್ರೇಯಸಿಯ ನಗ್ನ ಶರೀರವನ್ನು ಕಂಡೊಡನೆ ಅವನೊಳಗೆ ಭಯಂಕರವಾದ ಜಿಗುಪ್ಸೆ, ಅಸಹ್ಯಭಾವನೆ ಆವರಿಸಿ ಒಡನೆಯೇ ಗಾಭರಿಗೊಂಡು ಕಣ್ಮುಚ್ಚಿ –

ತಾಯಿಯ ಗರ್ಭದಿಂದ ತಾಂ ಬರುವ ಸಮಯದಿ
ಮೊದಲು ವಸ್ತ್ರಮಿಲ್ಲ, ತುದಿಗುಮಿಲ್ಲ
ನಡುವೆ ಬಟ್ಟೆಯುಡುವುದೇಕೆಂದು ತಿಳಿಯಿರಿ
ವಿಶ್ವತೋಭಿರಾಮ ಕೇಳುವೆ ಮಾ||

ಎಂದು ತತ್ವ್ತಜ್ಞಾನ ಹೇಳುತ್ತಾ, ತಾನು ನಗ್ನನಾಗಿ ವೈರಾಗಿಯಂತೆ ಕಾಲ್ತೆಗೆದು ಹೊರ ಹೊರಟವನು, ಮುಂದೆ ತನ್ನ ಸಾಧನೆಯಿಂದ ಮಹಾಯೋಗಿಯಾದನು.

ತಿರುಪತಿಗೆ ಹೋಗುವವನೇ ದೇವನು. ಕಾಶಿಗೆ ಹೋಗುವವನೇ ದೇವನು. ಮಕ್ಕಾಗೆ ಹೋಗುವವನೇ ದೇವನು. ಯಾರು ದೇವನು ? ಎಲ್ಲಿದ್ದಾರೆ ದೇವರು ? ಎಂದು ಹುಡುಕುವವನೇ ದೇವನು. ’ಮುಕ್ತಿ’ ಎಂಬುವುದು ಹತ್ತು ಲಕ್ಷಗಳ ಗಾವುದ ದೂರದಲ್ಲಿಲ್ಲ. ತ್ರಿಕರಣಶುದ್ಧಿ ಎಂಬುವುದು ಮೊದಲನೆಯ ಮೆಟ್ಟಿಲು. ಧ್ಯಾನ ಎಂಬುವುದು ಎರಡನೆಯ ಮೆಟ್ಟಲು. ನಿಜವಾಗಲೂ ನಾವು ಮುಕ್ತಿಯನ್ನು ಕೋರುವವರಾದರೇ ನಿಜವಾಗಲೂ ಧ್ಯಾನ ಮಾಡುತ್ತೇವೆ.

“ಏತಕ್ಕಯ್ಯಾ ಮಾನವ ಜನ್ಮ ?”

ಮನಸ್ಸನ್ನು ಮರೆಸುವುದೇ ಧ್ಯಾನ. ಮನಸ್ಸನ್ನು ಮರೆಸಿದಾಗಲೇ ಆತ್ಮ ಪ್ರತ್ಯಕ್ಷವಾಗುತ್ತದೆ. ಒಂದು ಕಡೆ ಸಂಗೀತ ಇರುತ್ತದೆ, ಮತ್ತೊಂದು ಕಡೆ ಧ್ಯಾನ ಇರುತ್ತದೆ. ಇದರ ಹೆಸರೇ ಸಂಗೀತ ಧ್ಯಾನ ಯಜ್ಞ. ಎಲ್ಲಿ ’ನಿನ್ನದು’, ’ನನ್ನದು’ ಎಂಬುವ ಭಾವನೆ ಇಲ್ಲದೆ ಎಲ್ಲ ಮರೆತು ಹೋಗುತ್ತೇವೊ ಅಲ್ಲಿ ಆತ್ಮ ಪ್ರತ್ಯಕ್ಷವಾಗುತ್ತದೆ, ವಿರಾಜಿಸುತ್ತದೆ. ’ಆಧ್ಯಾತ್ಮಿಕತೆ’ ಎಂದರೆ ’ನಾನು’, ’ನನ್ನದು’ ಎಂಬುವುದನ್ನು ಬಿಡುವುದು. ಭಗವದ್ಗೀತೆಯಲ್ಲಿ ಹೇಳಿದರೂ ಸರಿ ಸಿನಿಮಾ ಹಾಡಿನಲ್ಲಿ ಹೇಳಿದರೂ ಸರಿ, ಸತ್ಯ ಒಂದೇ.

ಎರಡು ಕಣ್ಣಿರುವವನು, ಮೂರು ಕಣ್ಣಿನವನಾಗಬೇಕು, ’ಮುಕ್ಕಣ್ಣ’ ನಾಗಬೇಕು. ಯಾವಾಗ ಮನಸ್ಸು ಶೂನ್ಯವಾಗುತ್ತದೆಯೋ ವಿಶೇಷವಾಗಿ ಪ್ರಾಣಶಕ್ತಿ ನಮ್ಮಲ್ಲಿ ಪ್ರವಹಿಸುತ್ತದೆ. ಅದೇ ನಮಗೆ ಬೇಕಾಗಿರುವುದು. ನಾವೇ ದೇವರುಗಳು. ಜೀವನೇ ದೇವನು, ದೇಹವೇ ದೇವಾಲಯ, ಆತ್ಮವೇ ಪರಬ್ರಹ್ಮ, ಇದೇ ಸತ್ಯ. ಯೋಗಿ ವೇಮನ ನಮಗೆ ಎಷ್ಟು ಧ್ಯಾನ ಸಾರವನ್ನು, ಆತ್ಮಜ್ಞಾನ ಸಾರವನ್ನು ನೀಡಿದರೋ ಹೇಳಲಾಗುವುದೇ ಇಲ್ಲ.

ಶರಣ: ಶಶಿಕುಮಾರ್ ಎಸ್.ಜೆ

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.